ಕೇಂದ್ರ ಬಜೆಟ್‌ನಲ್ಲಿ ಮಧ್ಯಮ ವರ್ಗಕ್ಕೆ ಉಳಿತಾಯ: ಸಂಸದ ಕೋಟ

KannadaprabhaNewsNetwork |  
Published : Feb 18, 2025, 12:30 AM IST
15ಬಜೆಟ್‌ | Kannada Prabha

ಸಾರಾಂಶ

ಉಡುಪಿ ಜಿಲ್ಲಾ ಬಿಜೆಪಿ ಆರ್ಥಿಕ ಕೋಶ ವತಿಯಿಂದ ‘ಕೇಂದ್ರ ಬಜೆಟ್, ಭಾರತೀಯ ಆರ್ಥಿಕತೆ ಮತ್ತು ಆದಾಯ ತೆರಿಗೆಯಲ್ಲಿ ಇತ್ತೀಚಿನ ಸುಧಾರಣೆಗಳು’ ಕುರಿತ ಕಾರ್ಯಕ್ರಮವನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಮಧ್ಯಮ ವರ್ಗಕ್ಕೆ ಬಹಳ ಪ್ರಯೋಜನಗಳು ಸಿಕ್ಕಿವೆ. ಮುಖ್ಯವಾಗಿ ಮಧ್ಯಮ ವರ್ಗದವರ ಆದಾಯದಲ್ಲಿ ವಾರ್ಷಿಕ 12.5ಲಕ್ಷ ರು.ಗಳವರೆಗೆ ತೆರಿಗೆ ವಿನಾಯಿತಿ ಸಿಕ್ಕಿದೆ. ಇದರಿಂದ ಮಧ್ಯಮ ವರ್ಗದವರ ಸೀಮಿತ ಆದಾಯದಲ್ಲಿ ಉಳಿತಾಯವಾಗಲಿದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಶನಿವಾರ, ಉಡುಪಿ ಜಿಲ್ಲಾ ಬಿಜೆಪಿ ಆರ್ಥಿಕ ಕೋಶ ವತಿಯಿಂದ ಆಯೋಜಿಸಲಾದ ‘ಕೇಂದ್ರ ಬಜೆಟ್, ಭಾರತೀಯ ಆರ್ಥಿಕತೆ ಮತ್ತು ಆದಾಯ ತೆರಿಗೆಯಲ್ಲಿ ಇತ್ತೀಚಿನ ಸುಧಾರಣೆಗಳು’ ಕುರಿತ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಬಜೆಟ್ ಬಗ್ಗೆ ಅಪಪ್ರಚಾರಕ್ಕೆ ಅವಕಾಶ ಕಲ್ಪಿಸದೆ, ಜನ ಸಾಮಾನ್ಯರಿಗೆ ಸುಳ್ಳು ಹಾಗೂ ಸತ್ಯವನ್ನು ಮನವರಿಕೆ ಮಾಡಿಕೊಡಬೇಕು. ಪ್ರಜಾಪ್ರಭುತ್ವದಲ್ಲಿ ಚರ್ಚೆ, ವಾದ, ಟೀಕೆ, ಟಿಪ್ಪಣಿ, ವಿಮರ್ಶೆ ಸಹಜ. ಆದರೆ ಸತ್ಯಕ್ಕೆ ಅಪಚಾರವಾಗದಂತೆ ನ್ಯಾಯ ಒಪ್ಪಿಕೊಳ್ಳಬೇಕು. ಮುಖಕ್ಕೆ ಬೆಲೆ ನೀಡಬೇಕು, ಮುಖವಾಡಕ್ಕಲ್ಲ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಉಡುಪಿ ಶಾಸಕ ಯಶಪಾಲ್ ಎ. ಸುವರ್ಣ ಮಾತನಾಡಿದರು.ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಆರ್ಥಿಕ ಕೋಶ ಸಹ ಸಂಚಾಲಕ ಸುಧೀರ್ ಆರ್. ಭಟ್ ಇದ್ದರು.

ಕೇಂದ್ರ ಬಜೆಟ್ -2025 ಮತ್ತು ಭಾರತೀಯ ಆರ್ಥಿಕತೆ ಕುರಿತು ಬೆಂಗಳೂರಿನ ಹಿರಿಯ ಆರ್ಥಿಕ ತಜ್ಞ ವಿಶ್ವನಾಥ್ ಭಟ್ ಹಾಗೂ ‘ಆದಾಯ ತೆರಿಗೆ ಕಾಯಿದೆಯಲ್ಲಿ ಇತ್ತೀಚಿನ ಸುಧಾರಣೆಗಳು’ ವಿಷಯವಾಗಿ ಉಡುಪಿಯ ಹಿರಿಯ ಲೆಕ್ಕ ಪರಿಶೋಧಕ ಸಿಎ ಶ್ರೀಧರ ಕಾಮತ್ ಮಾತನಾಡಿದರು.

ಬಿಜೆಪಿ ಆರ್ಥಿಕ ಕೋಶದ ಸಂಚಾಲಕ ದಿವಾಕರ್ ಶೆಟ್ಟಿ ಸ್ವಾಗತಿಸಿದರು. ದಿಲೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ