ಎಸ್ಸಿ, ಎಸ್ಟಿ ದೌರ್ಜನ್ಯ ಕಾಯ್ದೆ ದುರ್ಬಲವಾಗುತ್ತಿದೆ: ಡಿವೈಎಸ್ಪಿ ಕೃಷ್ಣಪ್ಪ

KannadaprabhaNewsNetwork | Published : Dec 9, 2024 12:46 AM

ಸಾರಾಂಶ

ಪರಿಶಿಷ್ಟರ ರಕ್ಷಣೆಗಾಗಿ ರಚಿಸಲಾದ ಕಾಯ್ದೆಯನ್ನು ಭಾದಿತರು ದೌರ್ಜನ್ಯ ಎಸಗಿದವರ ಜೊತೆ ವಿವಿಧ ಕಾರಣಗಳಿಗೆ ರಾಜಿಸಂಧಾನ ಮಾಡಿಕೊಳ್ಳುವ ಮೂಲಕ ಕಾಯ್ದೆಯನ್ನು ದುರ್ಬಲಗೊಳಿಸುತ್ತಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯಗಳು ಮತ್ತು ದ್ವೇಷದ ಅಪರಾಧಗಳನ್ನು ತಡೆಗಟ್ಟಲು ಕಾಯ್ದೆ ಜಾರಿಯಲ್ಲಿದೆ.

ಕನ್ನಡಪ್ರಭ ವಾರ್ತೆ ಹಲಗೂರು

ಪರಿಶಿಷ್ಟರ ರಕ್ಷಣೆಗಾಗಿ ರಚಿಸಲಾದ ಕಾಯ್ದೆಯನ್ನು ಭಾದಿತರು ದೌರ್ಜನ್ಯ ಎಸಗಿದವರ ಜೊತೆ ವಿವಿಧ ಕಾರಣಗಳಿಗೆ ರಾಜಿಸಂಧಾನ ಮಾಡಿಕೊಳ್ಳುವ ಮೂಲಕ ಕಾಯ್ದೆಯನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ಮಳವಳ್ಳಿ ವಿಭಾಗದ ಡಿವೈಎಸ್ಪಿ ಕೃಷ್ಣಪ್ಪ ಬೇಸರ ವ್ಯಕ್ತಪಡಿಸಿದರು.

ಹಾಡ್ಲಿ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ಮಳವಳ್ಳಿ ಮತ್ತು ಹೊಂಬೆಳಕು ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧಕ ಕಾಯ್ದೆಯ ಬಗ್ಗೆ ಅರಿವು ಕಾರ್ಯಾಗಾರದಲ್ಲಿ ಮಾತನಾಡಿದರು.

ವಕೀಲ ಎಸ್.ಟಿ.ಶಿವಪ್ಪ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯಗಳು ಮತ್ತು ದ್ವೇಷದ ಅಪರಾಧಗಳನ್ನು ತಡೆಗಟ್ಟಲು ಕಾಯ್ದೆ ಜಾರಿಯಲ್ಲಿದೆ. ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಲು ಮುಂದಾಗಬೇಕು ಎಂದರು.

ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಕಾಂತ್, ಹಲಗೂರು ವೃತ್ತದ ಸಿಪಿಐ ಬಿ.ಎಸ್.ಶ್ರೀಧರ್, ಹೊಂಬೆಳಕು ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಚಲುವರಾಜು, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಯುವ ಘಟಕದ ರಾಜ್ಯಾಧ್ಯಕ್ಷ ಸಿಂಹ ಶ್ರೀನಿವಾಸ್, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಚಾಂದ್, ಹಾಡ್ಲಿ ಗ್ರಾಪಂ ಉಪಾಧ್ಯಕ್ಷೆ ಅಶ್ವಿನಿ, ಸದಸ್ಯರಾದ ಚಿಕ್ಕಣ್ಣ, ಕೋಮಲ, ಲೋಕೇಶ್, ಶಶಿಕುಮಾರ್, ಶಿವಲಿಂಗೇಗೌಡ, ಮುಖಂಡರಾದ ಸುರೇಶ್, ಡಾಬಾ ಪ್ರಕಾಶ್, ಸೇರಿದಂತೆ ಹಲವರು ಭಾಗವಹಿಸಿದ್ದರು.

ಬಸವಣ್ಣನವರ ಕುರಿತು ಹೇಳಿಕೆ ಯತ್ನಾಳ್ ಕ್ಷಮೆಯಾಚಿಸಬೇಕು: ಎಸ್.ಆನಂದ್

ಮಂಡ್ಯ: ಬಸವಣ್ಣನವರ ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡಲೇ ಸಮಾಜದ ಕ್ಷಮೆಯಾಚನೆ ಮಾಡಬೇಕು ಎಂದು ಅಖಿಲ ಭಾರತ ವೀರಶೈವಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಸ್.ಆನಂದ್ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಣ್ಣನವರು 12ನೇ ಶತಮಾನದಲ್ಲಿಯೇ ಸಮಸಮಾಜದ ನಿರ್ಮಾಣಕ್ಕೆ ಹೋರಾಡಿದ್ದಾರೆ. ಎಲ್ಲ ರಾಜಕಾರಣಿಗಳು ಅವರ ಹೆಸರು ಬಳಸಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಾರೆ. ಅಂತವರಲ್ಲಿ ಯತ್ನಾಳ್ ಕೂಡ ಒಬ್ಬರಾಗಿದ್ದಾರೆ. ಅವರ ಹೇಳಿಕೆಯಿಂದ ವ್ಯಕ್ತಿತ್ವ ಏನು ಎಂಬುದು ಬಿಂಬಿಸುತ್ತದೆ ಎಂದು ಕಿಡಿಕಾರಿದರು.

ಒಂದು ಸಮುದಾಯದವನ್ನು ಮೆಚ್ಚಿಸಲು ವಿಶ್ವಗುರು ಬಸವಣ್ಣನವರ ಬಗ್ಗೆ ಈ ರೀತಿ ಹೇಳಿಕೆ ನೀಡುವುದು ಸಮುದಾಯಕ್ಕೆ ಬೇಸರವುಂಟು ಮಾಡಿದೆ. ಯತ್ನಾಳ್ ಲಿಂಗಾಯತ ಸಮಾಜ ಹಾಗೂ ಈ ಮನುಕುಲದ ಕ್ಷಮೆಯಾಚಿಸಬೇಕು. ತಮ್ಮ ಅವಿವೇಕತನವನ್ನು ಬಹಿರಂಗವಾಗಿ ಒಪ್ಪಿಕೊಳ್ಳಬೇಕು. ಸರ್ಕಾರ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಿ ಬಂಧಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್, ಕೆ.ಆರ್.ಪೇಟೆ ತಾಲೂಕು ಅಧ್ಯಕ್ಷ ಸುಜೀಂದ್ರಕುಮಾರ್, ಪಾಂಡವಪುರ ತಾಲೂಕು ಅಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷ ಜಯಣ್ಣ, ಮಂಡ್ಯ ತಾಲೂಕು ಅಧ್ಯಕ್ಷ ಗುಳ್ಳಪ್ಪ, ಮಹದೇವಸ್ವಾಮಿ, ಹರೀಶ್ ಇದ್ದರು.

Share this article