ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜ ಒಗ್ಗೂಡಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ದೇಶದ ಜನತೆ ಅರಿತುಕೊಳ್ಳಬೇಕಿದೆ ಎಂದು ತಿಳಿಸಿದರು.
ಮಾಜಿ ಪ್ರಧಾನಿ ರಾಜೀವ ಗಾಂಧಿಯವರ ಪಂಚಾಯತ್ ರಾಜ್ಯ ಮೀಸಲಾತಿ ಜಾರಿಗೆ ತಂದ ಬಳಿಕ ಎಲ್ಲ ಸಮುದಾಯದ ಜನರು ರಾಜಕೀಯಕ್ಕೆ ಬರಲು ಅನುಕೂಲವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಇತಿಹಾಸವಿದೆ. ಸ್ವಾತಂತ್ರ್ಯ ಪೂರ್ವದಿಂದ ಇಲ್ಲಿಯವರೆಗೂ ದೇಶದ ರಕ್ಷಣೆಗೆ ಶ್ರಮಿಸಿದ ಕಾಂಗ್ರೆಸ್‌ಗೆ ಪಾಠ ಹೇಳುವ ಅಗತ್ಯ ಬಿಜೆಪಿಗಿಲ್ಲ. ಕಳೆದ 10 ವರ್ಷದಲ್ಲಿ ದೇಶದ ಸ್ಥಿತಿ ಏನಾಗಿದೆ ಎಂಬುವುದು ದೇಶದ ಜನತೆಗೆ ಅರಿವಾಗಿದೆ. ಕಾರ್ಗಿಲ್ ಯುದ್ಧ ಸಂಭವಿಸಿದಾಗ ಬಿಜೆಪಿ ಎಲ್ಲಿತ್ತು ಎಂದು ಪ್ರಶ್ನಿಸಿದರು.ಬಿಜೆಪಿ ಮೋದಿ ಗ್ಯಾರಂಟಿ ಬಿಟ್ಟು ಈಗ ಹಿಂದುತ್ವದ ಹಾಗೂ ಹಿಂದಿನ ಹಿಡನ್ ಅಜೆಂಡಾ ಇಟ್ಟುಕೊಂಡು ಮೋದಿ ಪ್ರಚಾರ ನಡೆಸಿದ್ದಾರೆ. ಮೋದಿ ಹೆಸರಿನಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಬದಲಾವಣೆ ಮಾಡಿದ್ದು ಏಕೆ? ಇದು ಭಯ ಅಲ್ಲವೆ ಎಂದು ವ್ಯಂಗ್ಯವಾಡಿದರು.
ಕಿಡಿಗೇಡಿಗಳಿಂದ ಸಂಸತ್ತಿನಲ್ಲಿ ಸಂಸದರ ಮೇಲೆ ಹಲ್ಲೆಯಾಗಿದೆ. ಇಲ್ಲಿವರೆಗೂ ಕೇಂದ್ರ ಸರ್ಕಾರ ಯಾವುದೇ ತನಿಖೆ ನಡೆಸಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರ ಅವಧಿಯಲ್ಲಾಗಿದ್ದರೇ ಬಿಜೆಪಿಗರು ಮುಗಿ ಬೀಳುತ್ತಿದ್ದರು. ಏಕೆ ಈ ತರಹ ಮನಸ್ಥಿತಿ ನಿಮ್ಮದು?. ತಪ್ಪು ಮಾಡಿದವರನ್ನು ಇನ್ನುಳಿದ ಸಂಸದರನ್ನು ಅಮಾನತು ಮಾಡಿದೆ. ಪ್ರಜಾಪ್ರಭುತ್ವವನ್ನು ಕಟ್ಟಿಹಾಕಲು ನಾವು ಬಿಡುವುದಿಲ್ಲ ಎಂದು ಗುಡುಗಿದರು.
ನೀರಾವರಿ ಯೋಜನೆಯಾದ ಮೇಕೆದಾಟು ವಿಚಾರದಲ್ಲಿ ಕರ್ನಾಟಕವನ್ನು ನಿರ್ಲಕ್ಷಿಸಿದ ಬಿಜೆಪಿ ಮುಖಂಡ ಅಣ್ಣಾಮಲೈಗೆ ರಾಜ್ಯದ ಮೇಲೆ ಯಾವ ಹಕ್ಕಿದೆ? ಕಾವೇರಿ ನೀರಿನ ವಿಚಾರ, ಮೇಕೆದಾಟು ಯೋಜನೆ ಪ್ರತಿಭಟನೆಯಲ್ಲಿ ರಾಜ್ಯದ ನೀತಿ ಖಂಡಿಸಿದ ಬಿಜೆಪಿ ಮುಖಂಡ ಅಣ್ಣಾಮಲೈಗೆ ಇಲ್ಲಿನ ಬಿಜೆಪಿ ಚುನಾವಣೆ ಹೊಣೆ ಹೊರಿಸಲಾಗಿದೆ. ಬಿಜೆಪಿಗೆ ಸ್ವಲ್ವವಾದರೂ ಬುದ್ಧಿ ಬೇಡವಾ? ಯಾವ ಹಕ್ಕಿದೇ ಅಣ್ಣಾಮಲೈಗೆ ಇದು ನಮ್ಮ ನೇರ ಪ್ರಶ್ನೆ ಎಂದು ಕಿಡಿಕಾರಿದರು.
ಗೋಷ್ಠಿಯಲ್ಲಿ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಇದ್ದರು.
ಕೋಟ್..
-ತೇಜಸ್ವಿನಿಗೌಡ, ವಿಧಾನ ಪರಿಷತ್ತಿನ ಮಾಜಿ ಸದಸ್ಯೆ.