ಕನ್ನಡಪ್ರಭ ವಾರ್ತೆ ಚಾಮರಾಜನಗರ
ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಜನ್ಮದಿನಾಚರಣೆಯ ಅಂಗವಾಗಿ ಡಾ.ಎಚ್.ಸಿ.ಮಹದೇವಪ್ಪ ಅಭಿಮಾನಿ ಬಳಗದ ವತಿಯಿಂದ ಏ.20 ರಂದು ಭಾನುವಾರ ರಾಜ್ಯಮಟ್ಟದ ಒಂದು ದಿನದ ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಅಭಿಮಾನಿಗಳ ಬಳಗದ ಅಧ್ಯಕ್ಷ ಡಾ.ವಿ.ಎನ್.ಮಹದೇವಯ್ಯ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಡಾ.ಎಚ್.ಸಿ.ಮಹದೇವಪ್ಪ ವೈಚಾರಿಕ ಹಿನ್ನೆಲೆಯಿಂದ ಬಂದು ರಾಜಕೀಯ ಪ್ರವೇಶಿಸಿದರು. ಯಾವುದೇ ಕಪ್ಪು ಚುಕ್ಕಿ ಇಲ್ಲದೆ ತಮಗೆ ಸಿಕ್ಕ ಖಾತೆಗಳನ್ನು ನಿಭಾಯಿಸಿಕೊಂಡು ಬಂದಿದ್ದಾರೆ. ಅಂಬೇಡ್ಕರ್ ಅವರ ಆಶಯ, ಚಿಂತನೆಗಳನ್ನು ಮೈಗೂಡಿಸಿಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಅವರ ಹುಟ್ಟುಹಬ್ಬದ ಅಂಗವಾಗಿ ರಾಜ್ಯ ಮಟ್ಟದ ಒಂದು ದಿನದ ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏ.20ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ವಿಚಾರ ಸಂಕಿರಣ ಸಮಾರಂಭವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಉದ್ಘಾಟಿಸಲಿದ್ದಾರೆ. ಚನ್ನಲಿಂಗನಹಳ್ಳಿ ಜೇತವನ ಬುದ್ಧವಿಹಾರದ ಬಂತೆ ಮನೋರತ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ದರ್ಶನ್‌ಧ್ರುವನಾರಾಯಣ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು,ರಂಗಕಲಾವಿದರಾದ ಡಾ.ದು.ಸರಸ್ವತಿ ಅವರು ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳು ಕುರಿತು ವಿಷಯ ಮಂಡಿಸಲಿದ್ದಾರೆ. ಮುಖ್ಯಮಂತ್ರಿ ಮಾಜಿ ಮಾಧ್ಯಮ ಸಲಹೆಗಾರ, ಚಿಂತಕ ದಿನೇಶ್ ಅಮಿನ್ ಮಟ್ಟು ದೇಶದ ಬಿಕ್ಕುಟ್ಟುಗಳ ಹಿಂದೆ ಮಾಧ್ಯಮಗಳ ಪಾತ್ರ ಕುರಿತು ವಿಚಾರ ಮಂಡಿಸಲಿದ್ದಾರೆ ಎಂದರು. ಪತ್ರಕರ್ತ ಡಾ.ರಾಘವೇಂದ್ರ ಕೆ.ತೊಗರ್ಸಿ ಧರ್ಮ ರಾಜಕಾರಣ ಅಪಾಯದಲ್ಲಿ ದೇಶ ವಿಷಯ ಕುರಿತು, ಹೈಕೋರ್ಟ್ ನ್ಯಾಯವಾದಿ ಬಾಲನ್ ಹೊಸ ಕಾನೂನುಗಳು ಮತ್ತು ನ್ಯಾಯ ನಿರೀಕ್ಷೆ ಕುರಿತು ಬೆಂಗಳೂರು ನ್ಯಾಷನಲ್ ಕಾಲೇಜು ಪ್ರಾಧ್ಯಾಪಕ ಡಾ.ರವಿಕುಮಾರ್ ಭಾಗಿಯಾಗಲಿದ್ದು ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳು ಕುರಿತು ವಿಚಾರ ಮಂಡಿಸಲಿದ್ದಾರೆ ಎಂದರು.ಸಂಜೆ ಸಮಾರೋಪ ಸಮಾರಂಭದಲ್ಲಿ ಮೈಸೂರು ವಿಶ್ವಮೈತ್ರಿ ಬುದ್ಧವಿಹಾರದ ಬಂತೆ ಡಾ.ಕಲ್ಯಾಣಸಿರಿ ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ಎ.ಆರ್.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಸುನಿಲ್ ಬೋನ್ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ ಎಂದರು. ವಿಪ ಸದಸ್ಯ ಡಿ.ತಿಮ್ಮಯ್ಯ ಸಮಾರೋಪ ಭಾಷಣ ಮಾಡಲಿದ್ದಾರೆ. ಅತಿಥಿಗಳಾಗಿ ಮಾಜಿ ಶಾಸಕ ಆರ್.ನರೇಂದ್ರ, ಜಿ.ಎನ್.ನಂಜುಂಡಸ್ವಾಮಿ, ಕಾಡಾ ಅಧ್ಯಕ್ಷ ಪಿ,ಮರಿಸ್ವಾಮಿ, ಚಾಮುಲ್ ಅಧ್ಯಕ್ಷ ಎಂ.ನಂಜುಂಡಸ್ವಾಮಿ, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಕರ್, ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರ ಸಮಿತಿ ಅಧ್ಯಕ್ಷ ಎಚ್.ವಿ.ಚಂದ್ರು ಕೊಳ್ಳೇಗಾಲ ನಗರಸಭೆ ಅಧ್ಯಕ್ಷೆ ರೇಖಾರಮೇಶ್, ಯಳಂದೂರು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ, ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ನಲ್ಲೂರು ಸೋಮೇಶ್ವರ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಬಿ.ಆರ್. ಅಂಬೇಡ್ಕವರ ಅನುಯಾಯಿಗಳು, ಸಚಿವ ಮಹದೇವಪ್ಪ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಅಭಿಮಾನಿ ಬಳಗದ ಪಿ.ಸಂಘಸೇನ, ಕೆ.ಎಂ.ನಾಗರಾಜು, ಜಿಪಂ ಮಾಜಿ ಸದಸ್ಯ ನಾಗರಾಜು ಕಮಲ್, ರಾಜೇಂದ್ರ ಹೊನ್ನೂರು, ಕೆಸ್ತೂರು ಚಿನ್ನಸ್ವಾಮಿ, ಉತ್ತಂಬಳ್ಳಿ ಲಿಂಗಣ್ಣ, ಮರಿಸ್ವಾಮಿ ಚಾಟೀಪುರ, ದೊಡ್ಡರಾಯಪೇಟೆ ಸಿದ್ದರಾಜು ಇದ್ದರು.