- ಬನ್ನೂರು ಸಂಜೀವಿನಿ ಗ್ರಾಪಂ ಮಟ್ಟದ ವಾರ್ಷಿಕ ಸಭೆ
ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರಸಂಜೀವಿನಿ ಒಕ್ಕೂಟ ಮಂದಿನ ದಿನಗಳಲ್ಲಿ ಹಲವಾರು ಕಾರ್ಯಕ್ರಮ ರೂಪಿಸಲಿದೆ ಎಂದು ಎನ್.ಆರ್.ಎಲ್.ಎಂ. ಕಾರ್ಯಕ್ರಮ ವ್ಯವಸ್ಥಾಪಕ ಸುಬ್ರಮಣ್ಯ ತಿಳಿಸಿದರು.
ಬುಧವಾರ ಬನ್ನೂರು ಸಂಜೀವಿನಿ ಗ್ರಾಪಂ ಮಟ್ಟದ 2024-25 ನೇ ಸಾಲಿನ ವಾರ್ಷಿಕ ಮಹಾ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಪಂ ವ್ಯಾಪ್ತಿಯ ಮಹಿಳೆಯರು ಸಂಜೀವಿನಿ ಒಕ್ಕೂಟಕ್ಕೆ ಸೇರ್ಪಡೆಗೊಳ್ಳಬೇಕು. ಒಕ್ಕೂಟದ ಸಭೆಗಳಲ್ಲಿ ಸದಸ್ಯರು ಭಾಗವಹಿಸಿ ಮಾಹಿತಿ ಪಡೆಯಬೇಕು. ಪ್ರತಿ ವರ್ಷ ಆರ್ಥಿಕ ವರ್ಷದ ಆಂತರಿಕ ಮತ್ತು ಶಾಸನಬದ್ಧ ಲೆಕ್ಕ ಪರಿಶೋಧನೆ ಮಾಡಿಸಿ ಮಹಾ ಸಭೆ ನಡೆಸಬೇಕು. ಒಕ್ಕೂಟದ ವಾರ್ಷಿಕ ಆದಾಯ, ವೆಚ್ಚಗಳ ಬಗ್ಗೆ ಚರ್ಚೆ ನಡೆಸಿ ಅನುಮೋದನೆ ಪಡೆಯಬಹುದು. ಸಂಜೀವಿನಿ ಒಕ್ಕೂಟ ಚೆನ್ನಾಗಿ ಕೆಲಸ ಮಾಡುತ್ತಿದೆ. ಸಂಘದ ಸದಸ್ಯರು ಗ್ರಾಮ ವ್ಯಾಪ್ತಿಯಲ್ಲಿ ನಡೆಯುವ ಗ್ರಾಮ ಸಭೆಗಳಲ್ಲಿ ಭಾಗವಹಿಸಿ ಗ್ರಾಪಂನಿಂದ ಸಿಗುವ ಸೌಲಭ್ಯ ಪಡೆಯಬಹುದು ಎಂದರು. ಸಭೆ ಅಧ್ಯಕ್ಷತೆ ವಹಿಸಿದ್ದ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ರೋಹಿಣಿ ಮಾತನಾಡಿ ಒಕ್ಕೂಟದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಸಂಘದ ಸದಸ್ಯರು ಉಪಯೋಗಿಸಿಕೊಳ್ಳಬೇಕು. ಬನ್ನೂರು ಒಕ್ಕೂಟವನ್ನು ತಾಲೂಕಿನಲ್ಲಿ ಮಾದರಿ ಒಕ್ಕೂಟವನ್ನಾಗಿ ಮಾಡಲು ಎಲ್ಲರೂ ಸಹಕಾರ ನೀಡಬೇಕು ಎಂದರು.ಗ್ರಾಪಂ ಪಿಡಿಒ ರಾಘವೇಂದ್ರ ಮಾತನಾಡಿ, ಸ್ವಸಹಾಯ ಸಂಘದ ಸದಸ್ಯರು ಗ್ರಾಪಂನಲ್ಲಿ ನಡೆಯುವ ಎಲ್ಲಾ ಸಭೆಗಳಲ್ಲಿ ಭಾಗವಹಿಸಬೇಕು. ವಿಶೇಷ ಗ್ರಾಮ ಸಭೆ, ಮಹಿಳಾ ಗ್ರಾಮ ಸಭೆಗಳಲ್ಲಿ ಭಾಗವಹಿಸಿ ಸರ್ಕಾರದ ಸೌಲಭ್ಯಗಳ ಬಗ್ಗೆ ತಿಳಿದುಕೊಳ್ಳಬಹುದು ಎಂದರು.ಸಭೆಯಲ್ಲಿ ಖಜಾಂಚಿ ಸುಪರ್ಣ, ಕಾಯದರ್ಶಿ ಕೌಶಲ್ಯ, ಉಪಾಧ್ಯಕ್ಷೆ ಮಮತಾ ಎನ್.ಆರ್.ಎಲ್.ಎಂ.ನ ವಲಯ ಮೇಲ್ವೀಚಾರಕ ಗಿರೀಶ್, ಸಿಬ್ಬಂದಿ ವಿನುತ, ಶೈನಿ, ಮುಖ್ಯ ಪುಸ್ತಕ ಬರಹಗಾರ ಸ್ವರ್ಣ, ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ ಸ್ವರ್ಣ, ಪೂರ್ಣಿಮ, ಜಾನಕಿ,ಕೃಷಿ ಸಖಿ ವೀಣಾ, ಪಶು ಸಖಿ ನೇತ್ರಾವತಿ ಉಪಸ್ಥಿತರಿದ್ದರು.