ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಥಮ ಪ್ರಶಸ್ತಿ

KannadaprabhaNewsNetwork |  
Published : Aug 12, 2025, 12:30 AM ISTUpdated : Aug 12, 2025, 12:31 AM IST
ಡಾ.ಎಂ.ಎನ್‌. ರಾಜೇಂದ್ರ ಕುಮಾರ್‌. | Kannada Prabha

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್)ಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ಪ್ರಥಮ ಪ್ರಶಸ್ತಿ ಲಭಿಸಿದೆ.

ಮಂಗಳೂರು: ಸಹಕಾರಿ ರಂಗದಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಾ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್)ಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ಪ್ರಥಮ ಪ್ರಶಸ್ತಿ ಲಭಿಸಿದೆ. ಅಪೆಕ್ಸ್ ಬ್ಯಾಂಕ್ ರಾಜ್ಯದ ಅತ್ಯುತ್ತಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ಪ್ರಥಮ ಪ್ರಶಸ್ತಿಯನ್ನು ನೀಡುತ್ತಿದ್ದು, ಈ ಪ್ರತಿಷ್ಠಿತ ಪ್ರಶಸ್ತಿಗೆ ಎಸ್‌ಸಿಡಿಸಿಸಿ ಬ್ಯಾಂಕ್‌ ಬಾಜನವಾಗಿದೆ.

ಎಸ್‌ಸಿಡಿಸಿಸಿ ಬ್ಯಾಂಕ್ 2023-24ನೇ ಸಾಲಿನಲ್ಲಿ ತೋರಿದ ಸರ್ವಾಂಗೀಣ ಪ್ರಗತಿಯೊಂದಿಗೆ ಲೆಕ್ಕ ಪರಿಶೋಧನೆಯಲ್ಲಿ ‘ಎ’ ವರ್ಗವನ್ನು ಪಡೆದು ಪ್ರಥಮ ಪ್ರಶಸ್ತಿಗೆ ಆಯ್ಕೆಗೊಂಡಿದೆ. ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲ ಕೃಷಿ ಸಾಲಗಳು ಶೇ.100 ಮರುಪಾವತಿ ಕಂಡಿದ್ದು, ಇಂತಹ ಸಾಧನೆಯನ್ನು ಬ್ಯಾಂಕ್ ಕಳೆದ 30 ವರ್ಷಗಳಿಂದ ನಿರಂತರವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆ.

23 ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ: ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ 113 ಶಾಖೆಗಳ ಮೂಲಕ ಉತ್ಕೃಷ್ಟ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್‌ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್‌ ಅವರ ನಾಯಕತ್ವದಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದೆ. ಅಭಿವೃದ್ಧಿ ಪಥದಲ್ಲಿರುವ ಎಸ್‌ಸಿಡಿಸಿಸಿ ಬ್ಯಾಂಕ್ ರಾಜ್ಯದ ಅತ್ಯುತ್ತಮ ಬ್ಯಾಂಕ್ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಅಪೆಕ್ಸ್ ಬ್ಯಾಂಕ್‌ನ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಎಸ್‌ಸಿಡಿಸಿಸಿ ಬ್ಯಾಂಕ್ 23ನೇ ಬಾರಿ ತನ್ನದಾಗಿಸಿಕೊಂಡಿದೆ.

ಸೇವೆಯೇ ಮುಖ್ಯ ಧ್ಯೇಯ: ಗ್ರಾಹಕರ ಸೇವೆಯನ್ನೇ ಮುಖ್ಯ ಧ್ಯೇಯವನ್ನಾಗಿಟ್ಟುಕೊಂಡು ಯಶಸ್ಸಿನ ಪಥದಲ್ಲಿ ಮುನ್ನಡೆ ಕಾಣುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕಿಗೆ ವರದಿ ವರ್ಷದಲ್ಲಿ ಕೇಂದ್ರ ಸರ್ಕಾರದ ಅಟಲ್ ಪಿಂಚಣಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ‘ಎಪಿವೈ ರಾಷ್ಟ್ರೀಯ ಪ್ರಶಸ್ತಿ’ ನಾಲ್ಕನೇ ಬಾರಿ ಲಭಿಸಿದೆ.

ಆ.13ರಂದು ಬೆಂಗಳೂರಿನಲ್ಲಿ ನಡೆಯುವ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ.

PREV

Recommended Stories

ಆಶಾ ಕಾರ್ಯರ್ತೆಯರಿಗೆ ವೇತನ ಹೆಚ್ಚಳ
ಆಟೋ ಚಾಲಕ, ಮಂಗಳಮುಖಿಯ ನಿಸ್ವಾರ್ಥ ಸೇವೆ : ಮುರಿದು ನೇತಾಡುತ್ತಿದ್ದ ಮರದ ಕೊಂಬೆ ತೆರವು