ದಾವಣಗೆರೆ: ನಗರದ ಶ್ರೀಮತಿ ಸಹನ ರವಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶುಕ್ರವಾರ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಶಾರದ ಪೂಜೆ ನಡೆಯಿತು.
ಪತ್ರಕರ್ತೆ ದೇವಿಕಾ ಸುನಿಲ್ ಮಾತನಾಡಿ, ಬೆಳೆಯುವ ಪೈರು ಮೊಳಕೆಯಲ್ಲಿ ಎಂಬಂತೆ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿಯೇ ಸಂಸ್ಕಾರವಂತರನ್ನಾಗಿ ಮಾಡಬೇಕು. ಆಗ ಮುಂದೆ ದೇಶದ ಉತ್ತಮ ಪ್ರಜೆಗಳಾಗುತ್ತಾರೆ ಎಂದು ತಿಳಿಸಿದರು.
ಕಾರ್ಯದರ್ಶಿ ಸಹನಾ ರವಿ ಮಾತನಾಡಿ, ಮಕ್ಕಳು ಪ್ರತಿಭಾವಂತರಾಗಿ ಬೆಳೆಯಬೇಕಾದರೆ ಮನೆಯಲ್ಲಿ ಪೋಷಕರು ಹಾಗೂ ಶಾಲೆಯಲ್ಲಿ ಶಿಕ್ಷಕರ ಶ್ರಮ ಅತ್ಯಮೂಲ್ಯವಾಗಿ ಇರುತ್ತದೆ. ಶಾಲೆಯಲ್ಲಿ ಉತ್ತಮ ಸಂಸ್ಕಾರ ಸಂಸ್ಕೃತಿಯನ್ನು ಕಲಿಸುವುದರಿಂದ ಮಕ್ಕಳ ಪ್ರತಿಭೆ ಹೆಚ್ಚುತ್ತದೆ ಎಂದರು.ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಸರೋಜ ಸಿದ್ದಪ್ಪ, ವಿವಿಧ ವಿಭಾಗಗಳ ಶಿಕ್ಷಕರು, ಇತರರು ಭಾಗವಹಿಸಿದ್ದರು.
- - - -14ಕೆಡಿವಿಜಿ34:ದಾವಣಗೆರೆಯ ಶ್ರೀಮತಿ ಸಹನಾ ರವಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶಾರದಾ ಪೂಜೆ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.