ಸಂತ ಸೇವಾಲಾಲ್‌ರಜಯಂತಿ, ಮೆರವಣಿಗೆ

KannadaprabhaNewsNetwork |  
Published : Feb 18, 2025, 01:47 AM IST
ಫೋಟೋ:15ಕೆಪಿಎಸ್ಎನ್ಡಿ3:  | Kannada Prabha

ಸಾರಾಂಶ

ಸಿಂಧನೂರು: ನಗರದ ಮಿನಿ ವಿಧಾನಸೌಧ ಕಚೇರಿಯಲ್ಲಿ ತಾಲ್ಲೂಕಾಡಳಿತದಿಂದ ಶನಿವಾರ ಸಂತ ಸೇವಾಲಾಲ್ ಮಹಾರಾಜರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು.

ಸಿಂಧನೂರು: ನಗರದ ಮಿನಿ ವಿಧಾನಸೌಧ ಕಚೇರಿಯಲ್ಲಿ ತಾಲ್ಲೂಕಾಡಳಿತದಿಂದ ಶನಿವಾರ ಸಂತ ಸೇವಾಲಾಲ್ ಮಹಾರಾಜರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು. ನಂತರ ಬಂಜಾರ ಸಮಾಜದಿಂದ ನಗರದ ಎಪಿಎಂಸಿ ಗಣೇಶ ದೇವಸ್ಥಾನದ ಆವರಣದಲ್ಲಿ ಸಂತ ಸೇವಾಲಾಲ್ ಮಹಾರಾಜರ ಭಾವ ಚಿತ್ರವನ್ನು ತೆರೆದ ವಾಹನದಲ್ಲಿಟ್ಟು, ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಲಾಯಿತು. ಬಳಿಕ ಮೆರವಣಿಗೆಯೂ ನಡೆಯಿತು.ಶಾಸಕ ಹಂಪನಗೌಡ ಬಾದರ್ಲಿ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ, ತಹಶೀಲ್ದಾರ್ ಅರುಣ್ ಎಚ್. ದೇಸಾಯಿ, ಬಿಜೆಪಿ ಮುಖಂಡ ಕೆ.ಕರಿಯಪ್ಪ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್.ಶಿವನಗೌಡ ಗೊರೇಬಾಳ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಖಾಜಿ ಮಲಿಕ್ ವಕೀಲ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅನಿಲಕುಮಾರ ವೈ, ಮುಖಂಡರಾದ ಕೆ.ಮರಿಯಪ್ಪ ಸುಕಾಲಪೇಟೆ, ಮಲ್ಲಿಕಾರ್ಜುನ ಜೀನೂರು, ಕುಪೇಂದ್ರ ನಾಯಕ, ಶಿವಬಸನಗೌಡ ಗೊರೇಬಾಳ, ಕೃಷ್ಣಪ್ಪ ರಾಠೋಡ್, ರವಿಕುಮಾರ ರಾಠೋಡ್, ಅಮರೇಶ ರೈತನಗರ ಕ್ಯಾಂಪ್ ಉಪಸ್ಥಿತರಿದ್ದರು.ಫೋಟೋ:15ಕೆಪಿಎಸ್ಎನ್ಡಿ3: ಸಿಂಧನೂರಿನ ಮಿನಿವಿಧಾನಸೌಧ ಕಚೇರಿಯಲ್ಲಿ ತಾಲ್ಲೂಕಾಡಳಿತದಿಂದ ಶನಿವಾರ ಸಂತ ಸೇವಾಲಾಲ್ ಮಹಾರಾಜರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ