ಸತೀಶ ಜಾರಕಿಹೊಳಿ ಸಿಎಂ ಆದ್ರೆ ಸ್ವಾಗತ

KannadaprabhaNewsNetwork |  
Published : Sep 12, 2024, 01:46 AM IST
ವಿಠ್ಠಲ ಹಲಗೇಕರ | Kannada Prabha

ಸಾರಾಂಶ

ಸಿಎಂ ರೇಸ್ ನಲ್ಲಿರುವ ಸತೀಶ ಜಾರಕಿಹೊಳಿ ಮುಖ್ಯಮಂತ್ರಿಯಾದರೆ ಸ್ವಾಗತಾರ್ಹ ಎಂದು ಖಾನಾಪುರ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಸಿಎಂ ರೇಸ್ ನಲ್ಲಿರುವ ಸತೀಶ ಜಾರಕಿಹೊಳಿ ಮುಖ್ಯಮಂತ್ರಿಯಾದರೆ ಸ್ವಾಗತಾರ್ಹ ಎಂದು ಖಾನಾಪುರ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ ಜಾರಕಿಹೊಳಿ ಸಿಎಂ ಆದರೇ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗಲಿದೆ. ಅಲ್ಲದೆ ಅವರು ಪಕ್ಷಾತೀತವಾಗಿ ಕೆಲಸ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ.‌ ಅವರು ಖಾನಾಪುರ ತಾಲೂಕನ್ನು ಹತ್ತಿರದಿಂದ ನೋಡಿದ್ದಾರೆ. ಪರಿಷತ್ ಸದಸ್ಯರಿದ್ದಾಗ ಇಡೀ ಜಿಲ್ಲೆಯಲ್ಲಿ ಓಡಾಡಿದ್ದಾರೆ‌. ನಾವು ಅ‍ವರಿಗೆ ಬಿಜೆಪಿಯಿಂದ ಅಲ್ಲ, ವೈಯಕ್ತಿಕವಾಗಿ ನಮ್ಮ ಬೆಂಬಲ ಇದ್ದೇ ಇರುತ್ತದೆ. ಕಾಂಗ್ರೆಸ್ ಪಕ್ಷದಲ್ಲಿ 136 ಜನ ಶಾಸಕರು ಇದ್ದಾರೆ. ನಮ್ಮ ಬೆಂಬಲ ಅವರಿಗೆ ಅಗತ್ಯ ಇಲ್ಲ. ಆದರೂ ಸಹ ವೈಯಕ್ತಿಕವಾಗಿ ಮಾತ್ರ ನಮ್ಮ ಬೆಂಬಲ ನೀಡುತ್ತೇವೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌