ಉಡುಪಿ: ಸವಿತಾ ಸಮಾಜವು ತಮ್ಮ ವೃತ್ತಿಯಲ್ಲಿ ಪ್ರಾಮಾಣಿಕತೆ ಮತ್ತು ಸೃಜನಶೀಲತೆಯನ್ನು ಹೊಂದುವ ಮೂಲಕ ಸಮಾಜಕ್ಕೆ ಕೊಡುಗೆ ನೀಡುತ್ತಿದ್ದು, ವೃತ್ತಿಯ ಮೂಲ ಪುರುಷರಾದ ಸವಿತಾ ಮಹರ್ಷಿ ಅವರ ಆದರ್ಶ ಪಾಲನೆ ಸಮಾಜದ ಏಳಿಗೆಗೆ ಅಗತ್ಯ ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ ಎ ಗಫೂರ್ ಹೇಳಿದರು.
ಉಡುಪಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ರಾಜು ಸಿ. ಭಂಡಾರಿ ಕಿನ್ನಿಮುಲ್ಕಿ, ಸವಿತಾ ಮಹರ್ಷಿಗಳ ತತ್ವ ಆದರ್ಶಗಳ ಪಾಲನೆ ಕೇವಲ ಒಂದು ದಿನಕ್ಕೆ ಸೀಮಿತವಾಗದೇ ಪ್ರತಿ ನಿತ್ಯದ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಜಿಲ್ಲಾ ಕನ್ನಡ ರಾಜ್ಯೋತ್ಸವ ಸನ್ಮಾನ ಪುರಸ್ಕೃತ ಗೋವಿಂದ ಭಂಡಾರಿ ಬನ್ನಂಜೆ ಸವಿತಾ ಮಹರ್ಷಿ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಶೇಖರ ಸಾಲಿಯಾನ್ ಅದಿಉಡುಪಿ ಇವರನ್ನು ಸನ್ಮಾನಿಸಲಾಯಿತು. ಉಡುಪಿಜಿಲ್ಲಾ ಸವಿತಾ ಸಮಾಜದ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿ, ಮಹೇಶ್ ನಿರೂಪಿಸಿ, ಶೇಖರ್ ಸಾಲಿಯಾನ್ ವಂದಿಸಿದರು.