ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ನೀಲನಹಳ್ಳಿಯಲ್ಲಿ ಶ್ರೀವಿನಾಯಕ ಗೆಳೆಯರ ಬಳಗದಿಂದ ಆಯೋಜಿಸಿದ್ದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿ, ಈ ಹಿಂದೆ ರಾಷ್ಟ್ರೀಯ ಕ್ರೀಡೆಯಾಗಿದ್ದ ಕಬಡ್ಡಿ ಆಟವು ಈಗ ಅಂತಾರಾಷ್ಟ್ರೀಯ ಕ್ರೀಡೆಯಾಗಿ ಮಾರ್ಪಟ್ಟಿದೆ. ಜತೆಗೆ ಕಬಡ್ಡಿ ಕ್ರೀಡಾಪಟುಗಳು ರೂಪುಗೊಳ್ಳುತ್ತಿದ್ದು, ಅವರನ್ನು ಉತ್ತೇಜಿಸಿ ಪ್ರೋತ್ಸಾಹಿಸುವ ಕೆಲಸ ಆಗಬೇಕು ಎಂದರು.
ಗ್ರಾಮೀಣ ಪ್ರದೇಶದಲ್ಲಿ ಪ್ರತಿಭಾವಂತರು ಹೇರಳವಾಗಿದ್ದಾರೆ. ಜತೆಗೆ ಆರೋಗ್ಯವಂತರಾಗಿ ಸದೃಢ ಮೈಕಟ್ಟು ಹೊಂದಿದ್ದಾರೆ. ಆದರೆ, ನಗರ ಪ್ರದೇಶಗಳಲ್ಲಿ ಪ್ರತಿಭಾವಂತರ ಸಂಖ್ಯೆ ಕ್ಷೀಣ. ಹೀಗಾಗಿ ಗ್ರಾಮೀಣ ಪ್ರತಿಭೆಗಳನ್ನು ಬೆಳೆಸಬೇಕಿದೆ ಎಂದರು.ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ವಿವಿಧ ಜಿಲ್ಲೆಗಳಿಂದ ನೂರಾರು ಕ್ರೀಡಾಪಟುಗಳು ಭಾಗಿಯಾಗಿದ್ದರು.
ಕಲಾವಿದರಿಂದ ಅರ್ಜಿ ಆಹ್ವಾನಶ್ರೀರಂಗಪಟ್ಟಣ: ಪಟ್ಟಣದಲ್ಲಿ ಅಕ್ಟೋಬರ್ 4 ರಿಂದ ಶ್ರೀರಂಗಪಟ್ಟಣ ದಸರಾವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮಕ್ಕೆ ಕಲಾವಿದರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಯನ್ನು ಸೆಪ್ಟಂಬರ್ 20 ರೊಳಗೆ ತಮ್ಮ ಕಲಾಪ್ರಕಾರ ಮಾಹಿತಿಯೊಂದಿಗೆ ಬ್ಯಾಂಕ್ ಖಾತೆ ಜೆರಾಕ್ಸ್ ಪ್ರತಿ ಸಹಿತ ಮಂಡ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ- 08232-223197 ಅನ್ನು ಸಂಪರ್ಕಿಸಬಹುದು.11 ರಂದು ಕುಂದು ಕೊರತೆ ಸಭೆ
ಮಂಡ್ಯ: ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ನಗರದ ಜಿಪಂ ಕಾವೇರಿ ಸಭಾಂಗಣದಲ್ಲಿ ಸೆ.11 ರಂದು ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆಯನ್ನು ಆಯೋಜಿಸಲಾಗಿದೆ. ಜಿಲ್ಲಾ ವ್ಯಾಪ್ತಿಯ ನೋಂದಾಯಿತ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಸಂಘ/ಸಂಸ್ಥೆ ವತಿಯಿಂದ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಸಭೆಗೆ ಹಾಜರಾಗಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.