ಬಸ್‌ಗಾಗಿ ಸವಡಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

KannadaprabhaNewsNetwork |  
Published : Dec 10, 2024, 12:30 AM IST
9 ರೋಣ 1. ಸಮರ್ಒಕ ಸಾರಿಗೆ ಬಸ್ ಸಂಚಾರಕ್ಕೆ ಆಗ್ರಹಿಸಿ ಸವಡಿ ಗ್ರಾಮದ ಶಾಲಾ, ಕಾಲೇಜ್ ವಿದ್ಯಾರ್ಥಿಗಳು ರೋಣ ಸಾರಿಗೆ ಬಾ್ ನಿಲ್ದಾಣದಲ್ಲಿ ಬಸ್ ತಡೆದು ಪ್ರತಿಭಟಿಸಿದರು. | Kannada Prabha

ಸಾರಾಂಶ

ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಸವಡಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ರೋಣ: ಪಟ್ಟಣದಿಂದ ಸವಡಿ ಸಮರ್ಪಕ ಬಸ್ ಸೌಲಭ್ಯವಿಲ್ಲದಿರುವುದರಿಂದ ಶಾಲಾ-ಕಾಲೇಜಗಳಿಗೆ ನಿಗದಿತ ಸಮಯಕ್ಕೆ ಹೋಗಿ ಬರಲು ಆಗುತ್ತಿಲ್ಲ. ಇದರಿಂದಾಗಿ ಬೇಸತ್ತ ಗ್ರಾಮದ ವಿದ್ಯಾರ್ಥಿಗಳು ಸೋಮವಾರ ಪಟ್ಟಣದ ನಿಲ್ದಾಣದಲ್ಲಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ಸವಡಿ ಗ್ರಾಮಕ್ಕೆ ಈ ಮೊದಲು ಮಧ್ಯಾಹ್ನ 3 ಗಂಟೆಗೆ ಬಸ್ ಬಿಡಲಾಗುತ್ತಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಬಸ್ ಬಿಡದಿರುವುದರಿಂದ ಸವಡಿ ಗ್ರಾಮದಿಂದ ರೋಣ ಪಟ್ಟಣಕ್ಕೆ ಬರುವ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಊರು ತಲುಪಲು ಸಾಧ್ಯವಾಗುತ್ತಿಲ್ಲ. ಬೆಳಗ್ಗೆ, ಮಧ್ಯಾಹ್ನ ನಿಗದಿತ ಸಮಯಕ್ಕೆ ಬಸ್ ಸಂಚರಿಸುತ್ತಿಲ್ಲ. ಈ ಕುರಿತು ಸಾರಿಗೆ ಘಟಕ ವ್ಯವಸ್ಥಾಪಕರಿಗೆ ಸಾಕಷ್ಟು ವಿನಂತಿಸಿದರೂ ಸ್ಪಂದಿಸಿಲ್ಲ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ತಿಳಿಯುತ್ತಿದಂತೆ ಪ್ರತಿಭಟನಾ ಸ್ಥಳಕ್ಕೆ ದೌಡಾಯಿಸಿದ ಕೆಎಸ್ಆರ್‌ಟಿಸಿ ಸಿಬ್ಬಂದಿ, ತಾಂತ್ರಿಕ ತೊಂದರೆಯಿಂದ ಬಸ್ ವಿಳಂಬವಾಗಿದ್ದು, ಮುಂದಿನ ದಿನಗಳಲ್ಲಿ ಹೀಗಾಗದಂತೆ ನೋಡಿಕೊಳ್ಳಲಾಗುವುದು. ಈ ಕುರಿತು ವ್ಯವಸ್ಥಾಪಕರ ಗಮನಕ್ಕೂ ತರಲಾಗುವುದು ಎಂದು ಭರವಸೆ ನೀಡಿ, ತಕ್ಷಣವೇ ಗ್ರಾಮಕ್ಕೆ ಎರಡು ಬಸ್‌ಗಳ ವ್ಯವಸ್ಥೆ ಮಾಡಿದರು. ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ವಾಪಸ್ ಪಡೆದರು. ಪ್ರತಿಭಟನೆಯಲ್ಲಿ ಸವಡಿ ಗ್ರಾಮದ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಪಾಲಕರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌