- ಲಕ್ಷ್ಮೇಶ್ವರದಲ್ಲಿ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗ ಅಮೃತ ಮಹೋತ್ಸವ - - - ಕನ್ನಡಪ್ರಭ ವಾರ್ತೆ ದಾವಣಗೆರೆ/ಲಕ್ಷ್ಮೀಶ್ವರ
ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಭಾನುವಾರ ನಡೆದ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗದ ಅಮೃತ ಮಹೋತ್ಸವ ಹಾಗೂ ಪ್ರೌಢಶಾಲೆ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಮಹಿಳೆಯರ ಶಿಕ್ಷಣದ ಬಗ್ಗೆ ಸ್ವಾತಂತ್ರ‍್ಯಪೂರ್ವದಲ್ಲೇ ಸಾವಿತ್ರಿ ಬಾಯಿ ಫುಲೆ ಅವರು ದೊಡ್ಡ ಚಳವಳಿಯನ್ನೇ ಮಾಡಿದ್ದರು. ಅದೇ ರೀತಿ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗದವರು ಮಹಿಳೆಯರೇ ಸೇರಿ ಶಿಕ್ಷಣ ಸಂಸ್ಥೆ ನಡೆಸುತ್ತಿರುವುದು ಹಾಗೂ ಶಿಕ್ಷಣ ದಾಸೋಹವನ್ನು ಮೂರು ತಲೆಮಾರಿನಿಂದ ಮಾಡುತ್ತಿರುವುದು ಶ್ಲಾಘನೀಯ ಎಂದರು.ಸಂವಿಧಾನದ ಅರಿವು ಮೂಡಿಸುವ ಕೆವೈಸಿ ಅಭಿಯಾನವನ್ನು ದಾವಣಗೆರೆ ಜಿಲ್ಲೆಯಲ್ಲಿ ಮುಂಬರುವ ದಿನದಲ್ಲಿ ಕೈಗೊಳ್ಳಲಿದ್ದೇವೆ. ನಮ್ಮ ಸಂವಿಧಾನದಲ್ಲಿ ಎಲ್ಲಾ ರೀತಿಯ ಹಕ್ಕುಗಳನ್ನು ನೀಡಲಾಗಿದೆ. ದಾವಣಗೆರೆ ಕ್ಷೇತ್ರದ ಪ್ರಥಮ ಮಹಿಳಾ ಸಂಸದೆಯಾಗಿ ನನ್ನ ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡಲು ಹೆಮ್ಮೆಯಾಗುತ್ತದೆ ಎಂದು ತಿಳಿಸಿದರು.
- - -
-19ಕೆಡಿವಿಜಿ36:ಲಕ್ಷ್ಮೇಶ್ವರದಲ್ಲಿ ನಡೆದ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗದ ಅಮೃತ ಮಹೋತ್ಸವ ಹಾಗೂ ಪ್ರೌಢಶಾಲೆ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ದಾವಣಗೆರೆ ಸಂಸದೆ ಡಾ.ಪ್ರಭಾ ಅವರು ರಂಭಾಪುರಿ ಶ್ರೀಗಳಿಂದ ಆಶೀರ್ವಾದ ಪಡೆದರು.