ತಾಲೂಕು ಒಕ್ಕಲಿಗರ ಮಹಿಳಾ ಸಂಘದ ವತಿಯಿಂದ ಸಂಕ್ರಾಂತಿ ಸುಗ್ಗಿ ಸಂಭ್ರಮ, ಬಾಲಗಂಗಾಧರನಾಥ ಸ್ವಾಮೀಜಿ ಪುಣ್ಯಸ್ಮರಣೆ ಹಾಗೂ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ನಮ್ಮ ಪರಂಪರೆ, ಸಂಸ್ಕೃತಿ ಮತ್ತು ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ನಮ್ಮದಾಗಿದ್ದು, ಸಂಘದ ಮೂಲಕ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕನ್ನಡಪ್ರಭವಾರ್ತೆ ಬೇಲೂರು
ತಾಲೂಕು ಒಕ್ಕಲಿಗರ ಮಹಿಳಾ ಸಂಘದ ವತಿಯಿಂದ ಸಂಕ್ರಾಂತಿ ಸುಗ್ಗಿ ಸಂಭ್ರಮ, ಬಾಲಗಂಗಾಧರನಾಥ ಸ್ವಾಮೀಜಿ ಪುಣ್ಯಸ್ಮರಣೆ ಹಾಗೂ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪುರಸಭೆ ಅಧ್ಯಕ್ಷೆ ಉಷಾ ಸತೀಶ್, ಸಂಕ್ರಾಂತಿ ಹಬ್ಬವು ಕೃಷಿ ಸಂಸ್ಕೃತಿ ಹಾಗೂ ಶ್ರಮದ ಗೌರವವನ್ನು ಸಾರುವ ಹಬ್ಬವಾಗಿದ್ದು, ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾಜದಲ್ಲಿ ಏಕತೆ, ಸಂಸ್ಕೃತಿ ಮತ್ತು ಪರಂಪರೆಯ ಮೌಲ್ಯಗಳನ್ನು ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಬಾಲಗಂಗಾಧರನಾಥ ಸ್ವಾಮೀಜಿ ಸಮಾಜಮುಖಿ ಸೇವೆ ಹಾಗೂ ಕುವೆಂಪು ಅವರ ಮಾನವೀಯ ಮೌಲ್ಯಗಳು ಇಂದಿನ ಪೀಳಿಗೆಗೆ ದಾರಿ ದೀಪವಾಗಿವೆ ಎಂದರು. ಒಕ್ಕಲಿಗರ ಸಂಘದ ಅಧ್ಯಕ್ಷೆ ಭಾರತೀಗೌಡ ಮಾತನಾಡಿ, ಒಕ್ಕಲಿಗರ ಮಹಿಳಾ ಸಂಘವು ಸಮಾಜದ ಸಬಲೀಕರಣ, ಸಂಸ್ಕೃತಿ ಸಂರಕ್ಷಣೆ ಹಾಗೂ ಮಹಿಳೆಯರ ಏಳಿಗೆಗೆ ನಿರಂತರ ಶ್ರಮಿಸುತ್ತಿದ್ದು, ಇಂತಹ ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳು ಒಗ್ಗಟ್ಟಿನ ಬಲ ಹೆಚ್ಚಿಸುತ್ತವೆ. ನಮ್ಮ ಪರಂಪರೆ, ಸಂಸ್ಕೃತಿ ಮತ್ತು ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ನಮ್ಮದಾಗಿದ್ದು, ಸಂಘದ ಮೂಲಕ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಪುಣೆ ಹರಿಣಿ ಗಣೇಶ್ ಮಾತನಾಡಿ, ಇಂದಿನ ಒತ್ತಡದ ಬದುಕಿನಲ್ಲಿ ಮನಸ್ಸಿನ ಶಾಂತಿ ಹಾಗೂ ಆತ್ಮಸ್ಥೈರ್ಯಕ್ಕೆ ಧ್ಯಾನ ಅತ್ಯಂತ ಅಗತ್ಯವಾಗಿದೆ. ಧ್ಯಾನದಿಂದ ಏಕಾಗ್ರತೆ ಹೆಚ್ಚುವುದರೊಂದಿಗೆ ಮನಸ್ಸಿಗೆ ಸ್ಥಿರವಾಗುತ್ತದೆ, ಆರೋಗ್ಯವೂ ಸುಧಾರಿಸುತ್ತದೆ ಎಂದರು. ಪ್ರತಿದಿನ ಸ್ವಲ್ಪ ಸಮಯ ಧ್ಯಾನಕ್ಕೆ ಮೀಸಲಿಟ್ಟರೆ ವ್ಯಕ್ತಿತ್ವ ವಿಕಾಸ ಸಾಧ್ಯವಾಗುತ್ತದೆ. ವಿಶೇಷವಾಗಿ ಮಹಿಳೆಯರು ಧ್ಯಾನವನ್ನು ಜೀವನದ ಅವಿಭಾಜ್ಯ ಅಂಗವಾಗಿಸಿಕೊಂಡರೆ ಕುಟುಂಬ ಮತ್ತು ಸಮಾಜ ಎರಡರಲ್ಲೂ ಸಕಾರಾತ್ಮಕ ಬದಲಾವಣೆ ಸಾಧ್ಯ ಎಂದರು.
ಸಂಕ್ರಾಂತಿ ಹಬ್ಬದ ಅಂಗವಾಗಿ ಪರಂಪರೆಯ ಸುಗ್ಗಿ ಸಂಭ್ರಮಕ್ಕೆ ವಿಶೇಷ ಮೆರುಗು ನೀಡಲಾಗಿದ್ದು, ಮಹಿಳೆಯರು ಸಾಂಪ್ರದಾಯಿಕ ಉಡುಪು ಧರಿಸಿ ಹಬ್ಬದ ವಾತಾವರಣವನ್ನು ಉತ್ಸವದ ರೂಪದಲ್ಲಿ ಆಚರಿಸಿದರು. ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷೆ ಶ್ರೀದೇವಿ ಮೊಗಪ್ಪಗೌಡ, .ಹರಿಣಿ ಗಣೇಶ್, ಉಪಾಧ್ಯಕ್ಷೆ ಮುದ್ದಮ್ಮ, ಕಾರ್ಯದರ್ಶಿ ಕವಿತಾ ಮಹೇಶ್, ಖಜಾಂಚಿ ಉಷಾ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.