ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪ್ರಜಾಪ್ರಭುತ್ವ ಉಳಿಸಿ ಕಾರ್ಯಕ್ರಮದ ಕುರಿತ ಪಕ್ಷದ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದಲ್ಲಿ ಪ್ರಜಾಪ್ರಭುತ್ವ ವಿರೋಧ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದು, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಬಡವರು, ದೀನ ದಲಿತರು ಹಾಗೂ ಅಲ್ಪಸಂಖ್ಯಾತರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ದೊಡ್ಡ ಹುನ್ನಾರ ನಡೆಯುತ್ತಿದೆ. ಈಗಾಗಲೇ ಬಹಳಷ್ಟು ಮತಗಳನ್ನು ತೆಗೆದು ಹಾಕಲಾಗಿದೆ. ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಲ್ಲಿ ಇಂಥ ಒಂದು ಪ್ರಕ್ರಿಯೆ ನಡೆಯುತ್ತಿದ್ದು, ಇದರ ವಿರುದ್ದ ನಾವೆಲ್ಲರು ಸಂಘಟಿತವಾದ ಹೋರಾಟ ಮಾಡಬೇಕಾಗಿದೆ ಎಂದರು.
ಭಾರತದ ಚುನಾವಣಾ ಆಯೋಗವನ್ನು ಕೇಂದ್ರ ಬಿಜೆಪಿ ಸರ್ಕಾರ ಹೈಜಾಕ್ ಮಾಡಿಕೊಂಡಿದ್ದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌ರ ಮೂಲಕ ಇಂಥ ಕಾರ್ಯದಲ್ಲಿ ಬಿಜೆಪಿ ಕೈ ಹಾಕಿದೆ. ಎಸ್‌ಐಆರ್ ಅಕ್ರಮದಲ್ಲಿ ಶಾಮೀಲಾಗಿರುವ ಸಂವಿಧಾನ ದತ್ತವಾದ ಹುದ್ದೆಯಲ್ಲಿರುವ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ತಾಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ ಇನ್ನು ಮೂರ್‍ನಾಲ್ಕು ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಗುತ್ತದೆ ಎಂದರು.ಜಿಲ್ಲಾ ಹಾಗೂ ಬ್ಲಾಕ್ ಮಟ್ಟದಲ್ಲಿ ನಮ್ಮ ಬೂತ್ ಮಟ್ಟದಲ್ಲಿ ರದ್ದುಪಡಿಸಿರುವ ಮತದಾರರ ಪಟ್ಟಿಯನ್ನು ಪಡೆದುಕೊಂಡು ಅದರ ನೈಜತೆಯನ್ನು ಪರಿಶೀಲಿಸಿ, ಮರು ಸೇರ್ಪಡೆ ಮಾಡಲು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ಬೂತ್‌ಗಳಲ್ಲಿ ಸಕ್ರಿಯವಾಗಬೇಕು. ಈ ಮೂಲಕ ನಮ್ಮ ಗೆಲುವು ಮತ್ತು ನಮ್ಮ ಮತದಾರರನ್ನು ರಕ್ಷಣೆ ಮಾಡಿಕೊಳ್ಲುವ ಹೊಣೆ ನಮ್ಮದಾಗಿದೆ ಎಂದರು.