ಬಿಜೆಪಿಯಿಂದ ಪ್ರಜಾಪ್ರಭುತ್ವ ಉಳಿಸಿ- ಆರಾಜಕತೆ ಅಳಿಸಿ ಆಂದೋಲನ: ಸೀಕಲ್ ರಾಮಚಂದ್ರಗೌಡ

KannadaprabhaNewsNetwork |  
Published : Nov 03, 2026, 01:15 AM IST
ಸಿಕೆಬಿ-3 ಸುದ್ದಿಗೋಷ್ಠಿಯಲ್ಲಿ ಸೀಕಲ್ ರಾಮಚಂದ್ರಗೌಡ ಮಾತನಾಡಿದರು | Kannada Prabha

ಸಾರಾಂಶ

ಕಾಂಗ್ರೆಸ್ ಪಕ್ಷ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಹೋರಾಟದ ನಾಟಕ ಮಾಡುತ್ತಿದೆ. ಪಕ್ಷದ ಸ್ಥಿತಿ ಐಸಿಯು ತಲುಪಿದೆ. ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದವರಿಂದ ಪ್ರಜಾಪ್ರಭುತ್ವದ ಪಾಠ ಕಲಿಯುವ ಅಗತ್ಯವಿಲ್ಲ. ಸಂವಿಧಾನ ಉಳಿಯಬೇಕು, ಜನರ ತೀರ್ಪು ಅಂತಿಮವಾಗಬೇಕು ಹಾಗೂ ದೇಶದ ಏಕತೆ ಮತ್ತು ಸಮಗ್ರತೆ ಕಾಪಾಡಬೇಕು ಎಂಬ ಉದ್ದೇಶದಿಂದ ಬಿಜೆಪಿ ಅಭಿಯಾನ ಆರಂಭಿಸಿದೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಸೋಲು ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿಲ್ಲ. ಜನರ ತೀರ್ಪನ್ನು ಗೌರವಿಸುವ ಬದಲು ಚುನಾವಣಾ ಆಯೋಗದ ಮೇಲೆ ಆರೋಪ ಮಾಡುತ್ತಾ ಪ್ರಜಾಪ್ರಭುತ್ವ ಸಂಕಷ್ಟದಲ್ಲಿದೆ ಎಂದು ಜನರ ದಾರಿ ತಪ್ಪಿಸುತ್ತಿದೆ. ರಾಹುಲ್ ಗಾಂಧಿ ಅವರ ನಾಯಕತ್ವ ಬದಲಾವಣೆಯಾಗದಿದ್ದರೆ ಕಾಂಗ್ರೆಸ್ ಪಕ್ಷದ ಪರಿಸ್ಥಿತಿ ಸುಧಾರಿಸುವುದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ವಾಗ್ದಾಳಿ ನಡೆಸಿದರು.

ನಗರದ ಉತ್ತರ ಬಡಾವಣೆಯ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯಿಂದ ದೇಶಾದ್ಯಂತ ಹಮ್ಮಿಕೊಂಡಿರುವ ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದ ಉದ್ದೇಶವನ್ನು ವಿವರಿಸಿದರು.

ಕಾಂಗ್ರೆಸ್ ಪಕ್ಷ 2012ರಿಂದ ಇಲ್ಲಿಯವರೆಗೆ 59ಕ್ಕೂ ಹೆಚ್ಚು ವಿಧಾನಸಭಾ ಚುನಾವಣೆಗಳಲ್ಲಿ ಸೋತಿದೆ. ಆದರೆ ತನ್ನ ಸೋಲಿಗೆ ಆತ್ಮಾವಲೋಕನ ಮಾಡಿಕೊಳ್ಳುವ ಬದಲು ಚುನಾವಣಾ ಆಯೋಗ, ಇವಿಎಂ ಹಾಗೂ ಎಸ್‌ಐಆರ್‌ ಮೇಲೆ ಆರೋಪ ಮಾಡುತ್ತಿದೆ. ಕೇರಳಂ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದಾಗ ಚುನಾವಣಾ ಆಯೋಗದ ಬಗ್ಗೆ ಯಾವುದೇ ಆಕ್ಷೇಪವಿಲ್ಲ. ಆದರೆ, ಅಧಿಕಾರ ಕಳೆದುಕೊಂಡ ರಾಜ್ಯಗಳಲ್ಲಿ ಮಾತ್ರ ಚುನಾವಣಾ ವ್ಯವಸ್ಥೆಯ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದೆ. ಕಾಂಗ್ರೆಸ್ ಸೋಲಿಗೆ ಚುನಾವಣಾ ಆಯೋಗವಾಗಲಿ, ಎಸ್‌ಐಆರ್ ಆಗಲಿ ಕಾರಣವಲ್ಲ, ಪಕ್ಷದ ನಾಯಕತ್ವವೇ ಕಾರಣ ಎಂದು ಟೀಕಿಸಿದರು.

ಇವಿಎಂ ಬಗ್ಗೆ ನಿರಂತರವಾಗಿ ಆರೋಪ ಮಾಡುತ್ತಿದ್ದ ಕಾಂಗ್ರೆಸ್, ವಿಧಾನ ಪರಿಷತ್ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆದಾಗ ಸೋಲಿನ ಬಗ್ಗೆ ಏನು ಹೇಳುತ್ತದೆ? ಕಾಂಗ್ರೆಸ್‌ಗೆ ಗೆಲುವಾದರೆ ಮಾತ್ರ ಚುನಾವಣೆ ಸರಿಯಾಗಿದೆ, ಸೋತರೆ ಅಕ್ರಮ ನಡೆದಿದೆ ಎಂಬ ಧೋರಣೆ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಹೋರಾಟದ ನಾಟಕ ಮಾಡುತ್ತಿದೆ. ಪಕ್ಷದ ಸ್ಥಿತಿ ಐಸಿಯು ತಲುಪಿದೆ. ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದವರಿಂದ ಪ್ರಜಾಪ್ರಭುತ್ವದ ಪಾಠ ಕಲಿಯುವ ಅಗತ್ಯವಿಲ್ಲ. ಸಂವಿಧಾನ ಉಳಿಯಬೇಕು, ಜನರ ತೀರ್ಪು ಅಂತಿಮವಾಗಬೇಕು ಹಾಗೂ ದೇಶದ ಏಕತೆ ಮತ್ತು ಸಮಗ್ರತೆ ಕಾಪಾಡಬೇಕು ಎಂಬ ಉದ್ದೇಶದಿಂದ ಬಿಜೆಪಿ ಅಭಿಯಾನ ಆರಂಭಿಸಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ನಿರ್ಮಲಮ್ಮ ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಚ್ಎಸ್ ಮುರಳಿಧರ್ ಮತ್ತು ಮಧು ಸೂರ್ಯನಾರಾಯಣ ರೆಡ್ಡಿ, ಮುಖಂಡರಾದ ವೇಣುಗೋಪಾಲ್, ಸುರೇಂದ್ರ ಗೌಡ, ಆರ್ ಎನ್. ಅಶೋಕ್, ವಿ. ಮಧುಚಂದ್ರ, ಲಕ್ಷ್ಮೀನಾರಾಯಣ ಗುಪ್ತ, ಕೂಡ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ಕೋಡಿರ್ಲಪ್ಪ, ವೇಣು ಮಾಧವ್, ರಮೇಶ್ ರಾವ್ ಶಿಲ್ಕೆ, ಮಾರ್ಕೆಟ್ ಮೋಹನ್, ಮಹೇಶ್ ಬೈ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭುಗಿಲೆದ್ದ ಸರ್ಕಾರ ವರ್ಸಸ್‌ ಕುಮಾರಸ್ವಾಮಿ ಸ್ಟಿಂಗ್‌ ಫೈಟ್‌ - ಈಗ ಎಚ್‌ಡಿಕೆ ಚಾರ್ಜ್‌ಶೀಟ್‌
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ - ಇನ್ನೂ 3 ದಿನ ರಾಜ್ಯದೆಲ್ಲೆಡೆ ಮಳೆ