ಮಂಗಳೂರು: ಅಂತಾರಾಷ್ಟ್ರೀಯ ಮಟ್ಟದ ಮಹಿಳಾ ಕಬಡ್ಡಿ ಆಟಗಾರ್ತಿ, ಇತ್ತೀಚೆಗೆ ಬಾಂಗ್ಲಾ ದೇಶದ ಢಾಕಾದಲ್ಲಿ ನಡೆದ ವಿಶ್ವಕಪ್ ಮಹಿಳಾ ಕಬಡ್ಡಿ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಭಾರತ ತಂಡದ ಪ್ರಮುಖ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ ಅವರನ್ನು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಸನ್ಮಾನಿಸಿದರು.
1 ಲಕ್ಷ ರು. ಹಸ್ತಾಂತರ:
ಧನಲಕ್ಷ್ಮಿ ಅವರನ್ನು ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಶಾಲು, ಫಲಪುಷ್ಪ, ಹಾರ, ಬೆಳ್ಳಿ ದೀಪ ಸ್ಮರಣಿಕೆಯೊಂದಿಗೆ 1 ಲಕ್ಷ ರು. ಮೊತ್ತದ ಚೆಕ್ ನೀಡಿ ಗೌರವಿಸಿದರು.ಸನ್ಮಾನಕ್ಕೆ ಉತ್ತರಿಸಿದ ಧನಲಕ್ಷ್ಮಿ ಪೂಜಾರಿ, ತನ್ನ ಕ್ರೀಡಾ ಸಾಧನೆಯನ್ನು ಗುರುತಿಸಿ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಸನ್ಮಾನಿರುವುದು ತುಂಬಾ ಸಂತೋಷ ತಂದಿದೆ. ಅವರ ಅಭಿಮಾನಕ್ಕೆ ನಾನು ಚಿರಋಣಿ ಎಂದರು.
ಈ ಸಂದರ್ಭ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಅಧ್ಯಕ್ಷ ರಾಜ್ ಕುಮಾರ್ ಅವರನ್ನು ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಸನ್ಮಾನಿಸಿದರು.ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಂ. ಮಹೇಶ್ ಹೆಗ್ಡೆ, ಅಶೋಕ್ ಕುಮಾರ್ ಶೆಟ್ಟಿ, ಜೈರಾಜ್ ಬಿ. ರೈ, ಸದಾಶಿವ ಉಳ್ಳಾಲ್, ಸಹಕಾರ ಸಂಘಗಳ ಉಪನಿಂಬಂಧಕ ರಮೇಶ್ ಎಚ್.ಎನ್., ಎಸ್‌ಸಿಡಿಸಿಸಿ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ನ ಟ್ರಸ್ಟಿ ಮೇಘರಾಜ್ ಆರ್. ಜೈನ್, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಸಹಕಾರ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ ರಾವ್, ಉದ್ಯಮಿ ಜಯಪ್ರಕಾಶ್ ತುಂಬೆ ಮತ್ತಿತರರು ಇದ್ದರು. ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಸ್ವಾಗತಿಸಿ, ವಂದಿಸಿದರು.