ಕನ್ನಡಪ್ರಭ ವಾರ್ತೆ ಭದ್ರಾವತಿ
ಅವರು ಭೂಮಿಕಾ ವೇದಿಕೆಯಿಂದ ಮಹಾತ್ಮಗಾಂಧಿ ರಸ್ತೆ (ಟಿ.ಕೆ ರಸ್ತೆ)ಯಲ್ಲಿರುವ ನಯನ ಆಸ್ಪತ್ರೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಾನಪದ ವೈಭವ `ಚೌಡಿಕೆ ಗೊಂದಲಿಗರ ಪದ'''''''''''''''' ವಿಶೇಷ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಾನಪದಕ್ಕೆ ತನ್ನದೇ ಆದ ಮಹತ್ವವಿದೆ. ಕನ್ನಡನಾಡಿನ ಶ್ರೀಮಂತ ಕಲೆಗಳಲ್ಲಿ ಒಂದಾಗಿದೆ. ಇಂದಿನ ಯುವ ಸಮುದಾಯಕ್ಕೆ ಜಾನಪದ ಮಹತ್ವ ತಿಳಿಸಿಕೊಡುವ ಅಗತ್ಯವಿದೆ ಎಂದರು.ಚೌಡಿಕೆ ಕಲಾವಿದ ಲಕ್ಷ್ಮಣರಾವ್ ಭೋರತ್ ಅವರ ತಂಡದಿಂದ ನಡೆದ `ಚೌಡಿಕೆ ಗೊಂದಲಿಗರ ಪದ'''''''''''''''' ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ವೇದಿಕೆ ಪ್ರಧಾನ ಕಾರ್ಯದರ್ಶಿ ಅಪರಂಜಿ ಶಿವರಾಜ್, ಕೋಶಾಧ್ಯಕ್ಷ ಮುನಿರಾಜ್, ಪುಷ್ಪ ತಂಡದವರು ಪ್ರಾರ್ಥಿಸಿ, ಶೋಭಾ ಸ್ವಾಗತಿಸಿದರು. ರೂಪರಾವ್ ನಿರೂಪಿಸಿದರು.ಕಾರ್ಯಕ್ರಮಕ್ಕೂ ಮೊದಲು ಇತ್ತೀಚೆಗೆ ನಿಧನರಾದ ಕವಿ, ಸಾಹಿತಿ ಡಾ.ಎಚ್.ಎಸ್.ವೆಂಕಟೇಶ್ ಮೂರ್ತಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.