ಶಿಕ್ಷಣ ನಿರಾಕರಿಸಲ್ಪಟ್ಟವರ ಬಾಳಿನ ಬೆಳಕು ಸಾವಿತ್ರಿ ಬಾಯಿ ಫುಲೆ: ಡಾ. ಮಹೇಶ್‍ ಕುಮಾರ್

KannadaprabhaNewsNetwork |  
Published : Jan 06, 2026, 03:15 AM IST
05ಪುಲೆ | Kannada Prabha

ಸಾರಾಂಶ

ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸಾವಿತ್ರಿಬಾಯಿ ಫುಲೆಯವರ ಜನ್ಮದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ ಆಯೋಜಿಸಲಾಗಿತ್ತು.

ಉಡುಪಿ: ಸಾಮಾಜಿಕವಾಗಿ ಅರಿವಿನ ಬೆಳಕನ್ನೇ ನಿರಾಕರಿಸಲ್ಪಟ್ಟ ಸಮುದಾಯದಲ್ಲಿ ಶಿಕ್ಷಣ ಮೂಲಕ ಅರಿವಿನ ಬೆಳಕನ್ನು ಮೂಡಿಸಿದಂತಹ ಭಾರತದ ಮೊಟ್ಟಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ. ಮಹಿಳೆಯರ, ದೀನ ದಲಿತರ ಬದುಕಿನ ಸುಧಾರಣೆಗಾಗಿ ಅವರು ನಡೆಸಿದ ಹೋರಾಟದ ಬದುಕಿನಿಂದ ಕ್ರಾಂತಿಕಾರಿ ಭಾರತದ ಸಮಾಜ ಸುಧಾರಕಿಯಾಗಿ, ಕ್ರಾಂತಿ ಜ್ಯೋತಿಯಾಗಿ ಗುರುತಿಸಿಕೊಂಡವರು. ತಮ್ಮ ಜೀವಿತದುದ್ದಕ್ಕೂ ಲಿಂಗ ರಾಜಕಾರಣ, ಜಾತಿ ರಾಜಕಾರಣದ ವಿರುದ್ಧ ಹೋರಾಡಿ ಶಿಕ್ಷಣ ಮುಖೇನ ಮಹಿಳೆಯರ ಸಬಲೀಕರಣಕ್ಕಾಗಿ ಶ್ರಮಿಸಿದ ಜ್ಯೋತಿಬಾಯಿ ಫುಲೆಯವರ ಸರಳ ಸಾತ್ವಿಕ ಬದುಕು ಎಲ್ಲರಿಗೂ ಅನುಕರಣಿಯವಾದದ್ದು ಎಂದು ಇತಿಹಾಸ ಉಪನ್ಯಾಸಕರಾದ ಡಾ. ಮಹೇಶ್‍ ಕುಮಾರ್ ಕೆ.ಇ ಹೇಳಿದರು.ಅವರ ಇಲ್ಲಿನ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಕನ್ನಡ ವಿಭಾಗದ ಆಶ್ರಯಲ್ಲಿ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಸಾವಿತ್ರಿಬಾಯಿ ಫುಲೆಯವರ ಜನ್ಮದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಸಾವಿತ್ರಿಬಾಯಿ ಫುಲೆಯವರ ಸಮಕಾಲೀನರಾಗಿದ್ದ ಭಾರತದ ಮೊಟ್ಟ ಮೊದಲ ಮುಸ್ಲಿಂ ಶಿಕ್ಷಕಿ ಫಾತಿಮ ಶೇಖ್ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಗೌರವಿಸಲಾಯಿತು.ಕನ್ನಡ ವಿಭಾಗದ ವಿದ್ಯಾರ್ಥಿಗಳಾದ ಕೀರ್ತನಾ ಶೆಟ್ಟಿ, ಶಿವಾನಿ ಶೆಟ್ಟಿ, ಮಂಜು, ಪ್ರವೀಣ್ ಸಾವಿತ್ರಿಬಾಯಿ ಫುಲೆಯವರ ಕುರಿತು ಮಾತನಾಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವಕರ ವಹಿಸಿದ್ದರು.

ಶೈಕ್ಷಣಿಕ ಸಲಹೆಗಾರ ಡಾ. ಶ್ರೀಧರ್‌ ಭಟ್‌, ಐ.ಕ್ಯೂ.ಎ.ಸಿ ಸಂಚಾಲಕ ಡಾ. ವಿಷ್ಣುಮೂರ್ತಿ ಪ್ರಭು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸಂದೇಶ್‌ ಎಂ.ವಿ, ಉಪನ್ಯಾಸಕರಾದ ಶರಿತಾ, ಭಾರತಿ, ಬಾಬು ಮುಂತಾದವರು ಉಪಸ್ಥಿತರಿದ್ದರು. ಅನುಷಾ ಮತ್ತು ಬಳಗ ಪ್ರಾರ್ಥಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ರತ್ನಮಾಲಾ ಸ್ವಾಗತಿಸಿ ಪ್ರಸ್ತಾವನೆಗೈದರು. ಜ್ಯೋತಿ ಎಂ. ವಂದಿಸಿದರು. ಅರ್ಚನಾ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ