ಜಿಲ್ಲಾಡಳಿತದಿಂದ ಸವಿತಾ ಮಹರ್ಷಿ ಜಯಂತಿ ಆಚರಣೆ

KannadaprabhaNewsNetwork | Published : Feb 18, 2024 1:36 AM

ಸಾರಾಂಶ

ಸವಿತಾ ಸಮಾಜವನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಮತ್ತು ಸಮಾಜವನ್ನು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಮುಂದೆ ತರುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು.

ರಾಯಚೂರು: ಸವಿತಾ ಸಮಾಜವನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಮತ್ತು ಸಮಾಜವನ್ನು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಮುಂದೆ ತರುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು. ಸವಿತಾ ಮಹರ್ಷಿಗಳ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಹಾಯಕ ಆಯುಕ್ತ ಎಸ್.ಎಸ್ ಸಂಪಗಾವಿ ಹೇಳಿದರು.

ಸ್ಥಳೀಯ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿ ಜಯಂತಿಯನ್ನು ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.ಸವಿತಾ ಮಹರ್ಷಿ ಸಾಧಕ ವ್ಯಕ್ತಿಯಾಗಿದ್ದು, ಕ್ಷವರಿಕ ಸಮಾಜದ ಮೂಲ ಪುರುಷರಾಗಿದ್ದಾರೆ. ಲೋಕದ ಜ್ಞಾನವನ್ನು ಹೊಂದಿದ್ದ ಮತ್ತು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ನಿಟ್ಟಿನಲ್ಲಿ ಉತ್ತಮ ಸಂದೇಶಗಳನ್ನು ನೀಡಿದ್ದಾರೆ. ಅಂತಹ ಮಹಾನ್ ಮಹರ್ಷಿಗಳ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜೀವನಕ್ಕೆ ಸಾರ್ತಕತೆ ಸಿಗುತ್ತದೆ ಎಂದು ತಿಳಿಸಿದರು.

ಇದೇ ವೇಳೆ ತಹಶೀಲ್ದಾರ ಸುರೇಶ ವರ್ಮಾ ಮಾತನಾಡಿ, ಮನುಕುಲದ ಉದ್ದಾರಕ್ಕಾಗಿ ಜನ್ಮವೆತ್ತಿ, ಮಾನಕುಲಕ್ಕೆ ಸಮ ಸಮಾಜದ ಸಂದೇಶವನ್ನು ಸಾರಿ, ಮನುಷ್ಯನ ದೈಹಿಕ ಮತ್ತು ಮಾನಸಿಕ ವ್ಯಕ್ತಿತ್ವವನ್ನು ರೂಪಿಸುಯವ ನಿಟ್ಟಿನಲ್ಲಿ ಸಾಕಷ್ಟು ವಿಚಾರಗಳನ್ನು ನೀಡಿದ್ದಾರೆ. ಪ್ರತಿಯೊಬ್ಬರ ಮುಂದಿನ ಪೀಳಿಗೆಗೆ ಮಾನವೀಯ ಮೌಲ್ಯಗಳನ್ನು ಬೆಳಸಬೇಕು ಎಂದರು.

ಸಮಾರಂಭದಲ್ಲಿ ಸವಿತಾ ಸಮಾಜದ ತಾಲೂಕು ಅಧ್ಯಕ್ಷ ಭೀಮೇಶ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಸವಿತಾ ಸಮಾಜದ ಮುಖಂಡರಾದ ರಾಗವೇಂದ್ರ ಇಟಗಿ, ವಿಜಯಭಾಸ್ಕರ ಇಟಗಿ, ಸುಮಾ ಗಸ್ತಿ, ನರಸರೆಡ್ಡಿ, ಆರ್ನಾಗರಾ, ವಿ.ಗೋವಿಂದ, ವೆಂಕಟೇಶ, ಕೆ.ಶ್ರೀನಿವಾಸ, ಎ.ಎಸ್‌,ರಘುಕುಮಾರ್‌, ಗಾಯತ್ರಿ, ವಿರೇಶ ಇಲಕಲ್, ಉರುಕುಂದಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸವಿತಾ ಮಹರ್ಷಿ ಭಾವಚಿತ್ರ ಮೆರವಣಿಗೆ: ಕಾರ್ಯಕ್ರಮಕ್ಕೂ ಮೊದಲು ನಗರದ ಗೋವಿಂದ ರಾವ್ ಪೆಟ್ರೋಲ್ ಬಂಕ್ ಹತ್ತಿರ ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಆರಂಭಗೊಂಡ ಮೆರವಣಿಗೆ ವಿವಿಧ ಕಲಾ ತಂಡಗಳೊಂದಿಗೆ ಸಾಗಿ ರಂಗಮಂದಿರವನ್ನು ತಲುಪಿತು.

Share this article