ಎಸ್‌ಸಿಡಿಸಿಸಿ ಬ್ಯಾಂಕ್‌ನ ಬೈಂದೂರು ಶಾಖೆಗೆ ಯೆಡ್ತರೆ ಗ್ರಾಮದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಟ್ಟಡದ ಭೂಮಿಪೂಜೆ ಕಾರ್ಯಕ್ರಮ ಶುಕ್ರವಾರ ವಿಧಿವಿಧಾನಗಳೊಂದಿಗೆ ನೆರವೇರಿತು.
ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್‌ನ ಬೈಂದೂರು ಶಾಖೆಗೆ ಯೆಡ್ತರೆ ಗ್ರಾಮದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಟ್ಟಡದ ಭೂಮಿಪೂಜೆ ಕಾರ್ಯಕ್ರಮ ಶುಕ್ರವಾರ ವಿಧಿವಿಧಾನಗಳೊಂದಿಗೆ ನೆರವೇರಿತು.ಬ್ಯಾಂಕ್‌ನ ನಿರ್ದೇಶಕ ಎಂ. ಮಹೇಶ್ ಹೆಗ್ಡೆ ಅವರು ಭೂಮಿಪೂಜೆಯನ್ನು ನೆರವೇರಿಸಿದರು. ಪುರೋಹಿತರಾದ ಕೆರೆಕಟ್ಟೆ ಸುಬ್ರಹ್ಮಣ್ಯ ಅಡಿಗ ಪೂಜಾವಿಧಿ ವಿಧಾನಗಳನ್ನು ನೆರವೇರಿಸಿದರು.
ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ರಾಜು ಪೂಜಾರಿ, ಎಸ್‌ಸಿಡಿಸಿಸಿ ಬ್ಯಾಂಕ್ ಮಹಾಪ್ರಬಂಧಕ ಯು. ಸುನೀಲ್ ಕುಮಾರ್ ಹೊಳ್ಳ, ಗುತ್ತಿಗೆದಾರ ಉದಯ ಕುಮಾರ್ ಶೆಟ್ಟಿ, ಬ್ಯಾಂಕ್‌ನ ಪ್ಯಾನೆಲ್ ಇಂಜಿನಿಯರ್ ತಾರನಾಥ ಎಚ್.ಟಿ., ಬೈಂದೂರು ಶಾಖಾ ವ್ಯವಸ್ಥಾಪಕ ಸತೀಶ್ ಎಚ್., ಬೈಂದೂರು ವಲಯ ಮೇಲ್ವಿಚಾರಕ ಶಿವರಾಮ ಪೂಜಾರಿ ಸೇರಿದಂತೆ ಬ್ಯಾಂಕ್‌ನ ಮತ್ತಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.