ಜಿಲ್ಲಾಡಳಿತ ಭವನದಲ್ಲಿ ಸಂಕ್ರಾಂತಿ ವಸ್ತುಪ್ರದರ್ಶನ

KannadaprabhaNewsNetwork |  
Published : Jan 10, 2026, 01:30 AM IST
ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸ್ವ-ಸಹಾಯ ಗುಂಪುಗಳ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಸಚಿವ ಕೆ.ಹೆಚ್ ಮುನಿಯಪ್ಪ ಉದ್ಘಾಟಿಸಿದರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸ್ವಸಹಾಯ ಗುಂಪುಗಳ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಸಚಿವ ಕೆ.ಎಚ್ ಮುನಿಯಪ್ಪ ಉದ್ಘಾಟಿಸಿದರು.

ದೊಡ್ಡಬಳ್ಳಾಪುರ: ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸ್ವಸಹಾಯ ಗುಂಪುಗಳ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಸಚಿವ ಕೆ.ಎಚ್ ಮುನಿಯಪ್ಪ ಉದ್ಘಾಟಿಸಿದರು. ಸಂಕ್ರಾಂತಿ ಹಬ್ಬದ ಪ್ರಯುಕ್ತ ಸ್ವಸಹಾಯ ಗುಂಪುಗಳ ಉತ್ಪನ್ನಗಳಿಗೆ ಮಾರುಕಟ್ಟೆಯನ್ನು ಕಲ್ಪಿಸುವುದು, ಗ್ರಾಮೀಣ ಮಹಿಳಾ ಉದ್ದಿಮೆದಾರರು ಉತ್ಪಾದಿಸಿದ ಉತ್ಪನ್ನಗಳನ್ನು ಖರೀದಿಸಿ, ಮಹಿಳಾ ಉದ್ದಿಮೆದಾರರನ್ನು ಪ್ರೋತ್ಸಾಹಿಸುವುದು, ಮಹಿಳೆಯರು ಸ್ವಾವಲಂಬಿಯಾಗಿ ದುಡಿದು ಆರ್ಥಿಕವಾಗಿ ಸಧೃಡರಾಗಬೇಕು ಎನ್ನುವ ಉದ್ದೇಶದಿಂದ ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಸಹಯೋಗದೊಂದಿಗೆ ಸ್ವಸಹಾಯ ಗುಂಪುಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ವಿವಿಧ ಸ್ವ-ಸಹಾಯ ಗುಂಪುಗಳು ಉತ್ಪಾದಿಸಿರುವ ಕರಕುಶಲ ವಸ್ತುಗಳು, ತಿಂಡಿ ತಿನಿಸು, ಹಪ್ಪಳ, ಉಪ್ಪಿನಕಾಯಿ, ಖಾರದ ಪುಡಿ ಹಾಗೂ ದೇಶಿಯವಾಗಿ ತಯಾರಿಸಿದ ಆಹಾರ ಪದಾರ್ಥಗಳು ಸೇರಿದಂತೆ ವಿವಿಧ ಬಗೆಯ ಉತ್ಪನ್ನಗಳನ್ನು ಸಚಿವರು ಪರಿಶೀಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ