ಹೆಣ್ಣು ಭ್ರೂಣ ಮತ್ತು ಶಿಶು ಹತ್ಯೆ ತಡೆಯುವ ನಿಟ್ಟಿನಲ್ಲಿ ಜ.24ರಂದು ‘ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ’ಯನ್ನು ಎಲ್ಲ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಪಿಂಕ್ ಲೈಟ್ ಹಾಕಿ ಆಚರಿಸಬೇಕು. ಪೂರ್ವಲಿಂಗ ಪತ್ತೆ ಮತ್ತು ಹತ್ಯೆಯನ್ನು ತಡೆಯುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಸೂಚಿಸಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಆರೋಗ್ಯ ಇಲಾಖೆಯ ಜಿಲ್ಲಾ ಸಲಹಾ ಸಮಿತಿ, ಜಿಲ್ಲಾ ಮೇಲ್ವಿಚಾರಣಾ ಮತ್ತು ತಪಾಸಣಾ ಸಮಿತಿ ಸಭೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಜ.21ರಂದು ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷೆ ಡಾ. ಅಮೃತ ಭಂಡಾರಿ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ಮಾತನಾಡಿ, ಜಿಲ್ಲೆಯಲ್ಲಿರುವ ಎಲ್ಲ ಸ್ಕ್ಯಾನಿಂಗ್ ಸಂಸ್ಥೆಗಳಿಗೆ ಮೂರು ತಿಂಗಳಿಗೊಮ್ಮೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪಿಸಿ., ಪಿ.ಎನ್.ಡಿ.ಟಿ ಕಾಯ್ದೆ ಮತ್ತು ಕಾನೂನನ್ನು ಸಮರ್ಪಕವಾಗಿ ಅನುಷ್ಠಾನ ಮಾಡದಿರುವ ಸಂಸ್ಥೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸರ್ಕಾರಿ /ಖಾಸಗಿ ಆಸ್ಪತ್ರೆಗೆ ಸ್ಕ್ಯಾನಿಂಗ್ ಮಾಡಿಸಲು ಬರುವ ಪ್ರತಿ ಗರ್ಭಿಣಿ ಮಹಿಳೆಯರು ಕಡ್ಡಾಯವಾಗಿ ತಾಯಿ ಕಾರ್ಡ್ ತೆಗೆದುಕೊಂಡು ಹೋಗಬೇಕು ಎಂದು ಹೇಳಿದರು.
ಹೆಣ್ಣು ಭ್ರೂಣ ಮತ್ತು ಶಿಶು ಹತ್ಯೆ ತಡೆಯುವ ನಿಟ್ಟಿನಲ್ಲಿ ಜ.24ರಂದು ‘ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ’ಯನ್ನು ಎಲ್ಲ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಪಿಂಕ್ ಲೈಟ್ ಹಾಕಿ ಆಚರಿಸಬೇಕು. ಪೂರ್ವಲಿಂಗ ಪತ್ತೆ ಮತ್ತು ಹತ್ಯೆಯನ್ನು ತಡೆಯುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಸೂಚಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ದೀಪಾ ಪ್ರಭು ಕಾರ್ಯಸೂಚಿಯನ್ನು ಸಭೆಯ ಗಮನಕ್ಕೆ ತಂದರು. ಜಿಲ್ಲಾ ಸಲಹಾ ಸಮಿತಿಯ ಸದಸ್ಯರು ಮತ್ತು ಜಿಲ್ಲಾ ಮೇಲ್ವಿಚಾರಣಾ ಮತ್ತು ತಪಾಸಣಾ ಸಮಿತಿ ಸದಸ್ಯರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.