ಕನ್ನಡಪ್ರಭ ವಾರ್ತೆ ಮಂಗಳೂರು
ಎಸ್‌ಸಿಡಿಸಿಸಿ ಬ್ಯಾಂಕ್ ದೇಶದ ಡಿಸಿಸಿ ಬ್ಯಾಂಕ್‌ಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಅಗ್ರಮಾನ್ಯ ಬ್ಯಾಂಕ್ ಆಗಿದೆ. ಸಂಪೂರ್ಣ ಗಣಕೀಕೃತವಾಗಿರುವ ತನ್ನ 113 ಶಾಖೆಗಳ ಮೂಲಕ ಕಾರ್ಯನಿರ್ವಹಿಸುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಕೃಷಿ ಸಾಲ ವಿತರಣೆ ಹಾಗೂ ಮರುಪಾವತಿಯಲ್ಲಿ ಸಹಕಾರಿ ವ್ಯವಸ್ಥೆಗೆ ಮಾದರಿಯಾಗಿದೆ. ಮಾತ್ರವಲ್ಲ ನಬಾರ್ಡ್ ಯೋಜನೆಗಳನ್ನು ಅನುಷ್ಟಾನಗೊಳಿಸುವಲ್ಲೂ ಎಸ್‌ಸಿಡಿಸಿಸಿ ಬ್ಯಾಂಕ್ ಮುಂಚೂಣಿಯಲ್ಲಿರುವ ಬಗ್ಗೆ ಡಾ. ಸುರೇಂದ್ರ ಬಾಬು ಮೆಚ್ಚುಗೆ ವ್ಯಕ್ತಪಡಿಸಿದರು.ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ನಬಾರ್ಡ್ ಸಿಜಿಎಂ ಡಾ. ಸುರೇಂದ್ರ ಬಾಬು ಅವರನ್ನು ಸ್ವಾಗತಿಸಿ, ಬ್ಯಾಂಕ್ ನಡೆದು ಬಂದ ಪ್ರಗತಿಯ ಪರಿಚಯ ಮಾಡಿಕೊಟ್ಟರು.
ಸ್ವಸಹಾಯ ಸಂಘಗಳ ಕಾರ್ಯನಿರ್ವಹಣೆಯಲ್ಲೂ ಬ್ಯಾಂಕ್ ಸಮರ್ಪಕವಾಗಿ ಕಾರ್ಯನಿರ್ವಹಿಸಿ ಸುಮಾರು 35,000ಕ್ಕೂ ಹೆಚ್ಚು ನವೋದಯ ಸಂಘಗಳು ರಚನೆ ಮಾಡಿದೆ. ಸುಮಾರು 3.50 ಲಕ್ಷಕ್ಕೂ ಅಧಿಕ ಮಂದಿ ನವೋದಯ ಸ್ವಸಹಾಯ ಸಂಘದಲ್ಲಿದ್ದಾರೆ ಎಂದು ವಿವರಿಸಿದರು. ಬ್ಯಾಂಕಿಗೆ ಮೊದಲ ಬಾರಿ ಆಗಮಿಸಿದ ನಬಾರ್ಡ್ ಸಿಜಿಎಂ ಡಾ. ಸುರೇಂದ್ರ ಬಾಬು ಅವರನ್ನು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಬಾರ್ಡ್ ಡಿಡಿಎಂ ಸಂಗೀತಾ ಕರ್ತ, ಸಹಕಾರ ಸಂಘಗಳ ಉಪ ನಿಬಂಧಕ ಎಚ್.ಎನ್.ರಮೇಶ್, ನಿರ್ದೇಶಕರಾದ ಎಂ. ವಾದಿರಾಜ ಶೆಟ್ಟಿ, ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಅಶೋಕ್ ಕುಮಾರ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ. ಇದ್ದರು.-------------