ಎಸ್ ಸಿಡಿಸಿಸಿ ಬ್ಯಾಂಕ್ ಕಲ್ಲಡ್ಕ ಶಾಖೆ ವಿನೂತನ ಸೌಲಭ್ಯದೊಂದಿಗೆ ಲೋಕಾರ್ಪಣೆ

KannadaprabhaNewsNetwork |  
Published : Jan 07, 2025, 12:31 AM IST
32 | Kannada Prabha

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಕಲ್ಲಡ್ಕ ಶಾಲೆ ಹಲವು ವಿನೂತನ ಸೌಲಭ್ಯದೊಂದಿಗೆ ಮುಖ್ಯರಸ್ತೆಯಲ್ಲಿರುವ ಕಾವೇರಿ ಸಂಕೀರ್ಣದ ನೆಲ ಅಂತಸ್ತಿಗೆ ಸೋಮವಾರ ಸ್ಥಳಾಂತರಗೊಂಡಿದ್ದು, ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಅವಿಭಜಿತ ದ.ಕ. ಜಿಲ್ಲೆಯಲ್ಲಿ ರಾಜಕೀಯ ರಹಿತವಾಗಿ ಬೆಳೆದಿರುವ ಏಕೈಕ ಬ್ಯಾಂಕ್ ಏನಾದರೂ ಇದ್ದರೆ ಅದು ಎಸ್ ಸಿಡಿಸಿಸಿ ಬ್ಯಾಂಕ್ ಮಾತ್ರ. ನಮ್ಮ ಜಿಲ್ಲೆ ಸಹಕಾರಿ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಿರುವ ಜಿಲ್ಲೆಯಾಗಿದೆ ಎಂದು ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಕಲ್ಲಡ್ಕ ಶಾಲೆ ಹಲವು ವಿನೂತನ ಸೌಲಭ್ಯದೊಂದಿಗೆ ಮುಖ್ಯರಸ್ತೆಯಲ್ಲಿರುವ ಕಾವೇರಿ ಸಂಕೀರ್ಣದ ನೆಲ ಅಂತಸ್ತಿಗೆ ಸೋಮವಾರ ಸ್ಥಳಾಂತರಗೊಂಡಿದ್ದು, ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಯಾವೊಬ್ಬ ಕೃಷಿಕ ಕೂಡಾ ಬ್ಯಾಂಕ್ ಸಾಲ ಕೊಟ್ಟಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಂಡ ಉದಾಹರಣೆಗಳಿಲ್ಲ. ನಮ್ಮ ಜಿಲ್ಲೆಯಲ್ಲಿ ಶೇ 100ರಷ್ಟು ಕೃಷಿ ಸಾಲ ಮರುಪಾವತಿಯಾಗುತ್ತಿದೆ. ಮಹಿಳೆಯರ ಸ್ವಾವಲಂಬನೆಗಾಗಿ ನಮ್ಮ ಬ್ಯಾಂಕ್ ಪ್ರಾಮಾಣಿಕ ಪ್ರಯತ್ನ ಪಡುತ್ತಿದೆ. 2025ಕ್ಕೆ ನಮ್ಮ ಸ್ವಸಹಾಯ ಗುಂಪುಗಳಿಗೆ 25 ವರ್ಷ ತುಂಬುತ್ತಿದೆ. ಈ ಸಂದರ್ಭದಲ್ಲಿ ಮತ್ತೆ ಹೊಸ ಸಮವಸ್ತ್ರವನ್ನು ಮಹಿಳೆಯರಿಗೆ ವಿತರಿಸಲಾಗುತ್ತದೆ ಎಂದು ವಿವರಿಸಿದರು.ಮಹಿಳೆಯರು ನಮ್ಮ ಬ್ಯಾಂಕ್ ನಿಂದ ಲೋನ್ ಪಡೆದು ಪುರುಷರಿಗೆ ಸರಿಸಮಾನವಾಗಿ ಬೆಳೆದಿದ್ದಾರೆ. ಆರ್ಥಿಕವಾಗಿ ಸಶಕ್ತರಾಗಿ ಸ್ವಾವಲಂಬನೆಯ ಜೀವನ ಸಾಗಿಸುತ್ತಿದ್ದಾರೆ ಎಂದರು.

ಮಾಜಿ ಶಾಸಕ ರುಕ್ಮಯ ಪೂಜಾರಿ ಮಾತಾಡಿ, ಬೆಳೆಯುತ್ತಿರುವ ಕಲ್ಲಡ್ಕದಲ್ಲಿ ಇಂತಹ ಗ್ರಾಹಕ ಸ್ನೇಹಿಯಾದ ಸುಸಜ್ಜಿತ ಬ್ಯಾಂಕ್ ನ ಅವಶ್ಯಕತೆ ಇತ್ತು. ಗ್ರಾಹಕರು ಬ್ಯಾಂಕ್ ನ ಎಲ್ಲ ಸೇವೆಯನ್ನು ಬಳಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಿ ಎಂದರು.

ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಮಾತಾಡಿ, ಕಲ್ಲಡ್ಕ ಬೆಳೆಯುತ್ತಿದೆ. 15ರಷ್ಟು ಬ್ಯಾಂಕ್, ಫೈನಾನ್ಸ್ ಗಳು ಇಲ್ಲಿವೆ ಎಂದರು.

ಶಾಖಾ ಕಟ್ಟಡದ ಮಾಲಕ ವರದರಾಯ ಪ್ರಭು, ಬ್ಯಾಂಕ್ ನಿರ್ದೇಶಕರಾದ ವಿನಯ್ ಕುಮಾರ್ ಸೂರಿಂಜೆ, ಜಯರಾಮ್ ರೈ, ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಿನಾಥ್ ಭಟ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ ಮತ್ತಿತರರಿದ್ದರು.

ಬ್ಯಾಂಕಿನ ಹಿರಿಯ ನಿರ್ದೇಶಕ ಟಿ.ಜಿ.ರಾಜಾರಾಮ್ ಭಟ್ ಸ್ವಾಗತಿಸಿದರು. ದಿನೇಶ್ ಅಮೀನ್ ನಿರೂಪಿಸಿದರು.

ನೂತನ ಶಾಖೆ ಸಂಪೂರ್ಣ ಗಣಕೀಕೃತಗೊಂಡಿದ್ದು ಆರ್‌ಟಿಜಿಎಸ್, ನೆಫ್ಟ್, ರೂಪೇ ಕಾರ್ಡ್ ಸೌಲಭ್ಯ ಹಾಗೂ ಕೋರ್ ಬ್ಯಾಂಕಿಂಗ್ ಸೌಲಭ್ಯದೊಂದಿಗೆ ಕಾರ್ಯ ನಿರ್ವಹಿಸಲಿದೆ.

PREV

Recommended Stories

ಬೆಂಗಳೂರು ನಗರವೊಂದರಲ್ಲೇ 943 ಟನ್‌ ಆಹಾರ ವ್ಯರ್ಥ: ಸಿಎಂ
ಆಳಂದ ಮತಕಳ್ಳತನ : ಸಾವಿರಾರು ಐಡಿ ಪತ್ತೆ