ಸಾಣೂರು ಗ್ರಾ.ಪಂ.ಗೆ ಪ್ರತಿಷ್ಠಿತ ರಾಷ್ಟ್ರೀಯ ಪಂಚಾಯಿತಿ ಪುರಸ್ಕಾರ

KannadaprabhaNewsNetwork |  
Published : Jun 05, 2026, 03:00 AM IST
ಸಾಣೂರು ಗ್ರಾಮ ಪಂಚಾಯತ್‌ಗೆ ರಾಷ್ಟ್ರ ಮಟ್ಟದ ಗೌರವ | Kannada Prabha

ಸಾರಾಂಶ

ಗ್ರಾಮೀಣ ಅಭಿವೃದ್ಧಿ ಹಾಗೂ ಉತ್ತಮ ಆಡಳಿತಕ್ಕಾಗಿ ನೀಡಲಾಗುವ ಪ್ರತಿಷ್ಠಿತ ರಾಷ್ಟ್ರೀಯ ಪಂಚಾಯತ್ ಪುರಸ್ಕಾವನ್ನು ಸಾಣೂರು ಗ್ರಾಮ ಪಂಚಾಯಿತಿ ಸ್ವೀಕರಿಸಿದೆ.

ಕಾರ್ಕಳ: ಗ್ರಾಮೀಣ ಅಭಿವೃದ್ಧಿ ಹಾಗೂ ಉತ್ತಮ ಆಡಳಿತಕ್ಕಾಗಿ ನೀಡಲಾಗುವ ಪ್ರತಿಷ್ಠಿತ ರಾಷ್ಟ್ರೀಯ ಪಂಚಾಯತ್ ಪುರಸ್ಕಾವನ್ನು ಸಾಣೂರು ಗ್ರಾಮ ಪಂಚಾಯಿತಿ ಸ್ವೀಕರಿಸಿದೆ.ಬುಧವಾರ ನವದೆಹಲಿಯ ಸ್ಕೋಪ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಣೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ವಿಶ್ವನಾಥ್ ಅವರು ಕೇಂದ್ರ ಪಂಚಾಯತ್ ರಾಜ್ ಸಚಿವ ರಾಜೀವ್ ರಂಜನ್‌ ಸಿಂಗ್‌ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.ಉಡುಪಿ ಜಿಲ್ಲಾ ಯೋಜನಾಧಿಕಾರಿ ಉದಯ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ನಿಶ್ಚಿತ್ ಹೆಗಡೆ ಇದ್ದರು. ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹಾಗೂ ಕಾರ್ಕಳ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಮಾರ್ಗದರ್ಶನ ನೀಡಿದರು.

ಸಂಸದ ಕೋಟ ಶ್ರೀ ನಿವಾಸ ಪೂಜಾರಿ ಉಪಸ್ಥಿತರಿದ್ದು, ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಪಂಚಾಯಿತಿಗಳ ಪ್ರತಿನಿಧಿಗಳನ್ನು ಅಭಿನಂದಿಸಿ ಶುಭ ಹಾರೈಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆರು ಜನ ಹತ್ಯೆ: ಮತ್ತೆ 6 ಆರೋಪಿಗಳ ಸೆರೆ
ನ್ಯಾಯಾಧೀಕರಣದ ತೀರ್ಪಿನ ಬಗ್ಗೆ 8ಕ್ಕೆ ವಿಚಾರ ಸಂಕಿರಣ