ಬಾಳೆಹೊನ್ನೂರಿಗೆ ಶೀಘ್ರ ಸಂಜೀವಿನಿ ಭವನ: ಟಿ.ಡಿ.ರಾಜೇಗೌಡ

KannadaprabhaNewsNetwork |  
Published : Nov 26, 2025, 01:30 AM IST
೨೫ಬಿಹೆಚ್‌ಆರ್ ೨: ಬಾಳೆಹೊನ್ನೂರಿನ ಬಿ.ಕಣಬೂರು ಗ್ರಾಪಂನಲ್ಲಿ ನಡೆದ ಸಂಜೀವಿನಿ ಒಕ್ಕೂಟದ ಸಭೆಯಲ್ಲಿ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಶಾಸಕ ಟಿ.ಡಿ.ರಾಜೇಗೌಡ ಅವರಿಗೆ ನೀಡಲಾಯಿತು. ವಿಶಾಲಶೆಟ್ಟಿ, ರವಿಚಂದ್ರ, ಮಹಮ್ಮದ್ ಹನೀಫ್, ಚಂದ್ರಮ್ಮ, ನಟರಾಜ್, ರಂಜಿತಾ ಇದ್ದರು. | Kannada Prabha

ಸಾರಾಂಶ

ಬಾಳೆಹೊನ್ನೂರು ಪಟ್ಟಣದಲ್ಲಿ ಶೀಘ್ರದಲ್ಲಿ ಸಂಜೀವಿನಿ ಭವನ ನಿರ್ಮಿಸಿಕೊಡುವುದಾಗಿ ಶಾಸಕ ಟಿ.ಡಿ.ರಾಜೇಗೌಡ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು

ಪಟ್ಟಣದಲ್ಲಿ ಶೀಘ್ರದಲ್ಲಿ ಸಂಜೀವಿನಿ ಭವನ ನಿರ್ಮಿಸಿಕೊಡುವುದಾಗಿ ಶಾಸಕ ಟಿ.ಡಿ.ರಾಜೇಗೌಡ ಭರವಸೆ ನೀಡಿದರು.ಬಿ.ಕಣಬೂರು ಗ್ರಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ಬಿ.ಕಣಬೂರು ಸಂಜೀವಿನಿ ಒಕ್ಕೂಟದ ಸಭೆಯಲ್ಲಿ ಮಾತನಾಡಿದರು. ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಳ್ಳಲು ಸಂಜೀವಿನಿ ಒಕ್ಕೂಟ ಪೂರಕವಾಗಿದ್ದು, ಮಹಿಳೆಯರು ಸಕ್ರಿಯವಾಗಿ ಇದರಲ್ಲಿ ಪಾಲ್ಗೊಳ್ಳುವ ಮೂಲಕ ವಿವಿಧ ಯೋಜನೆಗಳ ಪ್ರಯೋಜನ ಪಡೆಯಬೇಕು. ಒಕ್ಕೂಟದ ಸದಸ್ಯರ ಬೇಡಿಕೆಯಂತೆ ಶೀಘ್ರವಾದ ಸಂಜೀವಿನಿ ಭವನ ನಿರ್ಮಿಸಲು ಕ್ರಮಕೈಗೊಳ್ಳಲಾಗುವುದು. ಇದರೊಂದಿಗೆ ಅಕ್ಕ ಕೆಫೆ ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಒಕ್ಕೂಟದ ಅಧ್ಯಕ್ಷೆ ವಿಶಾಲ ಆರ್.ಶೆಟ್ಟಿ ಮಾತನಾಡಿ, ಸಂಜೀವಿನಿ ಭವನ ನಿರ್ಮಾಣ ಹಾಗೂ ಅಕ್ಕ ಕೆಫೆ ನಿರ್ಮಾಣಕ್ಕೆ ಕ್ಷೇತ್ರದ ಶಾಸಕರು ಆದಷ್ಟು ಬೇಗ ಕ್ರಮಕೈಗೊಳ್ಳಬೇಕು. ಇದರೊಂದಿಗೆ ಪಟ್ಟಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ ಶಾಸಕರು ಗಮನಹರಿಸಿ ಭವನ ನಿರ್ಮಿಸಬೇಕು. ಪಟ್ಟಣದಲ್ಲಿ ಪ್ರಥಮ ದರ್ಜೆ ಕಾಲೇಜು ಇಲ್ಲದೇ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆಯಾಗಿದೆ ಎಂದು ತಿಳಿಸಿದರು.ಬಿ.ಕಣಬೂರು ಗ್ರಾಪಂ ಅಧ್ಯಕ್ಷ ರವಿಚಂದ್ರ, ಉಪಾಧ್ಯಕ್ಷೆ ರಂಜಿತಾ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಮ್ಮ, ಜಿಪಂ ಮಾಜಿ ಉಪಾಧ್ಯಕ್ಷ ಎಂ.ಎಸ್.ಚನ್ನಕೇಶವ್, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹನೀಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೇರುಬೈಲು ನಟರಾಜ್, ಗ್ರಾಪಂ ಸದಸ್ಯರಾದ ಎಂ.ಎಸ್.ಅರುಣೇಶ್, ಬಿ.ಕೆ.ಮಧುಸೂದನ್, ಇಬ್ರಾಹಿಂ ಶಾಫಿ, ಸರಿತಾ, ಜಯಂತಿ ಮತ್ತಿತರರು ಹಾಜರಿದ್ದರು.೨೫ಬಿಹೆಚ್‌ಆರ್ ೨:

ಬಾಳೆಹೊನ್ನೂರಿನ ಬಿ.ಕಣಬೂರು ಗ್ರಾಪಂನಲ್ಲಿ ನಡೆದ ಸಂಜೀವಿನಿ ಒಕ್ಕೂಟದ ಸಭೆಯಲ್ಲಿ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಶಾಸಕ ಟಿ.ಡಿ.ರಾಜೇಗೌಡ ಅವರಿಗೆ ನೀಡಲಾಯಿತು. ವಿಶಾಲಶೆಟ್ಟಿ, ರವಿಚಂದ್ರ, ಮಹಮ್ಮದ್ ಹನೀಫ್, ಚಂದ್ರಮ್ಮ, ನಟರಾಜ್, ರಂಜಿತಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ರಾಜಕಾರಣಕ್ಕೆ ಎಚ್‌ಡಿಕೆ ಪರೋಕ್ಷ ಇಂಗಿತ
ಜೈಲಿನ ಬ್ಯಾರಕ್‌ಗಳಿಗೆ ಸಿಸಿಟಿವಿ ಕ್ಯಾಮೆರಾ!