ಉಡುಪಿ ಸೀರೆ ಉಳಿಸಿದ ಸಂಜೀವ ಶೆಟ್ಟಿಗಾರ್, ಸೋಮಪ್ಪ ಜತ್ತನ್ನರಿಗೆ ‘ನೇಕಾರ ರತ್ನ’ ಪ್ರಶಸ್ತಿ

KannadaprabhaNewsNetwork |  
Published : Aug 07, 2024, 01:02 AM IST
ನೇಕಾರ | Kannada Prabha

ಸಾರಾಂಶ

ಇವರಿಬ್ಬರು ಅವಿಭಜಿತ ದ.ಕ. ಜಿಲ್ಲೆಯ ಅತ್ಯಂತ ಹಿರಿಯ ಮತ್ತು ಸಕ್ರಿಯ ನೇಕಾರರು. ಸಂಜೀವ ಶೆಟ್ಟಿಗಾರ್ ಅವರು ಸುಮಾರು 74 ವರ್ಷಗಳಿಂದ ನಿರಂತರ ನೇಯ್ಗೆ ಮಾಡುತ್ತಿರುವುದು ಒಂದು ದಾಖಲೆಯಾಗಿದೆ. ಸೋಮಪ್ಪ ಜತ್ತನ್ನ ಅವರು ಕಳೆದ 66 ವರ್ಷಗಳಿಂದ ನೇಕಾರಿಕೆಯ ಕಾಯಕದಲ್ಲಿ ನಿರತರಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಪರಿಸರ ಸ್ನೇಹಿ, ಉಡುಪಿ ಸೀರೆ ನೇಕಾರಿಕೆಗೆ ನೀಡಿದ ಕೊಡುಗೆಗಾಗಿ ಹಿರಿಯ ನೇಕಾರರಾದ ಸಂಜೀವ ಶೆಟ್ಟಿಗಾರ್ (86) ಮತ್ತು ಸೋಮಪ್ಪ ಜತ್ತನ್ನ (89) ಅವರನ್ನು ತಮ್ಮ ಜೀವಮಾನದ ಸಾಧನೆಗಾಗಿ ಕದಿಕೆ ಟ್ರಸ್ಟ್ ವತಿಯಿಂದ ಕೈಮಗ್ಗ ನೇಕಾರರಿಗೆ ಕೊಡ ಮಾಡುವ ಪ್ರತಿಷ್ಠಿತ ‘ನೇಕಾರ ರತ್ನ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇವರಿಬ್ಬರು ಅವಿಭಜಿತ ದ.ಕ. ಜಿಲ್ಲೆಯ ಅತ್ಯಂತ ಹಿರಿಯ ಮತ್ತು ಸಕ್ರಿಯ ನೇಕಾರರು. ಸಂಜೀವ ಶೆಟ್ಟಿಗಾರ್ ಅವರು ಸುಮಾರು 74 ವರ್ಷಗಳಿಂದ ನಿರಂತರ ನೇಯ್ಗೆ ಮಾಡುತ್ತಿರುವುದು ಒಂದು ದಾಖಲೆಯಾಗಿದೆ. ಸೋಮಪ್ಪ ಜತ್ತನ್ನ ಅವರು ಕಳೆದ 66 ವರ್ಷಗಳಿಂದ ನೇಕಾರಿಕೆಯ ಕಾಯಕದಲ್ಲಿ ನಿರತರಾಗಿದ್ದಾರೆ.

ಇಲ್ಲಿನ ಶಿವಳ್ಳಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ಅಧ್ಯಕ್ಷರಾಗಿರುವ ಸಂಜೀವ ಶೆಟ್ಟಿಗಾರ್, ಈಗ ಅಳಿದು ಹೋದ ಮುತ್ತು ಬಾರ್ಡರ್ ನೇಯ್ಗೆಯನ್ನು 2019ರ ವರೆಗೆ ನೇಯುತ್ತಿದ್ದರು. ಈಗಲೂ ತಮ್ಮದೇ ವಿನ್ಯಾಸದ ಸೆರಗಿನಲ್ಲಿ ಬುಟ್ಟಾ ಇರುವ 60 ಕೌಂಟ್ ಸೀರೆಗಳನ್ನು ನೇಯುವುದರ ಜೊತೆಗೆ ಅನೇಕ ನೇಕಾರರಿಗೆ ಹಾಸು ಮತ್ತು ವಿನ್ಯಾಸ ಮಾಡುವ ಕೆಲಸ ಮಾಡುತ್ತಾ ಸಕ್ರಿಯರಾಗಿದ್ದಾರೆ. ನೇಕಾರರ ಸಂಘದ ಕಾರ್ಯ ಚಟುವಟಿಗಳನ್ನು ಅತ್ಯಂತ ದಕ್ಷತೆಯಿಂದ ನಿರ್ವಹಣೆ ಮಾಡುತ್ತಿದ್ದಾರೆ.

ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘದ ನಿರ್ದೇಶಕ ಸೋಮಪ್ಪ ಜತ್ತನ್ನ ಅವರು 60 ಕೌಂಟ್‌ನ ಸಣ್ಣ ಚೌಕುಳಿ ವಿನ್ಯಾಸದ ಅಪೂರ್ವ ಕಟ್ ಬಾರ್ಡರ್ ಉಡುಪಿ ಸೀರೆಗಳನ್ನು ನೇಯುತ್ತಿದ್ದಾರೆ.

ಅಳಿವಿನಂಚಿಗೆ ತಲುಪಿದ್ದ ಉಡುಪಿ ಸೀರೆ ನೇಕಾರಿಕೆ ಈಗ ಕದಿಕೆ ಟ್ರಸ್ಟ್ ಪ್ರಯತ್ನದಿಂದ ಪುನಃಶ್ಚೇತನಗೊಂಡಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಓರಿಯನ್‌ ಧರೆಗಿಳಿಯೋದು ಹೇಗೆ ?
ಗೃಹಲಕ್ಷ್ಮೀ ಹಣ ಸಾಲದ ಕಂತಿಗೆ ಕಡಿತ ಮಾಡಂಗಿಲ್ಲ : ಸಿಎಂ