ಸಾಸ್ತಾನ: ನೋಟ್ ಬುಕ್ ವಿತರಣೆ, ಪ್ರತಿಭಾ ಪುರಸ್ಕಾರ

KannadaprabhaNewsNetwork |  
Published : Jun 08, 2026, 03:45 AM IST
07ಬಿಲ್ಲವ | Kannada Prabha

ಸಾರಾಂಶ

ಸಮುದಾಯದ ಅಭಿವೃದ್ಧಿಗೆ ಒಗ್ಗಟ್ಟು ಬಹುಮುಖ್ಯವಾದ ಪಾತ್ರ ವಹಿಸಲಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಕಾಂತ್ ಹೇಳಿದರು.

ಕೋಟ: ಸಮುದಾಯದ ಅಭಿವೃದ್ಧಿಗೆ ಒಗ್ಗಟ್ಟು ಬಹುಮುಖ್ಯವಾದ ಪಾತ್ರ ವಹಿಸಲಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಕಾಂತ್ ಹೇಳಿದರು. ಸಾಸ್ತಾನದ ಪಾಂಡೇಶ್ವರ ಬಿಲ್ಲವ ಯುವ ವೇದಿಕೆ ಮೂಡಹಡು ಆಶ್ರಯದಲ್ಲಿ ನೋಟ್ ಬುಕ್ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಸಮಾಜದ ಋಣ ತಿರಿಸಲು ಹಲವು ದಾರಿಗಳಿವೆ. ಅದರಲ್ಲಿ ಶೈಕ್ಷಣಿಕ ಕ್ಷೇತ್ರಗಳಿಗೆ ಒಂದಿಷ್ಟು ಸಹಾಯಹಸ್ತ ಚಾಚಿದರೆ ಆ ವಿದ್ಯಾರ್ಥಿ ಬದುಕು ಹಸನಾಗುವುದರಲ್ಲಿ ಅನುಮಾನವೇ ಇಲ. ಈ ದಿಸೆಯಲ್ಲಿ ಸಮುದಾಯಗಳು ಸಾಮಾಜಿಕ ಬದ್ಧತೆ ಪ್ರದರ್ಶಿಸುವ ಕಾರ್ಯ ಶ್ಲಾಘನೀಯ. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒಲವು ತೊರಬೇಕು ಎಂದರು. ಈ ಸಂದರ್ಭ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಾದ ಶ್ರೀಶಾ, ವನೀಶಾ, ಪ್ರಥಮ, ಪ್ರತ್ವೀನ್ ಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಬಿಲ್ಲವ ಸಮಯದಾಯದ ೨೧೦ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್‌ಗಳನ್ನು ವಿತರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಬಿಲ್ಲವ ಯುವ ವೇದಿಕೆಯ ಅಧ್ಯಕ್ಷ ರವಿಕಿರಣ್ ಪೂಜಾರಿ ವಹಿಸಿದ್ದರು. ಅಭ್ಯಾಗತರಾಗಿ ಸಾಸ್ತಾನ ಬ್ರಹ್ಮಬೈರ್ದಕಳ ಬಿಲ್ಲವ ಸೇವಾ ಸಂಘ ಗೋಳಿಗರಡಿ ಅಧ್ಯಕ್ಷ ಎಂ.ಸಿ. ಚಂದ್ರಶೇಖರ ಪೂಜಾರಿ, ಉದ್ಯಮಿ ದಯಾನಂದ ಪೂಜಾರಿ, ಗೋಪಾಲ್ ಪೂಜಾರಿ ಮಠದತೋಟ, ಮಾಧವ ಪೂಜಾರಿ ಸಾಲಿಗ್ರಾಮ, ಶೇಖರ್ ಪೂಜಾರಿ ಮೂಡ್ಕಟ್ಟು, ಸ್ನೇಹ ಸಂಜೀವಿ ಒಕ್ಕೂಟ ಪಾಂಡೇಶ್ವರ ಅಧ್ಯಕ್ಷೆ ಸುಜಾತ ವೆಂಕಟೇಶ, ಬಿಲ್ಲವ ಯುವ ವೇದಿಕೆಯ ಕಾರ್ಯದರ್ಶಿ ವಿಜಯ ಪೂಜಾರಿ, ಪತ್ರಕರ್ತ ರವೀಂದ್ರ ಕೋಟ ಮತ್ತಿತರರು ಉಪಸ್ಥಿತರಿದ್ದರು.

ಬಿಲ್ಲವ ಯುವ ವೇದಿಕೆಯ ಕಾರ್ಯಾಧ್ಯಕ್ಷ ಸುರೇಶ್ ಪೂಜಾರಿ ಪಾಂಡೇಶ್ವರ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ಇದರ ಸೀಮಾ ವಿಜಯ್ ಪೂಜಾರಿ ಹಾಗೂ ಉಷಾ ಗಣೇಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾಸ್ ಗೀಸರ್ ಸೋರಿಕೆ: ಪ್ರವಾಸಿ ಯುವತಿ ಸಾವು
ಜಿಲ್ಲೆಯ ಗೌರವ ಹೆಚ್ಚಿಸುವ ಕಾರ್ಯ ಮಾಡುವೆ: ಸಚಿವ ಖಾದರ್