ಲಿಂಗಾಯತರ ಮೇಲಿನ ಸರ್ಕಾರದ ದೌರ್ಜನ್ಯ ಖಂಡಿಸಿ ಸತ್ಯಾಗ್ರಹ

KannadaprabhaNewsNetwork |  
Published : Nov 21, 2026, 03:00 AM IST
ಲಿಂಗಾಯತರ ಮೇಲಿನ ಸರ್ಕಾರದ ದೌರ್ಜನ್ಯ ಖಂಡಿಸಿ, ಸತ್ಯಾಗ್ರಹಕ್ಕೆ ಶ್ರೀಗಳ ಕರೆ | Kannada Prabha

ಸಾರಾಂಶ

ಲಿಂಗಾಯತ ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಹಕ್ಕೊತ್ತಾಯಿಸಿ ಕಳೆದೆರಡು ವರ್ಷಗಳ ಹಿಂದೆ ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಶಾಂತಯುತವಾಗಿ ಸಭೆ ಸೇರಿದ ಸತ್ಯಾಗ್ರಹಿಗಳ ಮೇಲೆ ಕರ್ನಾಟಕ ಸರ್ಕಾರ ನಡೆಸಿದ ಅಮಾನವೀಯ ಮಾರಣಾಂತಿಕ ದೌರ್ಜನ್ಯ ಖಂಡಿಸಿ, 2ನೇ ವರ್ಷದ ನೋವಿನ ನೆನಪಲ್ಲಿ ಸೂರ್ಯೋದಯದಿಂದ-ಸೂರ್ಯಾಸ್ತದವರೆಗೆ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಬೆಳಗಾವಿ ಅಧಿವೇಶನದಲ್ಲಿ ಸುವರ್ಣ ವಿಧಾನ ಸೌಧದ ಮುಂದೆ ಕೈಗೊಳ್ಳಲಾಗಿದೆ. ನಾಡಿನ ಮೂಲೆ ಮೂಲೆಗಳಿಂದ ಸ್ವಾಭಿಮಾನಿ ಲಿಂಗಾಯತ ಪಂಚಮಸಾಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಹೋರಾಟ ಯಶಸ್ವಿ ಗೊಳಿಸಬೇಕು ಎಂದು ಲಿಂಗಾಯತ ಪಂಚಮಸಾಲಿ ಮಹಾಪೀಠ ಧರ್ಮಕ್ಷೇತ್ರ ಕೂಡಲಸಂಗಮದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಗುರುವಾರ ನಗರದ ಬಸವ ರೆಸಿಡೆನ್ಸಿ ಸಭಾಂಗಣದಲ್ಲಿ ನಡೆದ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಲಿಂಗಾಯತ ಪಂಚಮಸಾಲಿ, ಮಲೆಗೌಡ, ಲಿಂಗಾಯತ ಗೌಡ, ದೀಕ್ಷಾ, ಚತುರ್ಥ ಲಿಂಗಾಯತರ ಮಕ್ಕಳ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಉದ್ಯೋಗಕ್ಕಾಗಿ ರಾಜ್ಯ ಸರ್ಕಾರದ 2ಎ ಹಾಗೂ ಲಿಂಗಾಯತ ಉಪ ಸಮಾಜಗಳಿಗೆ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗಾಗಿ ರಾಜ್ಯ ಸರ್ಕಾರ ಕೂಡಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸ್‌ ಮಾಡುವಂತೆ ಹಕ್ಕೊತ್ತಾಯಿಸಿ ಕಳೆದ 6 ವರ್ಷಗಳಿಂದ ನಿರಂತರವಾಗಿ ವಿವಿಧ ರೀತಿಯ ಹೋರಾಟಗಳನ್ನು ನಡೆಸಿದ್ದು, 8ನೇ ಹಂತದ 2ನೇ ಭಾಗದ ಚಳುವಳಿಯನ್ನು ಮತ್ತೆ ಲಿಂಗಾಯತ ಪಂಚಮಸಾಲಿ ಮಹಾಸಭಾ, ಲಿಂಗಾಯತ ಪಂಚಮಸಾಲಿ ಅಡ್ವೊಕೇಟ್ ಪರಿಷತ, ಪoಚಸೇನಾ, ಚನ್ನಮ್ಮ ಬಳಗ, ಯುವ ಘಟಕ, ರೈತ ಘಟಕ, ಕಾರ್ಮಿಕ ಘಟಕ, ವೈದ್ಯ ಘಟಕ, ವಿದ್ಯಾರ್ಥಿ ಪರಿಷತ್ತು ರಾಷ್ಟ್ರ, ರಾಜ್ಯ, ಜಿಲ್ಲಾ ಮತ್ತು ತಾಲೂಕು ಘಟಕಗಳ ಸಹಯೋಗದೊಂದಿಗೆ ಮುಂದುವರೆಸಿದ್ದು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಿಗುವವರೆಗೆ ಸುಮ್ಮನಿರುವುದಿಲ್ಲ ಎಂದು ಶಪಥಗೈದರು.

ಮಹಾನಗರಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ ಮಾತನಾಡಿ, ರಾಜ್ಯದಲ್ಲಿ ಪಂಚಮಸಾಲಿ ಸಮಾಜ ಸಂಖ್ಯಾ ದೃಷ್ಟಿಯಿಂದ ಹೆಚ್ಚಿದ್ದರೂ ಸಂಘಟಿತರಾಗಿ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ವಿಫಲವಾಗಿದೆ. ಸಮಾಜದಲ್ಲಿ ಇನ್ನೂ ಬಡತನ, ಅಜ್ಞಾನ, ಅನಕ್ಷರತೆ, ನಿರುದ್ಯೋಗ ತಾಂಡವವಾಡುತ್ತಿದ್ದು ಇದಕ್ಕೆ ಮೀಸಲಾತಿಯೊಂದೇ ಪರಿಹಾರವಾಗಿದ್ದು, ಸಮಾಜದ ಸಂಘಟನೆಗೆ ತಾವು ಸದಾಕಾಲ ಸಿದ್ಧ ಎಂದರು.

ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಶಿವಾನಂದ ಅವಟಿ, ವಕೀಲರ ಪರಿಷತ್ತಿನ ಶ್ರೀಶೈಲ ಮುಳಜಿ. ಸಿದ್ದನಗೌಡ ಪೊಲೀಸಪಾಟೀಲ, ನಗರ ಘಟಕ ಅಧ್ಯಕ್ಷ ಶ್ರೀಶೈಲ ಬುಕ್ಕಣಿ, ನ್ಯಾಯವಾದಿ ದಾನೇಶ ಅವಟಿ ಮಾತನಾಡಿದರು. ಪಂಚಸೇನಾ ರಾಜ್ಯ ಸಂಚಾಲಕ ಶರಣಬಸಪ್ಪ ಗಂಗಶೆಟ್ಟಿ ನಿರೂಪಿಸಿದರು. ಯುವ ಘಟಕದ ಕಾರ್ಯದರ್ಶಿ ನಿಂಗನಗೌಡ ಸೊಲ್ಲಾಪುರ, ಪಂಚಸೇನಾ ಜಿಲ್ಲಾಧ್ಯಕ್ಷ ಸಂತೋಷಕುಮಾರ ಮುಂಜಾಣ್ಣಿ ವಂದಿಸಿದರು. ವಿಜಯಪುರ ತಾಲೂಕು ಘಟಕದ ಅಧ್ಯಕ್ಷರನ್ನಾಗಿ ವೀರೇಶ ಅಣಬಿಯನ್ನು ನೇಮಕ ಮಾಡಲಾಯಿತು. ವಿವಿಧ ತಾಲೂಕು ಮತ್ತು ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಸೇರಿದ್ದರು. ಪ್ರತಿಜ್ಞಾವಿಧಿ ಜಯಘೋಷ, ಪ್ರಸಾದ ವಿತರಣೆಯೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ಕೊನೆಗೊಂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೇಸಿಗೆಗೆ ನೀರು ಆಪೋಶನ: ಜಲಕ್ಷಾಮ ಭೀತಿ !
371ಜೆ ಹೋರಾಟಕ್ಕೆ ಕಾಲೇಜು ವಿದ್ಯಾರ್ಥಿಗಳ ಅಭೂತಪೂರ್ವ ಬೆಂಬಲ