ಅದಿಚುಂಚನಗಿರಿ ಮಠದಲ್ಲಿ ಸರಸ್ವತಿ ಪೂಜೆ, ಚಿಕ್ಕ ಮಕ್ಕಳಿಗೆ ಅಕ್ಷರಾಭ್ಯಾಸ

KannadaprabhaNewsNetwork |  
Published : Oct 18, 2026, 02:45 AM IST
16ಕೆಎಂಎನ್ ಡಿ27 | Kannada Prabha

ಸಾರಾಂಶ

ಅಕ್ಷರಾಭ್ಯಾಸಕ್ಕೂ ಮುನ್ನ ಲಲಿತ ಸಹಸ್ರನಾಮ ಪಠಣ ಮಾಡಲಾಯಿತು. ವಿಶೇಷವಾಗಿ ಅಲಂಕರಿಸಿದ ಸರಸ್ವತಿ ದೇವಿಯ ಸನ್ನಿಧಿಯಲ್ಲಿ ಶ್ರೀ ಗಣಪತಿ ಪೂಜೆ ನೆರವೇರಿಸಲಾಯಿತು. ನಂತರ ಸರಸ್ವತಿ ವಿಗ್ರಹಕ್ಕೆ ಹಾಲಭಿಷೇಕ ನೆರವೇರಿಸಿ ಪೂಜಿಸುವ ಮೂಲಕ ಮಕ್ಕಳಿಗೆ ಅಕ್ಷರಾಭ್ಯಾಸ ಕ್ರಿಯೆಯನ್ನು ಶ್ರೀಗಳು ಆರಂಭಿಸಿದರು.

ಕನ್ನಡಪ್ರಭ ವಾರ್ತೆ ನಾಗಮಂಗಲ

ತಾಲೂಕಿನ ಅದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ನಡೆದ ಶರನ್ನವರಾತ್ರಿ ಪ್ರಯುಕ್ತ ಲಲಿತ ಸಹಸ್ರನಾಮ ಪಠಣ, ಸರಸ್ವತಿ ಪೂಜೆಯಲ್ಲಿ ನೂರಾರು ಪೋಷಕರು ಚಿಕ್ಕ ಮಕ್ಕಳೊಂದಿಗೆ ಭಾಗವಹಿಸಿ ಅಕ್ಷರಾಭ್ಯಾಸ ಮಾಡಿಸಿದರು.

ಕಾರ್ಯಕ್ರಮದಲ್ಲಿ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಅಕ್ಷರಾಭ್ಯಾಸವನ್ನು ಅಥವಾ ವಿದ್ಯಾರಂಭ ನಡೆಸುವ ಪದ್ಧತಿ ಇರುವುದರಿಂದ ಮಕ್ಕಳ ಪೋಷಕರು ತಮ್ಮ ಮಕ್ಕಳನ್ನು ಶ್ರೀಮಠಕ್ಕೆ ಕರೆತಂದು ಶ್ರೀಗಳಿಂದ ಅಕ್ಷರಭ್ಯಾಸ ಮಾಡಿಸಿ ಆಶೀರ್ವಾದ ಪಡೆದುಕೊಂಡರು.

ಅಕ್ಷರಾಭ್ಯಾಸಕ್ಕೂ ಮುನ್ನ ಲಲಿತ ಸಹಸ್ರನಾಮ ಪಠಣ ಮಾಡಲಾಯಿತು. ವಿಶೇಷವಾಗಿ ಅಲಂಕರಿಸಿದ ಸರಸ್ವತಿ ದೇವಿಯ ಸನ್ನಿಧಿಯಲ್ಲಿ ಶ್ರೀ ಗಣಪತಿ ಪೂಜೆ ನೆರವೇರಿಸಲಾಯಿತು. ನಂತರ ಸರಸ್ವತಿ ವಿಗ್ರಹಕ್ಕೆ ಹಾಲಭಿಷೇಕ ನೆರವೇರಿಸಿ ಪೂಜಿಸುವ ಮೂಲಕ ಮಕ್ಕಳಿಗೆ ಅಕ್ಷರಾಭ್ಯಾಸ ಕ್ರಿಯೆಯನ್ನು ಶ್ರೀಗಳು ಆರಂಭಿಸಿದರು.

ದೊಡ್ಡ ತಟ್ಟೆಯಲ್ಲಿ ಅಕ್ಕಿಯನ್ನು ಇರಿಸಿ ಅದರಲ್ಲಿ ಮಕ್ಕಳ ಕೈಹಿಡಿದುಕೊಂಡು ನವಿಲುಗರಿಯ ಮೂಲಕ ಓಂ ಬೀಜಾಕ್ಷರವನ್ನು ಬರೆಸುವ ಮೂಲಕ ಅಕ್ಷರಾಭ್ಯಾಸ ಮಾಡಿಸಿದರು. ಚಿಕ್ಕ ಮಕ್ಕಳು ಧರ್ಮ ಭೇದವಿಲ್ಲದೆ ಅಕ್ಷರಾಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವಿಜಯ ಸಾಧಿಸಲು ಅಕ್ಷರಾಭ್ಯಾಸ ಚುಂಚಶ್ರೀ:

ಶಾಲೆಗೆ ಸೇರಿಸುವ ಮುನ್ನ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿರುವುದು ಹಿಂದೂ ಧರ್ಮದಲ್ಲಿ ಆಚರಿಸಿಕೊಂಡು ಬಂದಿರುವ ಪದ್ದತಿ. ನವರಾತ್ರಿಯ ಸಮಯದಲ್ಲಿ ಮಾಡಿಸುವ ಅಕ್ಷರಭ್ಯಾಸ ವಿಜಯದ ಸಂಕೇತವಾಗಿದೆ. ಅಜ್ಞಾನದ ಅಂಧಕಾರದ ಮೇಲೆ ನಡೆಸುವ ವಿಜಯ ಎಂಬುದಾಗಿ ಇದನ್ನು ಕರೆಯಲಾಗಿದೆ. ಇದು ಮಕ್ಕಳ ಜ್ಞಾನ ದೀವಿಗೆಯನ್ನು ಬೆಳಗಿಸಲು ಸಹಕಾರಿಯಾಗಿದೆ ಎಂದು ಶ್ರೀಗಳು ತಿಳಿಸಿದರು.

ಮಠದ ಪ್ರಧಾನಕಾರ್ಯದರ್ಶಿ ಪ್ರಸನ್ನನಾಥಸ್ವಾಮೀಜಿ, ಶ್ರೀಮಠದ ಚೈತನ್ಯನಾಥಸ್ವಾಮೀಜಿ ಸೇರಿದಂತೆ ವಿವಿಧ ಶಾಖಾ ಮಠಗಳು ಶ್ರೀಗಳು ಮತ್ತು ನೂರಾರು ಭಕ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಏಷ್ಯನ್ ಪ್ಯಾರಾ ಗೇಮ್ಸ್‌ಗೆ ಬಳ್ಳಾರಿಯ ಗೋಪಿಚಂದ್ ಲಿಂಗುಟ್ಲ ಆಯ್ಕೆ
ಪಡಿತರ ಚೀಟಿದಾರರ ಇ-ಕೆವೈಸಿ ಗಡುವು ವಿಸ್ತರಿಸಿ