ಹುಬ್ಬಳ್ಳಿ:
ಅವರು ನಗರದ ಗೋಕುಲ ಗಾರ್ಡನ್‌ನಲ್ಲಿ ಸಂತೋಷ ಲಾಡ್ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 106 ಜನರಿಗೆ ಎಲಿಕ್ಟ್ರಿಕ್ ಆಟೋ, ಬೀದಿಬದಿ ವ್ಯಾಪಾರಸ್ಥರಿಗೆ ಕೊಡೆ ಹಾಗೂ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಸಹಾಯಧನದ ಚೆಕ್ ವಿತರಿಸಿ ಮಾತನಾಡಿದರು.
ಅಸಂಘಟಿತ ಕಾರ್ಮಿಕ ವಲಯಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ₹150 ಕೋಟಿ ಮೊದಲ ಹಂತದಲ್ಲಿ ನೀಡಿದ್ದಾರೆ. ಇದರಿಂದ ಅಸಂಘಟಿತ ವಲಯದಲ್ಲಿರುವ 40 ಲಕ್ಷ ಜನರಿಗೆ ಸಾಮಾಜಿಕ ಭದ್ರತೆ ದೊರೆಯಲಿದೆ. ಇನ್ನೊಂದು ತಿಂಗಳಿನಲ್ಲಿ ಅಸಂಘಟಿಕ ವಲಯಕ್ಕೆ ಸರ್ಕಾರದಿಂದ ಲಾಭವಾಗಲಿದೆ ಎಂದರು.ಸಾನ್ನಿಧ್ಯ ವಹಿಸಿದ್ದ ಮೂರುಸಾವಿರ ಮಠದ ಜ. ಗುರುಸಿದ್ಧ ರಾಜಯೋಗೀಂದ್ರ ಶ್ರೀ ಮಾತನಾಡಿ, ಲಾಡ್ ಅವರು ಶ್ರೀಮಂತಿಕೆ ಎಂಬ ಡ್ಯಾಮ್ ಇದ್ದಂತೆ. ಅದರಿಂದ ಹರಿಯುವ ಕೋಡಿ ಅನೇಕ ಬಡ-ಬಗ್ಗರ ಜೀವನೋಪಾಯಕ್ಕೆ ದಾರಿಯಾಗಿದೆ. ಕಷ್ಟದಲ್ಲಿರುವ ಜನರ ಕಣ್ಣೀರು ಒರೆಸುವ ಮಾತೃ ಮಮತೆ ಲಾಡ್ ಅವರಲ್ಲಿದೆ ಎಂದರು.
ಶಾಸಕರಾದ ಪ್ರಸಾದ ಅಬ್ಬಯ್ಯ, ಮಹೇಶ ಟೆಂಗಿನಕಾಯಿ, ವಿಪ ಮಾಜಿ ಸಭಾಪತಿ ವೀರಣ್ಣ ಮತ್ತಕಟ್ಟಿ, ಮಾಜಿ ಸಚಿವ ಎ.ಎಂ. ಹಿಂಡಸಗೇರಿ, ಮಾಜಿ ಸಂಸದ ಐ.ಜಿ. ಸನದಿ, ಹುಡಾ ಅಧ್ಯಕ್ಷ ಶಾಕಿರ್ ಸನದಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ತಾಫ ಹಳ್ಳೂರ ಸೇರಿದಂತೆ ಹಲವರಿದ್ದರು.