ಕನ್ನಡಪ್ರಭ ವಾರ್ತೆ ಕಾಪು
ಕೃಷಿ ಹಾಗೂ ಅಂತರ್ಜಲ ವೃದ್ಧಿಗೆ ಕೆರೆಗಳು ಪ್ರಮುಖ ಪಾತ್ರ ವಹಿಸುತ್ತವೆ. ನೀರಿನ ಶೇಖರಣೆಗೆ ಕೆರೆಗಳು ಅತೀ ಮುಖ್ಯ. ಜೀವಜಲ ಉಳಿಸುವುದು ಪುಣ್ಯದ ಕಾರ್ಯ. ಹಳೆಯ ಕೆರೆಗಳನ್ನು ಉಳಿಸಿದರೆ ಮುಂದಿನ ಜೀವ ಕುಲ ಉಳಿದೀತು ಎಂದು ರಾಜ್ಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪೂರ್ವ ಅಧ್ಯಕ್ಷ ಕಟ್ಟಿಂಗೇರಿ ದೇವದಾಸ್ ಹೆಬ್ಬಾರ್ ಹೇಳಿದ್ದಾರೆ.ಶನಿವಾರ ಬೆಳ್ಳೆ ಗ್ರಾ.ಪಂ. ವ್ಯಾಪ್ತಿಯ ಪಡುಬೆಳ್ಳೆ ಸಮೀಪ ಶ್ರೀಕ್ಷೇತ್ರ ಧ. ಗ್ರಾ.ಯೋ.ಮೂಲಕ ‘ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದಲ್ಲಿ ಕುರುಡಾಯಿ ಕೆರೆಯ ಹೂಳೆತ್ತುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶ್ರೀಕ್ಷೇತ್ರ ಧ.ಗ್ರಾ. ಯೋಜನೆ ಮೂಲಕ ಸಮಾಜಮುಖಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ. ಹುಟ್ಟಿನಿಂದ ಸಾಯುವವರೆಗೆ ಮನುಷ್ಯರಿಗೆ ಏನೆಲ್ಲಾ ಅಗತ್ಯ ಇದೆಯೋ ಅದನ್ನೆಲ್ಲಾ ಗ್ರಾ.ಅ.ಯೋಜನೆಗಳ ಮೂಲಕ ಸಾಕಾರಗೊಳಿಸಲಾಗುತ್ತಿದೆ. ಈಗಾಗಲೇ ೮೦೦ಕ್ಕೂ ಅಧಿಕ ಕೆರಗಳ ಜೀರ್ಣೋದ್ದಾರ ಮಾಡಲಾಗಿದೆ ಎಂದರು.ಕಾಪು ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ ಮಾತನಾಡಿ, ಎಲ್ಲಾ ಜೀವ ರಾಶಿಗಳಿಗೂ ನೀರು ಅತ್ಯಂತ ಅಮೂಲ್ಯವಾಗಿದ್ದು ಅದನ್ನು ಪೂಜ್ಯರು ಮನಗಂಡು ಈ ಕಾರ್ಯವನ್ನು ಕೈಗೊಂಡಿದ್ದಾರೆ. ಇದಕ್ಕೆ ಸರ್ವರ ಸಹಕಾರ ಅತ್ಯಗತ್ಯ ಎಂದರು.
ಗ್ರಾ.ಪಂ.ಸದಸ್ಯ ಹಾಗೂ ಕುರುಡಾಯಿ ಕೆರೆ ಸಮಿತಿಯ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬೆಳ್ಳೆ ಗ್ರಾ.ಪಂ.ಅಧ್ಯಕ್ಷೆ ದಿವ್ಯಾ ಆಚಾರ್ಯ, ಉಪಾಧ್ಯಕ್ಷ ಶಶಿಧರ ವಾಗ್ಲೆ, ಜನಜಾಗೃತಿ ಸಮಿತಿ ಸದಸ್ಯೆ ಸುಜಾತಾ ಸುವರ್ಣ, ಜನಜಾಗೃತಿ ವೇದಿಕೆ ಪೂರ್ವಾಧ್ಯಕ್ಷ ನವೀನ್ ಅಮೀನ್ ಶಂಕರಪುರ, ಕೇಂದ್ರ ಸಮಿತಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಪ್ರಮುಖರಾದ ಸ್ಯಾಮ್ಸನ್, ಶ್ರೀನಿಧಿ ಪ್ರಭು, ಗ್ರಾ.ಪಂ.ಸದಸ್ಯರಾದ ಸಂತೋಷ್, ಪ್ರೇಮಾ, ವೆಂಕಟೇಶ್, ಅಮಿತಾ ಉಪಸ್ಥಿತರಿದ್ದರು.ಮೇಲ್ವಿಚಾರಕಿ ಗೀತಾ ನಿರೂಪಿಸಿದರು. ದೇವೇಂದ್ರ ನಾಯಕ್ ಸ್ವಾಗತಿಸಿದರು. ಸೇವಾ ಪ್ರತಿನಿಧಿಗಳಾದ ದಿವ್ಯಾ, ಮಲ್ಲಿಕಾ, ಲಕ್ಷ್ಮೀ, ಶೌರ್ಯ ಘಟಕದ ಸದಸ್ಯರು ಇದ್ದರು.