ಸವಣೂರು ಸೀತಾರಾಮ ರೈಗೆ ರಾಜ್ಯಮಟ್ಟದ ಗಾಂಧಿ ಸ್ಮೃತಿ ಪ್ರಶಸ್ತಿ

KannadaprabhaNewsNetwork |  
Published : Oct 10, 2025, 01:02 AM IST
ಫೋಟೋ: ೮ಪಿಟಿಆರ್-ಗಾಂಧಿಸವಣೂರು ಸೀತಾರಾಮ ರೈ ಅವರಿಗೆ ರಾಜ್ಯಮಟ್ಟದ ಗಾಂಧಿ ಸ್ಮೃತಿ ಪ್ರಶಸ್ತಿ ಪ್ರದಾನ ಮಾಡಲಾಯಿತು. | Kannada Prabha

ಸಾರಾಂಶ

ಸುಳ್ಯ ಗಾಂಧಿ ಚಿಂತನ ವೇದಿಕೆ ವತಿಯಿಂದ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ, ಸಹಕಾರ ರತ್ನ ಸವಣೂರು ಕೆ. ಸೀತಾರಾಮ ರೈ ಅವರಿಗೆ ಅವರ ಮನೆ ರಶ್ಮಿ ನಿವಾಸದಲ್ಲಿ ರಾಜ್ಯಮಟ್ಟದ ಗಾಂಧಿ ಸ್ಮೃತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪುತ್ತೂರು: ಸವಣೂರು ಸೀತಾರಾಮ ರೈ ಅವರು ಮಹಾತ್ಮ ಗಾಂಧೀಜಿಯವರ ಚಿಂತನೆಗಳನ್ನು ಮತ್ತು ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡವರಾಗಿದ್ದು, ಅದಕ್ಕೆ ಪೂರಕವಾಗಿ ಕೆಲಸ ಕಾರ್ಯಗಳನ್ನು ನಡೆಸಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರ ಅಭಿಪ್ರಾಯಪಟ್ಟಿದ್ದಾರೆ.ಸುಳ್ಯ ಗಾಂಧಿ ಚಿಂತನ ವೇದಿಕೆ ವತಿಯಿಂದ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ, ಸಹಕಾರ ರತ್ನ ಸವಣೂರು ಕೆ. ಸೀತಾರಾಮ ರೈ ಅವರಿಗೆ ಅವರ ಮನೆ ರಶ್ಮಿ ನಿವಾಸದಲ್ಲಿ ರಾಜ್ಯಮಟ್ಟದ ಗಾಂಧಿ ಸ್ಮೃತಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.ಅಭಿನಂದನಾ ಭಾಷಣ ಮಾಡಿದ ಚಂದ್ರಶೇಖರ ಪೇರಾಲು, ಸವಣೂರು ಸೀತಾರಾಮ ರೈ ಗಾಂಧೀಜಿ ಚಿಂತನೆ ಮತ್ತು ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಗಾಂಧೀಜಿ ಗ್ರಾಮ ಸ್ವರಾಜ್ಯ, ಶಿಸ್ತು, ಸಮಯ ಪಾಲನೆ, ಸಹಕಾರ ಮನೋಭಾವನೆ ಪಾಲಿಸಿಕೊಂಡು ಗಾಂಧೀಜಿ ಸರಳತೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಶಿಕ್ಷಣ, ಸಹಕಾರ, ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡು ನಾಡಿಗೆ ಆದರ್ಶಪ್ರಾಯರಾಗಿದ್ದಾರೆ ಎಂದರು.ಸುಳ್ಯ ಗಾಂಧಿ ಚಿಂತನ ವೇದಿಕೆ ಪ್ರಧಾನ ಸಂಚಾಲಕ ಹರೀಶ್ ಬಂಟ್ವಾಳ ಅಧ್ಯಕ್ಷತೆ ವಹಿಸಿದ್ದರು.ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಹಿರಿಯ ನಿರ್ದೇಶಕ ಚಿಕ್ಕಪ್ಪ ನಾಯ್ಕ್ ಅರಿಯಡ್ಕ, ವಿಜಯ ಬ್ಯಾಂಕ್ ನಿವೃತ್ತ ಅಧಿಕಾರಿ ಎ.ಕೃಷ್ಣ ರೈ ಪುಣ್ಚಪ್ಪಾಡಿ, ಗಾಂಧಿ ಚಿಂತನ ವೇದಿಕೆ ಸಂಚಾಲಕರಾದ ಕೆ.ಆರ್.ಗೋಪಾಲಕೃಷ್ಣ, ಚಂದ್ರಾವತಿ ಬಡ್ಡಡ್ಕ, ಬಾಪು ಸಾಹೇಬ್ ಸುಳ್ಯ ಇದ್ದರು.ಗಾಂಧಿ ಚಿಂತನ ವೇದಿಕೆಯ ಸ್ಥಾಪಕ ಸಂಚಾಲಕ ಡಾ.ಸುಂದರ ಕೇನಾಜೆ ಪ್ರಸ್ತಾವಿಕ ಮಾತನಾಡಿದರು. ಸವಣೂರು ಸಿಎ ಬ್ಯಾಂಕ್ ಸಿಇಒ ಚಂದ್ರಶೇಖರ ಪಿ.ಸ್ವಾಗತಿಸಿದರು. ಗಾಂಧಿ ಚಿಂತನ ವೇದಿಕೆ ಸಂಚಾಲಕ ಶಂಕರ್ ಪೆರಾಜೆ ವಂದಿಸಿದರು. ದಿನೇಶ್ ಮಡಪ್ಪಾಡಿ ನಿರೂಪಿಸಿದರು.

PREV

Recommended Stories

ಸಂಪುಟ ಪುನರ್‌ ರಚನೆ ಸುಳಿವು : ದಲಿತ ಸಚಿವರ ಸಭೆ!
ಶೂದ್ರ ಶ್ರೀನಿವಾಸ್‌ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ