ಸ್ಕ್ಯಾನಿಂಗ್ ಸೆಂಟರ್‌ಗಳು ಪರವಾನಗಿ ನವೀಕರಣ ಮಾಡಿಕೊಳ್ಳಲಿ: ಡಾ. ಎಸ್.ಎಸ್. ನೀಲಗುಂದ

KannadaprabhaNewsNetwork |  
Published : Dec 07, 2025, 03:15 AM IST
ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಪಿ.ಸಿ ಮತ್ತು ಪಿ.ಎನ್.ಡಿ.ಟಿ, ಜಿಲ್ಲಾ ಸಲಹಾ ಸಮಿತಿ ಹಾಗೂ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ ಸಭೆ ನಡೆಯಿತು. | Kannada Prabha

ಸಾರಾಂಶ

ಎಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳು ಪಿಸಿ ಮತ್ತು ಪಿಎನ್‌ಡಿಟಿ ಕಾಯ್ದೆಯಡಿ ನಿಯಮಾನುಸಾರ ನೋಂದಣಿ ಮಾಡಿಕೊಳ್ಳಬೇಕು.

ಗದಗ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಕ್ಯಾನಿಂಗ್ ಸೆಂಟರ್‌ಗಳು ಕಡ್ಡಾಯವಾಗಿ ನಿಗದಿತ ಅವಧಿಯಲ್ಲಿ ಪರವಾನಗಿ ನವೀಕರಣ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ ತಿಳಿಸಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆದ ಪಿಸಿ ಮತ್ತು ಪಿಎನ್‌ಡಿಟಿ, ಜಿಲ್ಲಾ ಸಲಹಾ ಸಮಿತಿ ಹಾಗೂ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಮಾತನಾಡಿದರು.ಜಿಲ್ಲೆಯಲ್ಲಿ ಸರ್ಕಾರಿ ಸ್ಕ್ಯಾನಿಂಗ್ ಸೆಂಟರ್‌ಗಳು ಹಾಗೂ ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ಗಳು ಸೇರಿದಂತೆ ಒಟ್ಟಾರೆ 72 ಸ್ಕ್ಯಾನಿಂಗ್ ಸೆಂಟರ್‌ಗಳು ಕಾರ್ಯನಿರ್ವಹಿಸುತ್ತಿವೆ. ಎಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳು ಪಿಸಿ ಮತ್ತು ಪಿಎನ್‌ಡಿಟಿ ಕಾಯ್ದೆಯಡಿ ನಿಯಮಾನುಸಾರ ನೋಂದಣಿ ಮಾಡಿಕೊಳ್ಳಬೇಕು. ಸ್ಕ್ಯಾನಿಂಗ್ ಕುರಿತಾದ ಮಾರ್ಗಸೂಚಿಗಳನ್ನು ಪಾಲಿಸಿ ನಿಗದಿತ ನಮೂನೆಗಳನ್ನು ನಿರ್ವಹಿಸಬೇಕು. ನಿಗದಿತ ನಿಯಮ ಪಾಲನೆ ಹಾಗೂ ದಾಖಲಾತಿಗಳನ್ನು ನಿರ್ವಹಿಸದ ಆರೋಗ್ಯ ಸಂಸ್ಥೆಗಳನ್ನು ಮುಚ್ಚಿಸಲು ಅಥವಾ ಸ್ಥಗಿತಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ವೈ.ಕೆ. ಭಜಂತ್ರಿ ಮಾತನಾಡಿ, ಪಿಸಿ ಮತ್ತು ಪಿಎನ್‌ಡಿಟಿ ಕಾಯ್ದೆ ಅನುಸಾರ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧಿಸಲಾಗಿದೆ. ಚಿಕ್ಕವಯಸ್ಸಿನಲ್ಲೇ ಗರ್ಭಧಾರಣೆಗೆ ಬಾಲ್ಯ ವಿವಾಹ ಪ್ರಮುಖ ಕಾರಣವಾಗಿದ್ದು, ಒಂದು ವೇಳೆ ಅಂತಹ ಪ್ರಕರಣಗಳು ಕಂಡುಬಂದಲ್ಲಿ ವೈದ್ಯರು ಸೂಕ್ತ ತನಿಖೆಗೆ ಮುಂದಾಗಬೇಕು. ಚಿಕ್ಕ ವಯಸ್ಸಿನಲ್ಲಿ ಗರ್ಭಧಾರಣೆಯು ಇದು ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಬಾಲ್ಯವಿವಾಹ ಮತ್ತು ಲೈಂಗಿಕ ಆರೋಗ್ಯದ ಬಗ್ಗೆ ಜಾಗೃತಿ ಇಲ್ಲದಿರುವುದರಿಂದ ಚಿಕ್ಕವಯಸ್ಸಿನಲ್ಲೇ ಗರ್ಭಧಾರಣೆ ಆಗುತ್ತಿವೆ. ಗರ್ಭಪಾತ ಮಾಡಲು ಆಸ್ಪತ್ರೆಗಳು ಸಮಗ್ರ ಗರ್ಭಪಾತ ಸೇವೆಗಳ ಕಾರ್ಯಕ್ರಮದಡಿ(ಎಂಟಿಪಿ) ಕಡ್ಡಾಯವಾಗಿ ನೋಂದಾಯಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲೆಯ ವಿವಿಧ ಆರೋಗ್ಯ ಸಂಸ್ಥೆಗಳ ನೋಂದಣಿ, ನವೀಕರಣ ಹಾಗೂ ಸ್ಕ್ಯಾನಿಂಗ್ ಸೆಂಟರ್ ಪ್ರಾರಂಭಿಸಲು ಹೊಸ ಮಷಿನ್ ಖರೀದಿ, ಸ್ಕ್ಯಾನ್ ಸೆಂಟರ್‌ಗೆ ಹೆಚ್ಚುವರಿಯಾಗಿ ಸ್ಕ್ಯಾನ್ ಮಷಿನ್ ಖರೀದಿಸಲು ಬಂದ ಅರ್ಜಿಗಳಿಗೆ ಅನುಮತಿ ಕುರಿತಂತೆ ಚರ್ಚಿಸಲಾಯಿತು.

ಈ ವೇಳೆ ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಎಸ್.ಜಿ. ಪಲ್ಲೇದ, ಡಾ. ಸಂತೋಷ ಹುಯಿಲಗೋಳ, ಡಾ. ವಿಶ್ವನಾಥ ಕುಲಕರ್ಣಿ, ಡಾ. ರಾಜಶೇಖರ ಪಾಟೀಲ, ಡಾ. ಶೃತಿ ಪಾಟೀಲ, ಫಕೀರಮ್ಮ ಲಕ್ಕುಂಡಿ ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆದರ್ಶ ಸಮಾಜ ನಿರ್ಮಾಣದಲ್ಲಿ ವಕೀಲರ ಪಾತ್ರ ಮಹತ್ವದ್ದು: ನ್ಯಾಯಾಧೀಶೆ ನಾಗವೇಣಿ
ಅಂಬೇಡ್ಕರ್ ಸಮಾಜ ಸುಧಾರಣೆಯ ಮಾದರಿ ಅನನ್ಯ: ಮರಿರಾಮಪ್ಪ