ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕರ ದಿನಾಚರಣೆ

KannadaprabhaNewsNetwork |  
Published : Aug 15, 2025, 01:00 AM IST
ಫೋಟೋ: ೧೪ಪಿಟಿಆರ್-ಸವಣೂರು ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ೧೪ನೇ ವರ್ಷದ ಸ್ಥಾಪಕರ ದಿನಾಚರಣೆ `ಶೀಂಟೂರು ಸ್ಮೃತಿ' ನಡೆಯಿತು. | Kannada Prabha

ಸಾರಾಂಶ

ಸವಣೂರಿನ ಎಸ್‌ಎನ್‌ಆರ್ ರೂರಲ್ ಎಜ್ಯುಕೇಶನ್ ಟ್ರಸ್ಟ್ ಪ್ರವರ್ತಿತ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಗುರುವಾರ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ 14ನೇ ವರ್ಷದ ಸ್ಥಾಪಕರ ದಿನಾಚರಣೆ ‘ಶೀಂಟೂರು ಸ್ಮೃತಿ’ ಕಾರ್ಯಕ್ರಮ ನೆರವೇರಿತು.

ಪುತ್ತೂರು: ಓರ್ವ ವ್ಯಕ್ತಿಯ ಶ್ರೇಷ್ಠತೆಯನ್ನು ಮೇರುಸ್ಥಿತಿಗೆ ಒಯ್ಯುವಲ್ಲಿ ಶಿಕ್ಷಣದ ಪಾತ್ರ ಪ್ರಮುಖವಾಗಿದೆ. ಶಿಕ್ಷಣವು ಬದುಕಿನ ದಾರಿಯನ್ನು ತೋರಿಸುವ ಜೊತೆಗೆ ಬದುಕಿನ ಕೊನೆಯ ತನಕ ಶ್ರೇಷ್ಠತೆಯನ್ನು ಕಾಪಾಡುವ ಕೆಲಸ ಮಾಡುತ್ತದೆ. ತಂದೆಯ ಇಚ್ಚೆಯಂತೆ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ಉನ್ನತ ಮಟ್ಟದಲ್ಲಿ ಬೆಳೆಸಿರುವ ಸವಣೂರು ಸೀತಾರಾಮ ರೈಗಳ ಕಾರ್ಯ ಮಾದರಿಯಾಗಿದೆ ಎಂದು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ಅಭಿಪ್ರಾಯಪಟ್ಟರು. ಅವರು ಸವಣೂರಿನ ಎಸ್‌ಎನ್‌ಆರ್ ರೂರಲ್ ಎಜ್ಯುಕೇಶನ್ ಟ್ರಸ್ಟ್ ಪ್ರವರ್ತಿತ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಗುರುವಾರ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ ನಡೆದ 14ನೇ ವರ್ಷದ ಸ್ಥಾಪಕರ ದಿನಾಚರಣೆ ‘ಶೀಂಟೂರು ಸ್ಮೃತಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಶಿಕ್ಷಣವು ನಮ್ಮ ಜೀವನದ ಅತೀ ಪ್ರಾಮುಖ್ಯವಾದ ಅಂಶವಾಗಿದೆ. ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಮೂಲಕ ಸವಣೂರಿನ ಹೆಸರು ಖ್ಯಾತಿ ಪಡೆದಿದೆ. ದ.ಕ. ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭಾವಂತರಿದ್ದರೂ ಐಎಎಸ್ ಐಪಿಎಸ್ ಹುದ್ದೆಗಳಲ್ಲಿ ಜಿಲ್ಲೆಯ ಅತೀ ಕಡಿಮೆ ಜನರಿದ್ದಾರೆ. ಇಂತಹ ಹುದ್ದೆಗಳನ್ನು ಪಡೆಯಬೇಕಾದರೆ ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಅಗತ್ಯತೆಯ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು. ಮಕ್ಕಳಲ್ಲಿ ಕನಸು ಬಿತ್ತುವ ಕೆಲಸದ ಜತೆಗೆ ಮೌಲ್ಯಗಳನ್ನು ತುಂಬುವ ಚಿಂತನೆ ಹೆಚ್ಚಾಗಬೇಕಾಗಿದೆ. ಬಡತನ ಎಂಬುವುದು ಯಾವ ವಿಶ್ವವಿದ್ಯಾಲಯದಲ್ಲೂ ಕಲಿಸದ ಪಾಠಗಳನ್ನು ಕಲಿಸುತ್ತದೆ. ಯಾವುದೇ ಸಂದರ್ಭದಲ್ಲಿಯೂ ನಾವು ಪ್ರಾಮಾಣಿಕತೆ ಮರೆಯಬಾರದು ಎಂದರು.ಬದುಕಿನಲ್ಲಿ ವಿದ್ಯೆ ಅತೀ ಮುಖ್ಯ:

ಈ ಸಂದರ್ಭ ನಿವೃತ್ತ ಯೋಧ ಕರ್ನಲ್ ರಾಜೇಶ್ ಹೊಳ್ಳ ಎಸ್.ಎಂ ಅವರಿಗೆ ‘ಶೀಂಟೂರು ಸನ್ಮಾನ’ ನೀಡಿ ಗೌರವಿಸಲಾಯಿತು. ಉದ್ಯಮಿ ಬಲರಾಮ ಆಚಾರ್ಯ ಸನ್ಮಾನ ಕಾರ್ಯ ನೆರವೇರಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಕರ್ನಲ್ ರಾಜೇಶ್ ಹೊಳ್ಳ ಎಸ್.ಎಂ ಅವರು ಬದುಕಿನಲ್ಲಿ ವಿದ್ಯೆ ಅತೀ ಮುಖ್ಯ. ಅಮೇರಿಕಾದಲ್ಲಿ ಶಾಲೆಗೆ ಮಕ್ಕಳನ್ನು ಕಳುಹಿಸದಿದ್ದರೆ ಅವರ ತಂದೆತಾಯಿಗಳಿಗೆ ಶಿಕ್ಷೆ ನೀಡುತ್ತಾರೆ. ಅಂತಹ ಕಾನೂನು ಭಾರತದಲ್ಲಿಯೂ ಬರಬೇಕಾಗಿದೆ. ಶಿಕ್ಷಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಸಮಾಜದ ಉನ್ನತಿಯಾಗಬೇಕಾದರೆ ಪೋಷಕರು ಮಿಲಿಟರಿಯೂ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮ ಮಕ್ಕಳನ್ನು ಕಳುಹಿಸುವ ವ್ಯವಸ್ಥೆ ಅನುಷ್ಠಾನವಾಗಬೇಕು. ಮಕ್ಕಳನ್ನು ದೈಹಿಕವಾಗಿ ಮಾತ್ರವಲ್ಲ ಮಾನಸಿಕವಾಗಿಯೂ ಬಲಿಷ್ಠಗೊಳಿಸಿದಾಗ ದೇಶಭಕ್ತಿ-ದೇಶಪ್ರೇಮದ ಜತೆಗೆ ಪ್ರಾಮಾಣಿಕತೆಯ ಚಿಂತನೆ ಹೆಚ್ಚಾಗುತ್ತದೆ. ಶಿಕ್ಷಕರಿಗೆ ಬೆಲೆ ನೀಡದ ಸಮಾಜ ಪತನವಾಗಲಿದೆ. ನಮ್ಮ ದೇಶದಲ್ಲಿ ಶೇ.65ರಷ್ಟು ಯುವಕರಿದ್ದು ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮಹತ್ತರವಾಗಿದೆ. ಯುವಕರು ತಮ್ಮ ಚಿಂತನೆಯನ್ನು ಒಳ್ಳೆಯ ಉದ್ದೇಶಕ್ಕೆ ಬಳಸಿಕೊಳ್ಳಬೇಕು ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಡ್ವಕೇಟ್ ಅಶ್ವಿನ್ ಎಲ್ ಶೆಟ್ಟಿ ಮಾತನಾಡಿ ಯಾವುದೇ ಕ್ಷೇತ್ರದಲ್ಲಿ ಬೆಳೆಯಬೇಕಾದರೂ ಕಷ್ಟ ಪಡಬೇಕು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕಷ್ಟ ಪಟ್ಟಾಗ ಮಾತ್ರ ಶಿಕ್ಷಣಸಂಸ್ಥೆ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ. ಕಷ್ಟವನ್ನು ಸಂಭ್ರಮಿಸುವ ಮನೋಭಾವ ನಮ್ಮಲ್ಲಿ ಬೆಳೆಯಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ 2025-26ನೇ ಸಾಲಿನಲ್ಲಿ ಶೀಂಟೂರು ಶಿಷ್ಯವೇತನಕ್ಕೆ ಆಯ್ಕೆಯಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಧನ್ಯಶ್ರೀ ಬಿ.ಡಿ, ದೀಕ್ಷಿತ್ ಬಿ. ಪವನ್ ಎಚ್.ಎಸ್, ಶ್ರೀರಕ್ಷ ಪಿ, ಪ್ರತೀಕ್ಷ ಪಿ, ಶಝಾ ಫಾತಿಮಾ, ಎನ್.ಆರ್. ಇಫಾ, ವಂದನ್ ರೈ ಸಿ, ದಿವಿತ್ ಮತ್ತು ಅಝ ಫಾತಿಮ ಅವರಿಗೆ ಸವಣೂರು ಸೀತಾರಾಮ ರೈ ಅವರು ಶೀಂಟೂರು ಶಿಷ್ಯವೇತನ ವಿತರಣೆ ಮಾಡಿದರು. ಸಭಾ ಕಾರ್ಯಕ್ರಮಕ್ಕೆ ಮೊದಲು ಶೀಂಟೂರು ನಾರಾಯಣ ರೈ ಅವರ ಪ್ರತಿಮೆಗೆ ಉದ್ಯಮಿ ಬಲರಾಮ ಆಚಾರ್ಯ ಅವರು ಮಾಲಾರ್ಪಣೆ ಮಾಡಿದರು. ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಮೆನೇಜರ್ ಸೂಂತೋಡು ಹೂವಯ್ಯ ಶೀಂಟೂರು ಸಂಸ್ಮರಣೆ ಮಾಡಿದರು. ವೇದಿಕೆಯಲ್ಲಿ ಸವಣೂರು ಸೀತಾರಾಮ ರೈ ಅವರ ಪತ್ನಿ ಕಸ್ತೂರಿ ಎಸ್ ರೈ, ಮಮತಾ ರೈ ಡಿಂಬ್ರಿ, ರಶ್ಮೀ ಅಶ್ವಿನ್ ಶೆಟ್ಟಿ ಅವರು ಉಪಸ್ಥಿತರಿದ್ದರು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಎನ್.ಜಯಪ್ರಕಾಶ್ ರೈ ವಂದಿಸಿದರು. ವಿದ್ಯಾರ್ಥಿ ಶಂತನುಕೃಷ್ಣ ಸಂವಿಧಾನ ಪೀಠಿಕೆ ವಾಚಿಸಿದರು. ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ರಾಜಲಕ್ಷ್ಮೀ ಎಸ್.ರೈ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ, ಉಪನ್ಯಾಸಕಿ ಸುಮಾ ಎಸ್, ಶಿಕ್ಷಕಿಯರಾದ ಚೇತನಾ, ಲಿಖಿತಾ ಎಂ.ಎನ್, ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕಿ ಪ್ರತಿಭಾ ಎಸ್ ನಿರೂಪಿಸಿದರು.

PREV

Recommended Stories

ಲೋಕಾ ಎಸ್ಪಿ ಬದ್ರಿನಾಥ್‌ ಸೇರಿ 19 ಪೊಲೀಸರಿಗೆ ರಾಷ್ಟ್ರ ಪದಕ
ಕೊಲೆ ಆರೋಪಿ ದರ್ಶನ್‌ಗೆ ತಪ್ಪದ ದಯಾನಂದ್ ಕಂಟಕ