ಎಸ್‌ಸಿಡಿಸಿಸಿ ಬ್ಯಾಂಕ್: ರಾಜೇಂದ್ರ ಕುಮಾರ್‌ ಸೇರಿ 16 ಮಂದಿ ಅವಿರೋಧ ಆಯ್ಕೆ

KannadaprabhaNewsNetwork |  
Published : Mar 06, 2024, 02:22 AM IST
ಅವಿರೋಧವಾಗಿ ಆಯ್ಕೆಯಾದ ಡಾ.ಎಂ.ಎನ್‌. ರಾಜೇಂದ್ರ ಕುಮಾರ್‌ ಅವರನ್ನು ಅಭಿನಂದಿಸುತ್ತಿರುವುದು. | Kannada Prabha

ಸಾರಾಂಶ

ಎಲ್ಲ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಪ್ರತಿನಿಧಿಗಳ ಕ್ಷೇತ್ರದಿಂದ 13, ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳ ಕ್ಷೇತ್ರದಿಂದ 1, ಪಟ್ಟಣ ಸಹಕಾರ ಬ್ಯಾಂಕುಗಳ ಮತ್ತು ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ 1 ಹಾಗೂ ಇತರ ಎಲ್ಲ ಸಹಕಾರ ಸಂಘಗಳ ಕ್ಷೇತ್ರದಿಂದ ಒಬ್ಬರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್)ನ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಎಲ್ಲ 16 ನಿರ್ದೇಶಕರ ಸ್ಥಾನಕ್ಕೆ ಸಹಕಾರ ಚುನಾವಣಾ ಆಯೋಗ ನಡೆಸಿದ ಚುನಾವಣೆಯಲ್ಲಿ ಎಂ.ಎನ್. ರಾಜೇಂದ್ರ ಕುಮಾರ್ ನೇತೃತ್ವದ ಎಲ್ಲ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಎಲ್ಲ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಪ್ರತಿನಿಧಿಗಳ ಕ್ಷೇತ್ರದಿಂದ 13, ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳ ಕ್ಷೇತ್ರದಿಂದ 1, ಪಟ್ಟಣ ಸಹಕಾರ ಬ್ಯಾಂಕುಗಳ ಮತ್ತು ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ 1 ಹಾಗೂ ಇತರ ಎಲ್ಲ ಸಹಕಾರ ಸಂಘಗಳ ಕ್ಷೇತ್ರದಿಂದ ಒಬ್ಬರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಆಯ್ಕೆಯಾದವರ ವಿವರ: ಮಂಗಳೂರು ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಎಂ.ಎನ್. ರಾಜೇಂದ್ರ ಕುಮಾರ್, ವಿನಯ ಕುಮಾರ್ ಸೂರಿಂಜೆ, ಭಾಸ್ಕರ ಎಸ್. ಕೋಟ್ಯಾನ್, ಕೆ. ಹರಿಶ್ಚಂದ್ರ, ಬಂಟ್ವಾಳ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಟಿ.ಜಿ. ರಾಜಾರಾಮ ಭಟ್, ಉಡುಪಿ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ದೇವಿಪ್ರಸಾದ್ ಶೆಟ್ಟಿ, ಬಿ.ಅಶೋಕ್‌ ಕುಮಾರ್ ಶೆಟ್ಟಿ, ಪುತ್ತೂರು ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಶಶಿಕುಮಾರ್ ರೈ ಬಿ., ಕುಂದಾಪುರ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಎಸ್.ರಾಜು ಪೂಜಾರಿ, ಎಂ. ಮಹೇಶ್ ಹೆಗ್ಡೆ, ಕಾರ್ಕಳ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಎಂ. ವಾದಿರಾಜ ಶೆಟ್ಟಿ, ಬೆಳ್ತಂಗಡಿ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಕುಶಾಲಪ್ಪಗೌಡ ಪಿ., ಸುಳ್ಯ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಎಸ್.ಎನ್. ಮನ್ಮಥ, ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳ ಕ್ಷೇತ್ರದಿಂದ ಮೋನಪ್ಪ ಶೆಟ್ಟಿ ಎಕ್ಕಾರು, ಪಟ್ಟಣ ಸಹಕಾರ ಬ್ಯಾಂಕುಗಳ ಮತ್ತು ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಕೆ.ಜೈರಾಜ್ ಬಿ.ರೈ ಮತ್ತು ಇತರ ಎಲ್ಲ ಸಹಕಾರ ಸಂಘಗಳ ಕ್ಷೇತ್ರದಿಂದ ಎಸ್.ಬಿ. ಜಯರಾಮ ರೈ ಅವಿರೋಧವಾಗಿ ಆಯ್ಕೆಯಾದವರು.ಚುನಾವಣಾಧಿಕಾರಿಯಾಗಿ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತ ಹರ್ಷವರ್ಧನ ಎಸ್.ಜೆ., ಸಹಾಯಕ ಚುನಾವಣಾಧಿಕಾರಿಯಾಗಿ ಮಂಗಳೂರು ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ್‌ ಕುಮಾರ್‌ ಜೆ. ಕಾರ್ಯ ನಿರ್ವಹಿಸಿದರು.

PREV

Recommended Stories

ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!