ಸರ್ವಜ್ಞರು ತ್ರಿಪದಿಗಳ ಮೂಲಕ ಸಮಾಜದ ಮೇಲೆ ಪರಿಣಾಮ ಬೀರಿದ್ದಾರೆ: ಎಡಿಸಿ ಮಮತಾ ದೇವಿ

KannadaprabhaNewsNetwork |  
Published : Feb 21, 2024, 02:08 AM IST
ಸರ್ವಜ್ಞ20 | Kannada Prabha

ಸಾರಾಂಶ

ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಉಡುಪಿ ಜಿಲ್ಲಾ ಕುಲಾಲ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಕವಿ ಸರ್ವಜ್ಞ ಜಯಂತಿ ಹಾಗೂ ಸಾಮಾಜಿಕ ನ್ಯಾಯ ದಿನಾಚರಣೆ ನಡೆಯಿತು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಉದ್ಘಾಟಿಸಿ, ಸಂದೇಶ ನೀಡಿದರು.

ಕನ್ನಡಪ್ರಭ ವಾರ್ತೆ ಉಡುಪಿಸರ್ವಜ್ಞ ಎಂದರೆ ಎಲ್ಲವನ್ನು ಬಲ್ಲವನು ಎನ್ನುವ ಅರ್ಥ ಇದೆ. ಯಾವುದೇ ವಿದ್ಯಾಲಯದಲ್ಲಿ ಪದವಿ ಪಡೆಯದೇ ತನ್ನ ಜೀವನಾನುಭವಗಳ ಮೂಲಕ ವಚನಗಳನ್ನು ರಚಿಸಿದ ಕವಿ ಸರ್ವಜ್ಞ. ಸಮಾಜದ ಅಂಕುಡೊಂಕುಗಳ ಬಗ್ಗೆ ಸರಳ ತ್ರಿಪದಿಗಳ ಮೂಲಕ ಜನಸಾಮಾನ್ಯರ ಮೇಲೆ ಪರಿಣಾಮ ಬೀರಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಹೇಳಿದರು.

ಅವರು ಮಂಗಳವಾರ ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಉಡುಪಿ ಜಿಲ್ಲಾ ಕುಲಾಲ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕವಿ ಸರ್ವಜ್ಞ ಜಯಂತಿ ಹಾಗೂ ಸಾಮಾಜಿಕ ನ್ಯಾಯ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಮಾತನಾಡಿ, ಸಮಾಜದಲ್ಲಿನ ಅನಿಷ್ಟ ಪದ್ಧತಿಗಳನ್ನು ಕೊನೆಗಾಣಿಸಿ ಒಗಟ್ಟು ಮೂಡಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಈ ದಿನದಂದು ಸಾಮಾಜಿಕ ನ್ಯಾಯ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಸಮಾಜದಲ್ಲಿನ ಬಡತನ, ಲಿಂಗತಾರತಮ್ಯ, ಅನಕ್ಷರತೆಗಳನ್ನು ಹೋಗಲಾಡಿಸಿ ಸುಸ್ಥಿರ ಅಭಿವೃದ್ಧಿ ಸಮಾಜವನ್ನು ನಿರ್ಮಿಸಲು ಎಲ್ಲರೂ ಕೈಜೋಡಿಸಬೇಕು ಎಂದರು.ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಶೇಖರ ಕುಲಾಲ್, ಕವಿ ಸರ್ವಜ್ಞನರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ ಎಸ್. ಅಧ್ಯಕ್ಷತೆ ವಹಿಸಿದ್ದರು. ಅಪರ ಪೊಲೀಸ್‌ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ಜಿಲ್ಲಾ ಕಸಾಪ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಪೆರ್ಡೂರು ಕುಲಾಲ ಸಂಘ ಅಧ್ಯಕ್ಷ ಕೃಷ್ಣಪ್ಪ ಕುಲಾಲ್, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ನಿಕೇತನ ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿನಿ ಚೈತ್ರಾ ನಿರೂಪಿಸಿದರು. ಗಣೇಶ್ ಕುಲಾಲ್ ವಂದಿಸಿದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...