ವಿಕಸಿತ ಭಾರತ ಉದ್ಯೋಗ ಮತ್ತು ಆಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಕಾಂಗ್ರೆಸ್‌ನ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.
ಪುತ್ತೂರು: ವಿಕಸಿತ ಭಾರತ ಉದ್ಯೋಗ ಮತ್ತು ಆಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಕಾಂಗ್ರೆಸ್‌ನ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.
ಅವರು ಬುಧವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಭಾರತವನ್ನು ೨೦೪೭ರ ಹೊತ್ತಿಗೆ ಸುಪರ್ ಪವರ್ ದೇಶವಾಗಿ ಪರಿವರ್ತಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಯೋಜನೆಗಳನ್ನು ರೂಪಿಸುತ್ತಿದ್ದು, ಅದನ್ನು ಸಹಿಸದ ಕಾಂಗ್ರೆಸ್ ಕೇಂದ್ರ ಸರಕಾರದ ವಿರುದ್ಧ ಭ್ರಷ್ಟಾಚಾರ, ವೋಟ್ ಚೋರಿ, ಇನ್ನಿತರ ಹುರುಳಿಲ್ಲದ ಆರೋಪ, ಅಪಪ್ರಚಾರ ನಡೆಸಿ ತನ್ನ ಮುಖಕ್ಕೆ ಮಸಿ ಬಳಿದುಕೊಳ್ಳುತ್ತಿದೆ ಎಂದರು.ಕೇಂದ್ರ ಸರ್ಕಾರ ಸ್ವಾತಂತ್ರ‍್ಯ ಬಂದು ಈ ದೇಶಕ್ಕೆ ೧೦೦ ವರ್ಷ ಸಲ್ಲಿಕೆಯಾಗುವ ಸಂದರ್ಭದಲ್ಲಿ ವಿಕಸಿತ ಭಾರತ ಕಲ್ಪನೆಯಲ್ಲಿ ಈ ಯೋಜನೆಯಲ್ಲಿ ಒಂದಷ್ಟು ಪರಿಷ್ಕರಣೆ ಮಾಡಿ ಹೆಚ್ಚು ಪರಿಣಾಮಕಾರಿಯಾಗಿ ಪಂಚಾಯಿತಿ ಮಟ್ಟದಲ್ಲಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ವಿಕಸಿತ ಭಾರತ ಉದ್ಯೋಗ, ಆಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ (ವಿಬಿಜಿಆರ್‌ಎಎಮ್‌ಜಿ) ಜಾರಿಗೆ ತಂದಿದೆ. ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿತ್ತು. ಗ್ರಾಮೀಣ ಭಾಗದಲ್ಲಿ ಅದು ಪರಿಣಾಮಕಾರಿಯಾಗಿ ಅನುಷ್ಠಾನ ಆಗುತ್ತಿರಲಿಲ್ಲ. ಇದನ್ನು ಮನಗಂಡು ಯೋಜನೆಯಲ್ಲಿ ಬದಲಾವಣೆ ತಂದಿದೆ. ಹಿಂದೆ ಉದ್ಯೋಗ ಸೃಷ್ಟಿ ಗುರಿಯಾಗಿತ್ತು. ಬದಲಾದ ಯೋಜನೆಯಲ್ಲಿ ಇದೀಗ ಗ್ರಾಮೀಣ ಉದ್ಯೋಗ ಸೃಷ್ಟಿ ಮಾಡಲಾಗಿದೆ. ೧೦೦ ದಿನಗಳ ಉದ್ಯೋಗ ಖಾತ್ರಿಯನ್ನು ೧೨೫ ದಿನಗಳಿಗೆ ಹೆಚ್ಚುವರಿ ಮಾಡಲಾಗಿದೆ. ಬೇಡಿಕೆಗೆ ಅನುಗುಣವಾಗಿ ಯೋಜನೆ ಕಾರ್ಯಗತಗೊಳಿಸಲಾಗಿದೆ, ಕೇಂದ್ರ ರಾಜ್ಯ ಹಂಚಿಕೆಯಲ್ಲಿ ೬೦:೪೦ ಮಾಡಲಾಗಿದೆ. ಯೋಜನೆಯಲ್ಲಿ ನೂತನ ತಂತ್ರಜ್ಞಾನವಾದ ಡಿಜಿಟಲೀಕರಣ ಅಳವಡಿಕೆ ಮಾಡಲಾಗಿದೆ. ಎಂದು ಆರೋಪಿಸಿದರು.
ಸುದ್ಧಿಗೋಷ್ಟಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು. ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ, ಗ್ರಾಮಾಂತರ ಮಂಡಲ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಲ್ನಾಡು ಗ್ರಾ.ಪಂ ಅಧ್ಯಕ್ಷೆ ಪರಮೇಶ್ವರಿ ಭಟ್, ನಾಗೇಶ್ ಟಿ.ಎಸ್ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.