ಬ್ಯಾಂಕ್‌ನ ಅಧಿಕಾರಿ, ಸಿಬ್ಬಂದಿಗೆ ರಾಜ್ಯ ಮಟ್ಟದ ಕಾರ್ಯದಕ್ಷತೆ ತರಬೇತಿ ಕಾರ್ಯಕ್ರಮಕನ್ನಡಪ್ರಭ ವಾರ್ತೆ ಮಂಗಳೂರು
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಹಾಗೂ ದ.ಕ. ಜಿಲ್ಲಾ ಸಹಕಾರ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಶನಿವಾರ ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ಒಂದು ದಿನದ ರಾಜ್ಯ ಮಟ್ಟದ ಕಾರ್ಯದಕ್ಷತೆ ತರಬೇತಿ ಕಾರ್ಯಕ್ರಮ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರಕುಮಾರ್ ಅವರ ಆಶಯದಂತೆ ತರಬೇತಿ ಕಾರ್ಯಗಾರವನ್ನು ಆಯೋಜಿಸಲಾಗಿದೆ. ಬ್ಯಾಂಕಿಂಗ್, ಸಹಕಾರಿ ಇಲಾಖೆ ಸಹಿತ ಡಿಸಿಸಿ ಬ್ಯಾಂಕ್‌ಗಳಿಗೆ ಸಂಬಂಧಿಸಿದ ಕಾನೂನು ತಿದ್ದುಪಡಿಗಳು, ಸುತ್ತೋಲೆಗಳ ಬಗ್ಗೆ ತರಬೇತಿಯಲ್ಲಿ ಮಾಹಿತಿ ನೀಡಲಾಗುತ್ತಿದೆ ಎಂದರು.ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಥಮ:
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಜಯಕರ ಶೆಟ್ಟಿ ಬಿ. ಇಂದ್ರಾಳಿ ಮಾತನಾಡಿ, ಎಸ್‌ಸಿಡಿಸಿಸಿ ಬ್ಯಾಂಕ್ ರಾಜ್ಯ, ರಾಷ್ಟ್ರದಲ್ಲೇ ಗೌರವಕ್ಕೆ ಪಾತ್ರವಾದ ಮಾದರಿ ಬ್ಯಾಂಕ್ ಆಗಿದೆ. ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಬ್ಯಾಂಕ್ ಹಾಗೂ ಸಹಕಾರ ಕ್ಷೇತ್ರ ಉನ್ನತ ಸ್ಥಾನದಲ್ಲಿದೆ ಎಂದರು.
2024-25ನೇ ಸಾಲಿನಲ್ಲಿ ತಾಲೂಕು ಮಟ್ಟದ ಸಮಗ್ರ ಸಾಧನೆಗಾಗಿ 8 ಶಾಖೆಗಳ ವ್ಯವಸ್ಥಾಪಕರಿಗೆ ಗೌರವಾರ್ಪಣೆ ಮಾಡಲಾಯಿತು. ಕಾಟಿಪಳ್ಳ ಶಾಖೆಯ ಕೇಸರಿ ಶೆಟ್ಟಿ, ಸಿದ್ದಕಟ್ಟೆಯ ಜ್ಯೋತಿ ಶರ್ಮ, ಪುತ್ತೂರು ಮೈನ್‌ರೋಡ್‌ನ ಜಲಜಾ ಸುದರ್ಶನ್, ನಾರಾವಿಯ ಮಹೇಶ ಕುಮಾರ ಬಿ., ಬೆಳ್ಳಾರೆಯ ಸಂತೋಷ್ ಕುಮಾರ್ ಎಂ., ಸಾಸ್ತಾನದ ಗೀತಾ ಶೆಟ್ಟಿ, ಉಪ್ಪುಂದದ ಜಿ. ಶಂಕರ ಶೆಟ್ಟಿ, ಬಜಗೋಳಿಯ ಶಾಂತಲಾ ಅವರು ಗೌರವಾರ್ಪಣೆ ಸ್ವೀಕರಿಸಿದರು. ಜತೆಗೆ ಸಾಧನೆಗೈದ ಎಸ್‌ಸಿಡಿಸಿಸಿ ಬ್ಯಾಂಕ್‌ನ ವಿವಿಧ ಶಾಖೆ ಹಾಗೂ ಸಾಧಕ ಸಿಬ್ಬಂದಿಗೆ ಗೌರವಾರ್ಪಣೆ ಮಾಡಲಾಯಿತು.
ಸಹಕಾರಿ ಯೂನಿಯನ್ ನಿರ್ದೇಶಕ ಎಸ್.ಆರ್. ಹರೀಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ವಿ. ಹಿರೇಮಠ ಹಾಗೂ ಬ್ಯಾಂಕಿನ ಎಜಿಎಂ ರಾಜೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಫೋಟೊ