ಪ್ರಕೃತಿ ಉಳಿಸುವ ಕೆಲಸ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಜನನಿ ಫೌಂಡೇಶನ್ ಅಧ್ಯಕ್ಷೆ ಭಾನುಮತಿ

KannadaprabhaNewsNetwork |  
Published : Jun 21, 2026, 01:30 AM IST
20ಎಚ್ಎಸ್ಎನ್4 :  | Kannada Prabha

ಸಾರಾಂಶ

ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ಸುಮಾರು ೪೦ಕ್ಕೂ ಹೆಚ್ಚು ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಲಾಯಿತು. ಗಿಡಗಳನ್ನು ನೆಡುವುದರ ಜೊತೆಗೆ ಅವುಗಳ ಸಮರ್ಪಕ ಪಾಲನೆ ಮತ್ತು ಪೋಷಣೆ ಮಾಡುವ ಸಂಕಲ್ಪವನ್ನೂ ಕಾರ್ಯಕ್ರಮದಲ್ಲಿ ಕೈಗೊಳ್ಳಲಾಯಿತು. ಗಿಡಗಳು ಕೇವಲ ನೆರಳು ಮತ್ತು ಹಣ್ಣುಗಳನ್ನು ನೀಡುವುದಲ್ಲದೆ, ಪರಿಸರ ಸಮತೋಲನ ಕಾಪಾಡುವಲ್ಲಿ ಹಾಗೂ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂಬ ಸಂದೇಶವನ್ನು ಮಕ್ಕಳಿಗೆ ತಿಳಿಸಲಾಯಿತು.

ಕನ್ನಡಪ್ರಭವಾರ್ತೆ, ಹಾಸನ

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಮುಂದಿನ ಪೀಳಿಗೆಗೆ ಹಸಿರು ಪರಿಸರವನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ನಗರದ ಹೊರವಲಯದ ಮಣಚನಹಳ್ಳಿ-ಹರಳಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜನನಿ ಫೌಂಡೇಶನ್ ಹಾಗೂ ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ಸನ್‌ಶೈನ್ ಲೀಜನ್ ವತಿಯಿಂದ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ಸುಮಾರು ೪೦ಕ್ಕೂ ಹೆಚ್ಚು ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಲಾಯಿತು. ಗಿಡಗಳನ್ನು ನೆಡುವುದರ ಜೊತೆಗೆ ಅವುಗಳ ಸಮರ್ಪಕ ಪಾಲನೆ ಮತ್ತು ಪೋಷಣೆ ಮಾಡುವ ಸಂಕಲ್ಪವನ್ನೂ ಕಾರ್ಯಕ್ರಮದಲ್ಲಿ ಕೈಗೊಳ್ಳಲಾಯಿತು. ಗಿಡಗಳು ಕೇವಲ ನೆರಳು ಮತ್ತು ಹಣ್ಣುಗಳನ್ನು ನೀಡುವುದಲ್ಲದೆ, ಪರಿಸರ ಸಮತೋಲನ ಕಾಪಾಡುವಲ್ಲಿ ಹಾಗೂ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂಬ ಸಂದೇಶವನ್ನು ಮಕ್ಕಳಿಗೆ ತಿಳಿಸಲಾಯಿತು.ಜನನಿ ಫೌಂಡೇಶನ್ ಅಧ್ಯಕ್ಷೆ ಭಾನುಮತಿ ಮಾತನಾಡಿ, ಪ್ರಕೃತಿಯನ್ನು ಉಳಿಸುವ ಕೆಲಸ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದನ್ನು ಪೋಷಿಸುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ಕೈಜೋಡಿಸಬೇಕು ಎಂದು ಕರೆ ನೀಡಿದರು. ಶಾಲಾ ಮಕ್ಕಳಲ್ಲಿ ಪರಿಸರದ ಬಗ್ಗೆ ಕಾಳಜಿ ಮತ್ತು ಜವಾಬ್ದಾರಿಯ ಮನೋಭಾವ ಬೆಳೆಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.ಶಾಲೆಯ ಮುಖ್ಯೋಪಾಧ್ಯಾಯೆ ಶಾಂತಲಕ್ಷ್ಮಿ ಹಾಗೂ ಸಹ ಶಿಕ್ಷಕಿ ಸಿದ್ದಲಿಂಗಮ್ಮ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಗಿಡ ನೆಡುವ ಕಾರ್ಯದಲ್ಲಿ ಪಾಲ್ಗೊಂಡರು. ನೆಟ್ಟ ಪ್ರತಿಯೊಂದು ಗಿಡಕ್ಕೂ ನೀರೆರೆದು ಅದರ ಆರೈಕೆಯ ಜವಾಬ್ದಾರಿಯನ್ನು ಮಕ್ಕಳು ಮತ್ತು ಶಿಕ್ಷಕರು ಸ್ವಯಂಪ್ರೇರಿತರಾಗಿ ವಹಿಸಿಕೊಂಡರು. ಗಿಡಗಳನ್ನು ಉಳಿಸಿ ಬೆಳೆಸಿದಾಗ ಮಾತ್ರ ಇಂತಹ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ ಎಂಬ ಅರಿವನ್ನು ವಿದ್ಯಾರ್ಥಿಗಳಿಗೆ ಮೂಡಿಸಲಾಯಿತು.ಕಾರ್ಯಕ್ರಮದಲ್ಲಿ ಜನನಿ ಫೌಂಡೇಶನ್‌ ಪದಾಧಿಕಾರಿಗಳಾದ ಚಂದ್ರಮ್ಮ, ಸುಂದರಮ್ಮ, ಪುಷ್ಪ, ಜ್ಯೋತಿ, ನಾಗಮ್ಮ, ಲೀಲಾ ಹಾಗೂ ಸಿಂಚನ ಸಕ್ರಿಯವಾಗಿ ಭಾಗವಹಿಸಿ ಗಿಡ ನೆಡುವ ಕಾರ್ಯಕ್ಕೆ ಸಹಕಾರ ನೀಡಿದರು. ಅಲ್ಲದೆ ಗ್ರಾಮಸ್ಥರು, ಮಹಿಳೆಯರು, ಮಕ್ಕಳ ಪೋಷಕರು ಹಾಗೂ ಸಾರ್ವಜನಿಕರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಪರಿಸರ ಸಂರಕ್ಷಣೆಯ ಸಂಕಲ್ಪಕ್ಕೆ ಬೆಂಬಲ ವ್ಯಕ್ತಪಡಿಸಿದರು.ಕಾರ್ಯಕ್ರಮದ ಕೊನೆಯಲ್ಲಿ ಶಾಲಾ ಆವರಣವನ್ನು ಇನ್ನಷ್ಟು ಹಸಿರುಗೊಳಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು ಅವುಗಳನ್ನು ಸಂರಕ್ಷಿಸುವ ಯೋಜನೆ ರೂಪಿಸಲಾಗಿದೆ ಎಂದು ಆಯೋಜಕರು ತಿಳಿಸಿದರು. ಪರಿಸರ ಉಳಿದರೆ ಮಾತ್ರ ಭವಿಷ್ಯದ ಬದುಕು ಸುರಕ್ಷಿತ ಎಂಬ ಸಂದೇಶದೊಂದಿಗೆ ವಿಶ್ವ ಪರಿಸರ ದಿನವನ್ನು ಯಶಸ್ವಿಯಾಗಿ ಆಚರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೂಲೆ ಮಂಟಪ ಧ್ವಂಸ: ಕಿಡಿಗೇಡಿಗಳನ್ನು ಬಂಧಿಸಿದ ಪೊಲೀಸರ ವಿರುದ್ಧ ಆಕ್ರೋಶ
ಮದ್ದೂರು ತಾಲೂಕಿಗೆ ಹೊಸದಾಗಿ 5 ಪಬ್ಲಿಕ್ ಶಾಲೆಗಳು ಮಂಜೂರು: ಕೆ.ಎಂ.ಉದಯ್