ಕನ್ನಡಪ್ರಭ ವಾರ್ತೆ ಮಂಡ್ಯ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಲೋಕಸಭಾ ಚುನಾವಣೆ ಪ್ರಜಾತಂತ್ರ ವ್ಯವಸ್ಥೆಯಡಿ ಇರಬೇಕಾ, ಸರ್ವಾಧಿಕಾರಕ್ಕೆ ಒಳಗಾಗಬೇಕಾ ಎಂಬುದನ್ನು ನಿರ್ಧರಿಸುವುದಾಗಿದೆ. ಸಂವಿಧಾನ ವಿರೋಧಿ, ಧರ್ಮಾಂಧ ಬಿಜೆಪಿಯನ್ನು ಸೋಲಿಸುವುದು ಮುಖ್ಯ ಎಂದರು.
ಬಣ್ಣ ಬಣ್ಣದ ಕನಸುಗಳ ಮಹಾಪೂರ ಹರಿಸಿ ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕಳೆದ 10 ವರ್ಷಗಳಲ್ಲಿ ತನ್ನ ನಿಜ ಬಣ್ಣ ತೋರಿಸಿಕೊಂಡಿದೆ. ದೇಶದ ಪರಿಸ್ಥಿತಿ ಅಧೋಗತಿಗೆ ತಂದಿಟ್ಟಿದೆ. ಜನ ಸಾಮಾನ್ಯರ ಬದುಕನ್ನು ಪಾತಾಳಕ್ಕೆ ತುಳಿದಿದೆ. ಬೆಲೆ ಏರಿಕೆ, ಕೃಷಿ ಬಿಕ್ಕಟ್ಟು, ನಿರುದ್ಯೋಗ, ಭ್ರಷ್ಟಾಚಾರ, ಕಂಪನಿಗಳ ಲೂಟಿ, ಸಾಮಾನ್ಯರ ಸುಲಿಗೆ, ಕರ್ನಾಟಕಕ್ಕೆ ಅನ್ಯಾಯ, ಹೆಚ್ಚಿರುವ ಹಿಂಸೆ, ದಮನ, ದೌರ್ಜನ್ಯ ಧಾರ್ಮಿಕ ದೇಷ ಇವೆಲ್ಲವೂ ಈ ಸರ್ಕಾರದ ಬಳುವಳಿಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಅಧಿಕಾರಕ್ಕೆ ಬರಲು ಬೇಕಾದ ಸಾಧನೆ ಮಾಡದೆ ಜಾತಿ, ಜಾತಿಗಳ ನಡುವೆ ಜಗಳ ಹಚ್ಚುವ, ಧರ್ಮ ಧರ್ಮಗಳ ನಡುವೆ ದ್ವೇಷ ಬೆಳೆಸುವ, ದೇಶವನ್ನು ಭಾವೋದ್ರೇಕಗೊಳಿಸಿ ಮತಗಳನ್ನು ಕಬಳಿಸುವ ತಂತ್ರಗಾರಿಕೆ ಮಾರ್ಗಗಳನ್ನು ಹುಡುಕುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ 400 ಮುಟ್ಟುವುದಿರಲಿ, 200 ತಲುಪುವುದೂ ಕಷ್ಟವಿದೆ. ಜನಸಾಮಾನ್ಯರನ್ನು ಸಂಕಷ್ಟಗಳ ಕೂಪಕ್ಕೆ ತಳ್ಳಿರುವ ಬಿಜೆಪಿಗೆ ಜನ ಸೂಕ್ತ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.