ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಸೇವೆಯಿಂದ ತೃಪ್ತಿ: ಎಚ್.ವಿ.ಚಂದ್ರು

KannadaprabhaNewsNetwork |  
Published : Nov 10, 2026, 12:30 AM IST
ಲೀಡ್‌ | Kannada Prabha

ಸಾರಾಂಶ

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಕಳೆದ ೨.೮ ವರ್ಷಗಳ ಕಾಲ ಸಲ್ಲಿಸಿದ ಸೇವೆ ಅತ್ಯಂತ ತೃಪ್ತಿ ತಂದಿದೆ ಎಂದು ನಿರ್ಗಮಿತ ಅಧ್ಯಕ್ಷ ಎಚ್.ವಿ.ಚಂದ್ರು ಹೇಳಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ:

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಕಳೆದ ೨.೮ ವರ್ಷಗಳ ಕಾಲ ಸಲ್ಲಿಸಿದ ಸೇವೆ ಅತ್ಯಂತ ತೃಪ್ತಿ ತಂದಿದೆ ಎಂದು ನಿರ್ಗಮಿತ ಅಧ್ಯಕ್ಷ ಎಚ್.ವಿ.ಚಂದ್ರು ಹೇಳಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಧಿ ಕಟ್ಟಕಡೆಯ ಫಲಾನುಭವಿಗೆ ತಲುಪಿಸುವಲ್ಲಿ, ಈ ಅವಧಿಯಲ್ಲಿ ಅರ್ಹ ಜನರಿಗೆ ಯೋಜನೆಗಳ ಲಾಭ ದೊರಕಿಸಿಕೊಟ್ಟಿರುವುದು, ಆಡಳಿತಾತ್ಮಕವಾಗಿ ಎದುರಾದ ಸವಾಲುಗಳನ್ನು ಯಶಸ್ವಿಯಾಗಿ ನಿಭಾಯಿಸಿರುವುದು ಈ ಸುದೀರ್ಘ ಸೇವೆ ತೃಪ್ತಿ ಉಂಟು ಮಾಡಿದೆ ಎಂದರು.

ಜಿಲ್ಲಾ ಸಮಿತಿಯೊಂದಿಗೆ ತಾಲೂಕು ಸಮಿತಿಗಳು ಕೂಡ ಸೇರಿಕೊಂಡ ಹೋಬಳಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಶೇಷ ಸಭೆಗಳನ್ನ ಮಾಡಿ ಅತ್ಯಂತ ಪರಿಣಾಮಕಾರಿ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿ, ರಾಜ್ಯ ಮಟ್ಟದಲ್ಲಿ ಜಿಲ್ಲೆಯು ಪ್ರಥಮ ಸ್ಥಾನ ಪಡೆದ ಹೆಗ್ಗಳಿಕೆ ನಮ್ಮದಾಗಿದೆ ಎಂದರು.

ಹೊಸ ಯೋಜನೆಯಾದ ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು ಜನತೆಯಲ್ಲಿ ಇರಲಿಲ್ಲ. ವಿರೋಧ ಪಕ್ಷದ ಅಪಪ್ರಚಾರದ ನಡುವೆ ಒಬ್ಬರಿಗೂ ಈ ಯೋಜನೆ ತಲುಪಿಲ್ಲ ಎಂಬ ಅಪಸ್ವರ ಬರಬಾರದು ಎಂದು ಹೇಳಿ ತಾಲೂಕು ಮಟ್ಟದ ಅಧ್ಯಕ್ಷರುಗಳು ತಮ್ಮ ತಮ್ಮ ಹೋಬಳಿ, ಗ್ರಾಮ ಮಟ್ಟದ ಸಭೆಗಳನ್ನು ಮಾಡುವ ಮೂಲಕ ಯೋಜನೆಗಳ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದಾರೆ ಎಂದರು.

ರಾಜ್ಯದಲ್ಲೇ ಚಾಮರಾಜನಗರ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ರಾಜ್ಯಮಟ್ಟದ ಸಮ್ಮೇಳನ ಮಾಡಲಾಯಿತು. ಅದು ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯಾಧ್ಯಕ್ಷರಾದ ರೇವಣ್ಣ ಅವರು ಹೇಳುತ್ತಾರೆ. ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಧ್ವನಿಸುರಳಿ ರಚನೆ ಮಾಡಿಸಲಾಯಿತು. ಅದು ತುಂಬಾ ಚೆನ್ನಾಗಿ ಮೂಡಿಬಂದಿದೆ. ಸಾಕ್ಷ್ಯಚಿತ್ರ ಮಾಡಿಸಲಾಗಿತು. ಅದು ಕೂಡ ಯಶ್ವಸಿಯಾಯಿತು. ಅದನ್ನು ನೋಡಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣ್ಣೀರು ಹಾಕಿದ್ದಾರೆ. ಅಂತಹ ಸಾಧನೆಯನ್ನು ಜಿಲ್ಲಾ ಸಮಿತಿ ಮಾಡಿ ರಾಜ್ಯದಲ್ಲೇ ಕಣ್ಣು ತರೆಸುವ ಕೆಲಸ ಮಾಡಿದೆ ಎಂದರು.

ನಮ್ಮನ್ನು ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಿದ ಜಿಲ್ಲೆಯಲ್ಲಿ ಸಾಧನೆ ಮಾಡಲು ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಗಳಿಗೆ, ಸಚಿವರಿಗೆ, ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳಿಗೆ, ಜಿಲ್ಲಾ ಸಮಿತಿ ಪದಾಧಿಕಾರಿಗಳಿಗೆ, ತಾಲೂಕು ಅಧ್ಯಕ್ಷರು, ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.

ಗ್ಯಾರಂಟಿ ಯೋಜನೆ ಸಾಧನೆಗೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು ಸಂಪೂರ್ಣ ಸಹಕಾರ ನೀಡಿದ್ದರ ಯೋಜನೆಗಳನ್ನು ಮನೆಮನೆಗೆ ತಿಳಿಸಿಕೊಡುವ ಮೂಲಕ ಜಿಲ್ಲೆಗೆ ಕೀರ್ತಿ ತಂದರೆ. ಅವರಿಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ.ಶಕ್ತಿ ಯೋಜನೆ ಸ್ವಲ್ಪ ಪರಿಷ್ಕರಣೆ ಆಗಬೇಕು, ಇದರ ಬಗ್ಗೆ ರಾಜ್ಯ ಸಮಿತಿ ಚಿಂತನೆ ನಡೆಸಿದೆ ಎಂದರು.

ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಘಟಕ ಅಧ್ಯಕ್ಷರಾದ ನಲ್ಲೂರು ಸೋಮೇಶ್ವರ್, ಉಮಾಪತಿ, ರಘುಪ್ರಸಾದ್, ರಾಚಪ್ಪ ಪಾಳ್ಯ, ಜಿಲ್ಲಾ ಉಪಾಧ್ಯಕ್ಷ ಸಿದ್ದರಾಜು ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

12, 13ರಂದು ಪುಣ್ಯಾರಾಧನೆ, ಸ್ಮರಣೋತ್ಸವ, ಜನಜಾಗೃತಿ ಧರ್ಮ ಸಮ್ಮೇಳನ
ಟನಲ್ ಮಾಡಿದ್ರೂ ಆಗಲ್ಲ, ಎಲಿವೇಟೆಡ್‌ ಮಾಡಿದರೂ ಅಪಾದನೆ: ಡಿಕೆಶಿ ಆಕ್ರೋಶ