ಸಂತ ಸೇವಾಲಾಲರ ತತ್ವಗಳು ಯುವಕರಿಗೆ ದಾರಿದೀಪ-ಜಿಲ್ಲಾಧಿಕಾರಿ

KannadaprabhaNewsNetwork |  
Published : Feb 17, 2024, 01:16 AM IST
ಗದಗ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಸಂತ ಸೇವಾಲಾಲ್ ಜಯಂತಿಯನ್ನು ಆಚರಿಸಲಾಯಿತು. | Kannada Prabha

ಸಾರಾಂಶ

ಸೇವಾಲಾಲ್ ಅವರ ತತ್ವಗಳು ಇಂದಿನ ಯುವ ಜನತೆಗೆ ದಾರಿ ದೀಪವಾಗಿದೆ. ಸರ್ಕಾರ ಸಂತ ಸೇವಾಲಾಲ್ ಜಯಂತಿಯನ್ನು ಆಚರಿಸುವ ಮೂಲಕ ಅವರ ತತ್ವಾದರ್ಶಗಳನ್ನು ಇಂದಿನ ಯುವ ಜನತೆಗೆ ತಿಳಿಸಿಕೊಡುವ ಕಾರ್ಯ ಮಾಡುತ್ತಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಹೇಳಿದರು.

ಗದಗ: ಸೇವಾಲಾಲ್ ಅವರ ತತ್ವಗಳು ಇಂದಿನ ಯುವ ಜನತೆಗೆ ದಾರಿ ದೀಪವಾಗಿದೆ. ಸರ್ಕಾರ ಸಂತ ಸೇವಾಲಾಲ್ ಜಯಂತಿಯನ್ನು ಆಚರಿಸುವ ಮೂಲಕ ಅವರ ತತ್ವಾದರ್ಶಗಳನ್ನು ಇಂದಿನ ಯುವ ಜನತೆಗೆ ತಿಳಿಸಿಕೊಡುವ ಕಾರ್ಯ ಮಾಡುತ್ತಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಹೇಳಿದರು.ನಗರದ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಸಂತ ಸೇವಾಲಾಲ್ ಜಯಂತಿಯನ್ನು ಕಾರ್ಯಕ್ರಮದಲ್ಲಿ ಅವರು, ಸಂತ ಸೇವಾಲಾಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಆನಂತರ ಮಾತನಾಡಿದರು.

ಬಂಜಾರ ಸಮುದಾಯವು ಪ್ರಾಮಾಣಿಕ, ಕಾಯಕ ನಿಷ್ಠ ಸಮಾಜವಾಗಿದೆ. ಸಂತ ಸೇವಾಲಾಲ್‌ರ ನಿಷ್ಠೆ, ಪ್ರಾಮಾಣಿಕತೆ, ಆದರ್ಶಗಳನ್ನು ನಾವೆಲ್ಲರೂ ಅನುಸರಿಸುವ ಮೂಲಕ ಅವರಿಗೆ ಗೌರವ ಸಮರ್ಪಿಸೋಣ ಎಂದರು. ಈ ವೇಳೆ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ., ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಸಮಾಜದ ಗಣ್ಯರು, ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌