ಸರ್ದಾರ್ ವಲ್ಲಭಬಾಯ್ ಪಟೇಲ್ ಪಾತ್ರ ಪ್ರಮುಖ: ರಾಘವೇಂದ್ರ

KannadaprabhaNewsNetwork |  
Published : Sep 18, 2024, 01:47 AM IST
ಕಾರಟಗಿ ತಾಲೂಕು ಪಂಚಾಯಿತಿ ಕಾರ್ಯಾಲದಲ್ಲಿ ಕ-ಕ ಉತ್ಸವ ದಿನವನ್ನು ಆಚರಿಸಿ ಧ್ವಜಾರೋಹಣ ಮಾಡಲಾಯಿತು. | Kannada Prabha

ಸಾರಾಂಶ

ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ೧೩ ತಿಂಗಳು, ಎರಡು ದಿನದ ನಂತರ ಕಲ್ಯಾಣ ಕರ್ನಾಟಕ ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಅದರಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್ ಪಾತ್ರ ಪ್ರಮುಖವಾಗಿದೆ.

ಕನ್ನಡಪ್ರಭ ವಾರ್ತೆ ಕಾರಟಗಿ

ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ೧೩ ತಿಂಗಳು, ಎರಡು ದಿನದ ನಂತರ ಕಲ್ಯಾಣ ಕರ್ನಾಟಕ ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಅದರಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್ ಪಾತ್ರ ಪ್ರಮುಖವಾಗಿದೆ ಎಂದು ತಾಪಂ ಯೋಜನಾಧಿಕಾರಿ ರಾಘವೇಂದ್ರ ಹೇಳಿದರು.

ಇಲ್ಲಿನ ತಾಲೂಕು ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದ ಜನರು ಮೊದಲು ಬ್ರಿಟಿಷರ ವಿರುದ್ಧ ಹೋರಾಡಿದರೇ, ನಂತರ ನಮ್ಮದೇ ದೇಶದ ಹೈದರಾಬಾದ್ ನಿಜಾಮನ ವಿರುದ್ಧ ಹೋರಾಡಿ ಸ್ವಾತಂತ್ರ್ಯ ಪಡೆಯಬೇಕಾಯಿತು. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕರು ಕೂಡಾ ಕಲ್ಯಾಣ ಕರ್ನಾಟಕಕ್ಕೆ ಮತ್ತು ಹೈದರಾಬಾದ್ ನಿಜಾಮನ ಆಳ್ವಿಕೆಯಲ್ಲಿದ್ದ ಪ್ರದೇಶದ ಜನರಿಗೆ ಮಾತ್ರ ಸ್ವಾತಂತ್ರ್ಯ ಸಿಕ್ಕಿರಲಿಲ್ಲ. ಅದು ಸಿಕ್ಕಿದ್ದು ಸೆ.೧೭, ೧೯೪೮ ರಂದು. ಹೀಗಾಗಿ ಸೆ. ೧೭ನ್ನು ಕಲ್ಯಾಣ ಕರ್ನಾಟಕ ಉತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ ಎಂದರು.ನಂತರ ಕಚೇರಿಯಲ್ಲಿ ಶ್ರೀ ಗುರು ವಿಶ್ವಕರ್ಮ ಜಯಂತಿ ಆಚರಿಸಲಾಯಿತು.

ಈ ವೇಳೆ ತಾಪಂ ಸಹಾಯಕ ನಿರ್ದೇಶಕಿ ವೈ. ವನಜಾ, ಕೆಡಿಪಿ ನಾಮನಿರ್ದೇಶಿತ ಸದಸ್ಯರು, ಸರ್ಕಾರ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಅಧ್ಯಕ್ಷರು, ಸದಸ್ಯರು, ತಾಪಂ ವಿವಿಧ ಯೋಜನೆಗಳ ವಿಷಯ ನಿರ್ವಾಹಕ ದುರಗಪ್ಪ ಭಜಂತ್ರಿ, ಮಹಮ್ಮದ್ ಅಜೀಜ್, ಮಂಜುನಾಥ ಭಜಂತ್ರಿ, ಶಿವರಾಜ್, ನರೇಗಾ ಹಾಗೂ ತಾಪಂ ಸಿಬ್ಬಂದಿ ಇದ್ದರು.

ಸಿದ್ದಾಪುರ:

ತಾಲೂಕಿನ ಸಿದ್ದಾಪುರ ಕಸ್ತೂರಿಬಾ ಗಾಂಧಿ ಬಾಲಿಕಾ ಉರ್ದು ವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನ ಮತ್ತು ವಿಶ್ವಕರ್ಮ ಜಯಂತಿ ಆಚರಿಸಲಾಯಿತು. ಮುಖ್ಯಗುರು ಚಂದ್ರಶೇಖರ ಗಣವಾರಿ ಧ್ವಜಾರೋಹಣ ಮಾಡಿ ಕ-ಕ ಭಾಗದಲ್ಲಿ ಸ್ವಾತಂತ್ರಕ್ಕಾಗಿ ನಿಜಾಮನ ವಿರುದ್ಧ ಹೋರಾಟ ನಡೆಸಿದ ಕುರಿತು ವಿವರಿಸಿದರು. ನಂತರ ಪ್ರತಿಭಾ ಕಾರಂಜಿ ಮತ್ತು ಗಣಿತ ಕಲಿಕಾ ಆಂದೋಲನದಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ