ಹುಣಸಗಿ: ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ತರಲು ಆಗ್ರಹಿಸಿ ಕರ್ನಾಟಕ ಸೇನೆ ತಾ. ಘಟಕ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ರಾಜ್ಯ ಸಂಚಾಲಕ ಭೀಮಣ್ಣ ಶಖಾಪುರ ಮಾತನಾಡಿ, ಕನ್ನಡಿಗರಿಗೆ ಆದ್ಯತೆ ನೀಡಲು ಶಿಫಾರಸು ಮಾಡಿದ್ದ ಡಾ. ಸರೋಜಿನಿ ಮಹಿಷಿ ವರದಿ 58 ಶಿಫಾರಸ್ಸುಗಳನ್ನು ಸರ್ಕಾರದ ಮುಂದಿಟ್ಟಿತು. ಕೇಂದ್ರ ಸರ್ಕಾರಿ ಇಲಾಖೆಗಳು ಮತ್ತು ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾರ್ವಜನಿಕ ವಲಯ ಘಟಕಗಳ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳನ್ನು ಕೇವಲ ಕನ್ನಡಿಗರಿಗೆ ಮಾತ್ರ ಸಿಗಲಿದ್ದು, ಈ ವರದಿಯನ್ನು ಸರ್ಕಾರ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಬೇರೆ ರಾಜ್ಯಗಳದಲ್ಲಿಯೂ ಸ್ಥಳೀಯರಿಗೆ ಮೀಸಲಾತಿ ಅಲ್ಲಿನ ಸರಕಾರ ನೀಡಿದೆ. ಅದರಂತೆಯೂ ಕನ್ನಡಿಗರಿಗೆ ಮೀಸಲು ಸಿಗಲು ಮಹಿಷಿ ವರದಿ ಜಾರಿ ಅಗತ್ಯವಾಗಿದೆ ಎಂದು ಆಗ್ರಹಿಸಿದರು. ಸಿಎಂಗೆ ಬರೆದ ಮನವಿಯನ್ನು ತಹಸೀಲ್ದಾರ್ ಬಸಲಿಂಗಪ್ಪ ನೈಕೋಡಿ ಅವರಿಗೆ ಸಲ್ಲಿಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.