ಹೆಣ್ಣು ಮಕ್ಕಳಿಗೂ ಶಿಕ್ಷಣ ಅವಶ್ಯವೆಂದು ತೋರಿದ ಧೀರ ಮಹಿಳೆ ಸಾವಿತ್ರಿಬಾಯಿ: ಸುನಿತಾ ಕಿರಣ್

KannadaprabhaNewsNetwork | Published : Feb 2, 2024 1:01 AM

ಸಾರಾಂಶ

ಲಕ್ಕವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ. ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆಯವರ ಜಯಂತಿಯಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್‌ ಮಹಿಳಾ ಘಟಕದ ಅಧ್ಯಕ್ಷೆ ಸುನಿತಾ ಕಿರಣ್ ಮೂಡನಂಬಿಕೆಗಳ ವಿರುದ್ಧ ಹೋರಾಡಿ ಹೆಣ್ಣು ಮಕ್ಕಳಿಗೂ ಶಿಕ್ಷಣ ಅವಶ್ಯವೆಂದು ತೋರಿಸಿಕೊಟ್ಟಂತಹ ಧೀರ ಮಹಿಳೆ ಸಾವಿತ್ರಿ ಬಾಯಿ ಫುಲೆ ಎಂದು ಸ್ಮರಿಸಿದರು.

ಕನ್ನಡಪ್ರಭ ವಾರ್ತೆ, ತರೀಕೆರೆ

ಮೂಡನಂಬಿಕೆಗಳ ವಿರುದ್ಧ ಹೋರಾಡಿ ಹೆಣ್ಣು ಮಕ್ಕಳಿಗೂ ಶಿಕ್ಷಣ ಅವಶ್ಯವೆಂದು ತೋರಿಸಿಕೊಟ್ಟಂತಹ ಧೀರ ಮಹಿಳೆ ಸಾವಿತ್ರಿ ಬಾಯಿ ಫುಲೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಮಹಿಳಾ ಘಟಕದ ಅಧ್ಯಕ್ಷೆ ಸುನಿತಾ ಕಿರಣ್ ಹೇಳಿದರು.

ಲಕ್ಕವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ. ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆಯವರ ಜಯಂತಿಯಲ್ಲಿ ಮಾತನಾಡಿದರು. ಸಾವಿತ್ರಿಬಾಯಿ ಫುಲೆ ಹೆಣ್ಣು ಮಕ್ಕಳು ಮನೆಯಿಂದ ಹೊರಬರುವುದೇ ಮಹಾಪರಾಧ ಎಂದು ಭಾವಿಸುತ್ತಿದ್ದ ಕಾಲದಲ್ಲಿ, ಚಿಕ್ಕ ವಯಸ್ಸಿನಲ್ಲಿ ವಿವಾಹವಾಗಿ ಗಂಡನ ಮನೆಗೆ ಬಂದ ನಂತರ ತನ್ನ ಪತಿಯಿಂದಲೇ ಶಿಕ್ಷಣ ಪಡೆದು 1848ರಲ್ಲಿ ಶಿಕ್ಷಕಿಯಾಗಿ ಕ್ರಾಂತಿ ಮಾಡಿದರು.

ಮಹಿಳೆಯರಿಗಾಗಿ ಶಾಲೆ ಪ್ರಾರಂಭಿಸಿದರು. ಅಂತಹ ಮಹನೀಯರ ಸ್ಮರಣಾರ್ಥ ಉತ್ತಮ ಶಿಕ್ಷಕಿಯನ್ನು ಗುರುತಿಸಿ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಮಹಿಳಾ ಘಟಕದಿಂದ ಲಕ್ಕವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಉಮಾ ರಮೇಶ್‌ರನ್ನು ಸನ್ಮಾನಿಸುತ್ತಿರುವುದು ಸಂತಸದ ವಿಚಾರ. ಅವರು ಸಾವಿತ್ರಿ ಬಾಯಿ ಫುಲೆ ಅವರಂತೆ ಕೆಲಸ ಮಾಡಿ ಹೆಸರು ಮತ್ತು ಖ್ಯಾತಿ ಹೊಂದಲಿ ಎಂದು ಆಶಿಸಿದರು.

ಸನ್ಮಾನಿತರಾದ ಮುಖ್ಯ ಶಿಕ್ಷಕಿ ಉಮಾ ರಮೇಶ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನವರು ನಮ್ಮ ಶಾಲೆಗೆ ಬಂದು ನನ್ನನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಅತೀವ ಸಂತೋಷವನ್ನುಂಟು ಮಾಡಿದೆ ಎಂದು ತಿಳಿಸಿದರು.

ಶಾಲೆ ಮತ್ತೋರ್ವ ಶಿಕ್ಷಕ ಆರ್ ನಾಗೇಶ್ ಮಾತನಾಡಿ ಕನ್ನಡಕ್ಕಾಗಿ ಎಲ್ಲರೂ ಸೇರಿ ಕೆಲಸ ಮಾಡೋಣ ಎಂದು

ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್‌ ಮಹಿಳಾ ಘಟಕದ ಕಾರ್ಯದರ್ಶಿ ಲತಾ ಗೋಪಾಲಕೃಷ್ಣ , ಲಕ್ಕವಳ್ಳಿಯ ಶಾರದಾ ಭಜನಾ ಮಂಡಳಿ ಅಧ್ಯಕ್ಷೆ ಸಂಧ್ಯಾ ದತ್ತಾತ್ರೇಯ, ಶಾಲೆಯ ಶಿಕ್ಷಕಿ ನಾಗರತ್ನ ಉಪಸ್ಥಿತರಿದ್ದರು,1ಕೆಟಿಆರ್.ಕೆ.2ಃ

ತರೀಕೆರೆ ಸಮೀಪದ ಲಕ್ಕವಳ್ಳಿಯಲ್ಲಿ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಜಯಂತಿಯಲ್ಲಿ ಶಾಲೆ ಮುಖ್ಯ ಶಿಕ್ಷಕಿ ಉಮಾ ರಮೇಶ್ ಅವರನ್ನು ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಸುನಿತಾ ಕಿರಣ್ ಸನ್ಮಾನಿಸಿದರು, ಕಸಾಪ ಮಹಿಳಾ ಘಟಕದ ಕಾರ್ಯದರ್ಶಿ ಲತಾ ಗೋಪಾಲಕೃಷ್ಣ, ಶಿಕ್ಷಕ ಆರ್.ನಾಗೇಶ್ ಮತ್ತಿತರರು ಇದ್ದಾರೆ.

Share this article