ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಡಾ.ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ರಂಗತರಂಗ ಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ರಂಗತರಂಗ ಟ್ರಸ್ಸ್ ನ ೩೦ನೇ ವಾರ್ಷಿಕೋತ್ಸವ ಅಂಗವಾಗಿ ಆಯೋಜಿಸಿದ್ದ ರಂಗತರಂಗ, ರಂಗೋತ್ಸವ ಮೂರು ದಿನಗಳ ನಾಟಕೋತ್ಸವವನ್ನು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಇತ್ತೀಚೆಗೆ ಕಲಾ ರಂಗಭೂಮಿ ಸೇರಿದಂತೆ ಸಿನಿಮಾ ವೀಕ್ಷಿಸುವ ಪ್ರೇಕ್ಷಕರ ಸಂಖ್ಯೆ ಕಡಿಮೆಯಾಗಿದೆ. ಇಂತಹ ಸಂದರ್ಭದಲ್ಲಿ ರಂಗತರಂಗ ಸಂಸ್ಥೆ ಕಳೆದ ೩೦ ವರ್ಷಗಳಿಂದ ರಂಗಭೂಮಿಯಲ್ಲಿ ತನ್ನನ್ನು ತೊಡಗಿಸಿಕೊಂಡು ಹಲವಾರು ಕಲಾವಿದರನ್ನು ಹುಟ್ಟು ಹಾಕುತ್ತಾ ಬಂದಿದೆ, ಕಲಾವಿದರಿಗೆ ಮತ್ತಷ್ಟು ಪ್ರೋತ್ಸಾಹ ನೀಡುವ ಮೂಲಕ ರಂಗತರಂಗ ಟ್ರಸ್ಟ್ ಬೆಳವಣಿಗೆಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.ರಂಗತರಂಗ ಟ್ರಸ್ಟ್ ಅಧ್ಯಕ್ಷ ಸೋಮಶೇಖರ್ ಬಿಸಲ್ವಾಡಿ ಮಾತನಾಡಿ, ನಮ್ಮ ಸಂಸ್ಥೆ ವತಿಯಿಂದ ಕಳೆದ ಮೂರು ದಶಕಗಳಿಂದ ಕಾವ್ಯ ಕಮ್ಮಟ, ನೃತ್ಯ, ನಾಟಕ ಶಿಬಿರಗಳನ್ನು ಆಯೋಜಿಸುತ್ತ ಬಂದಿದ್ದೇವೆ. ಪ್ರೇಕ್ಷಕರು ರಂಗಭೂಮಿ ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯ ಮಾಡಬೇಕಿದೆ ಎಂದರು.
ಸಾಲಿಗ್ರಾಮ ಹುಚ್ಚಮ್ಮ ಕಾಳನಿಂಗೇಶ್ವರ ನಾಟಕ ಮಂಡಳಿ ಕಲಾವಿದರಿಂದ ರಾಜಾವಿಕ್ರಮ ಅಥವಾ ಶನಿಪ್ರಭಾವ ನಾಟಕ ಪ್ರದರ್ಶಿಸಿದರು.