ಅಖಂಡ ಭಾರತ ನಿರ್ಮಾಣಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲ್ ಕಾರಣ: ಗೋವಿಂದ ಕಾರಜೋಳ

KannadaprabhaNewsNetwork |  
Published : Nov 14, 2025, 01:15 AM IST
೧೩ಶಿರಾ೨: ಶಿರಾ ನಗರದ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಮಧುಗಿರಿ ಸಂಘಟನಾತ್ಮಕ ಜಿಲ್ಲೆ ವತಿಯಿಂದ ಸರ್ದಾರ್ ವಲ್ಲಾಭಾಯಿ ಪಟೇಲ್ ಅವರ ೧೫೦ ನೇ ಜನ್ಮದಿನ ಹಾಗೂ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಏಕತಾ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು. | Kannada Prabha

ಸಾರಾಂಶ

‘ಒಂದೇ ಭಾರತ - ಆತ್ಮನಿರ್ಭರ ಭಾರತ ಘೋಷವಾಕ್ಯದ ಅಡಿಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಏಕತಾ ನಡಿಗೆ ಜಾಥಾ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಶಿರಾ

ದೇಶದ ೫೬೫ ಸಂಸ್ಥಾನಗಳ ರಾಜ, ಮಹರಾಜರನ್ನು ಒಪ್ಪಿಸಿ, ದೇಶಕ್ಕೆ ವಿಲೀನ ಮಾಡಿಸಿ ಅಖಂಡ ಭಾರತ ನಿರ್ಮಾಣ ಮಾಡಲು ಕಾರಣೀಭೂತರಾದವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.

ಅವರು ಗುರುವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ೧೫೦ನೇ ಜನ್ಮದಿನ ಹಾಗೂ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಮಧುಗಿರಿ ಸಂಘಟನಾತ್ಮಕ ಜಿಲ್ಲೆ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಏಕತಾ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸರ್ದಾರ್ ವಲ್ಲಭಭಾಯಿ ಪಟೇಲರು ಅಪ್ಪಟ ದೇಶಭಕ್ತರಾಗಿದ್ದರು. ದೇಶಕ್ಕಾಗಿ ತಮ್ಮನ್ನು ಸಮರ್ಪಣೆ ಮಾಡಿಕೊಂಡಿದ್ದರು. ಆದ್ದರಿಂದ ಭಾರತೀಯ ಜನತಾ ಪಾರ್ಟಿಯಿಂದ ಅ. ೩೧ ರಿಂದ ನ. ೨೫ ರವರೆಗೂ ದೇಶದಾದ್ಯಂತ ಪಾದಯಾತ್ರೆ, ಚರ್ಚೆ, ಪ್ರಬಂಧ ಸ್ಪರ್ಧೆ ಸೇರಿದಂತೆ ಹತ್ತು, ಹಲವು ಕಾರ್ಯಕ್ರಮ ಆಯೋಜನೆ ಮಾಡಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ದೇಶಕ್ಕೆ ನೀಡಿದ ಕೊಡುಗೆಯನ್ನು ತಿಳಿಸಲಾಗುತ್ತಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಮಾತನಾಡಿ, ಈ ದೇಶದ ಮೊದಲ ಗೃಹ ಸಚಿವರಾಗಿ, ಮೊದಲ ಉಪ ಪ್ರಧಾನಿಯಾಗಿ ಈ ದೇಶದ ಉಕ್ಕಿನ ಮನುಷ್ಯ ಎಂದೇ ಹೆಸರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ೧೫೦ನೇ ಜನ್ಮ ದಿನದ ಅಂಗವಾಗಿ ದೇಶದ ನಾಗರಿಕರಲ್ಲಿ ಭಾವೈಕ್ಯತೆ ಮೂಡಿಸಲು, ಭಾರತೀಯರಲ್ಲಿ ರಾಷ್ಟ್ರಪ್ರೇಮ, ರಾಷ್ಟ್ರಭಕ್ತಿ ಮೂಡಿಸಲು ಏಕತಾ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ಯುವ ಪೀಳಿಗೆಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಕೊಡುಗೆಯನ್ನು ತಿಳಿಸುವ ಸಲುವಾಗಿ ನ. ೨೬ ರವರೆಗೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

‘ಒಂದೇ ಭಾರತ - ಆತ್ಮನಿರ್ಭರ ಭಾರತ ಘೋಷವಾಕ್ಯದ ಅಡಿಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಏಕತಾ ನಡಿಗೆ ಜಾಥಾ ನಡೆಸಲಾಯಿತು. ಈ ಸಂದರ್ಭದಲ್ಲಿ ದಿಶಾ ಸಮಿತಿ ಸದಸ್ಯರಾದ ಮದಲೂರು ಮೂರ್ತಿ ಮಾಸ್ಟರ್, ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಂಡಳಿ ಮಾಜಿ ಅಧ್ಯಕ್ಷರಾದ ಚಂಗಾವರ ಮಾರಣ್ಣ, ನಗರಸಭೆ ಸದಸ್ಯರಾದ ರಂಗರಾಜು, ನಗರ ಮಂಡಲ ಅಧ್ಯಕ್ಷರಾದ ಗಿರಿಧರ್, ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಈರಣ್ಣ ಪಟೇಲ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಉಮಾ ವಿಜಯರಾಜ್, ಓಬಿಸಿ ಮೋರ್ಚಾ ಅಧ್ಯಕ್ಷರಾದ ಮಾಗೋಡ್ ಪ್ರತಾಪ್, ತಾಪಂ ಮಾಜಿ ಸದಸ್ಯರಾದ ಚಿಕ್ಕಣ್ಣ, ಹಿರಿಯ ಮುಖಂಡರಾದ ಬರಗೂರು ಶಿವಕುಮಾರ್, ನಟರಾಜ್ ಸಂತೆಪೇಟೆ, ಗುರುದಾಸ್, ಜಿಲ್ಲಾ ಕಾರ್ಯದರ್ಶಿ ಅರುಣ್, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಧು ಯಾದವ್, ಉಪಾಧ್ಯಕ್ಷರಾದ ಪದ್ಮ ಮಂಜುನಾಥ್, ಉಪಾಧ್ಯಕ್ಷರಾದ ನಾಗರಾಜ್ ಗೌಡ, ಮದ್ದೆವಳ್ಳಿ ರಾಮಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಭಾಸ್ಕರ್, ಎಸ್ ಟಿ ಮೋರ್ಚಾ ಅಧ್ಯಕ್ಷರಾದ ತೇಜೇಶ್ವರ್, ಗೋಪಿಕುಂಟೆ ಕುಮಾರ್ ಮಾಸ್ಟರ್, ಮಹಿಳಾ ಮೋರ್ಚಾ ಅಧ್ಯಕ್ಷರಾದ ರತ್ನಮ್ಮ, ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷರಾದ ಹರೀಶ್, ಮೂಗನಹಳ್ಳಿ ರಾಮು, ನಗರ ಮಂಡಲ ಯುವ ಮೋರ್ಚಾ ಅಧ್ಯಕ್ಷರಾದ ಸ್ನೇಹ ಪ್ರಿಯ ಶಿವು, ಓಬಿಸಿ ಮೋರ್ಚಾ ಅಧ್ಯಕ್ಷರಾದ ಗೌಡಪ್ಪ, ಮಾಜಿ ಅಧ್ಯಕ್ಷರಾದ ಲಕ್ಷ್ಮೀನಾರಾಯಣ್, ಸುರೇಶ್, ಹೊಸಹಳ್ಳಿ ಸಿದ್ದಲಿಂಗಪ್ಪ, ನಾದೂರು ಕುಮಾರ್, ಮಲ್ಲಿಕಾಪುರ ಮಂಜುನಾಥ್, ಸೈಯದ್ ಬಾಬಾ, ಮದ್ದಕನಹಳ್ಳಿ ರಂಗನಾಥ್, ಕವಿತಾ, ಶೋಭಾ, ಮಂಜುಳಾ, ತಿಮ್ಮರಾಜಮ್ಮ, ಶಕುಂತಲಮ್ಮ, ಸುಶೀಲಮ್ಮ, ಉಷಾರಾಣಿ, ಕಾಂತರಾಜು, ಬಾಂಬೆ ರಾಜಣ್ಣ, ದೇವರಾಜ್, ದೇವಕುಮಾರ್ ಸೇರಿ ಅನೇಕ ಗಣ್ಯರು, ಮುಖಂಡರು, ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

PREV

Recommended Stories

ಸುಪ್ರೀಂನಲ್ಲಿ ರಾಜ್ಯಕ್ಕೆ ಮೇಕೆದಾಟು ವಿಜಯ - ಯೋಜನೆ ಪ್ರಶ್ನಿಸಿದ್ದ ತಮಿಳುನಾಡು ಅರ್ಜಿ ವಜಾ
ಹಾರನ್‌ ಮಾಡಿದ್ದಕ್ಕೆ ಸಿಟ್ಟಿಗೆದ್ದು ಬೈಕ್‌ಗೆ ಕಾರು ಗುದ್ದಿಸಿದವ ಸೆರೆ