ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ಹಾಗೂ ಚಿತ್ರದುರ್ಗ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಹಲವು ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಈ ಸಂಬಂಧ ರಾಜಕೀಯ ಪಕ್ಷಗಳ ಸಭೆ ನಡೆಸಿ ಮಾಹಿತಿ ನೀಡಲಾಯಿತು.
ಚಿತ್ರದುರ್ಗ ತಾಲೂಕಿನ ವ್ಯಾಪ್ತಿಯಲ್ಲಿ ಚಿಕ್ಕಗೊಂಡನಹಳ್ಳಿ ಗ್ರಾಮಪಂಚಾಯಿತಿ ಗೊಲ್ಲರಹಟ್ಟಿ ಕ್ಷೇತ್ರಕ್ಕೆ ಸಾಮಾನ್ಯ (ಮಹಿಳೆ), ಭರಮಸಾಗರ ಗ್ರಾಮಪಂಚಾಯಿತಿ ಭರಮಸಾಗರ-4 ಕ್ಷೇತ್ರಕ್ಕೆ ಸಾಮಾನ್ಯ (ಮಹಿಳೆ), ಹಿರೇಗುಂಟನೂರು ಗ್ರಾಮ ಪಂಚಾಯಿತಿ ಗೊಲ್ಲರಹಟ್ಟಿ ಕ್ಷೇತ್ರ ಸಾಮಾನ್ಯ, ಜಂಪಣ್ಣನಾಯಕನಕೋಟೆ ಗ್ರಾಮ ಪಂಚಾಯಿತಿ ಜಂಪಣ್ಣನಾಯಕನಕೋಟೆ-1 ಕ್ಷೇತ್ರಕ್ಕೆ ಸಾಮಾನ್ಯ(ಮಹಿಳೆ) ಹಾಗೂ ಚಿತ್ರದುರ್ಗ ನಗರಸಭೆ ವಾರ್ಡ್ ಸಂಖ್ಯೆ-15ರ ಕ್ಷೇತ್ರಕ್ಕೆ ಹಿಂದುಳಿದ ವರ್ಗ (ಎ) ಖಾಲಿ ಇರುವ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು , ಈ ಸಂಬಂಧ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಇದ್ದರು.ನಗರಸಭೆ ಚುನಾವಣೆಗೆ ನಗರಸಭೆಯಲ್ಲಿ ನಾಮಪತ್ರ ಸಲ್ಲಿಕೆ ನಡೆಯಲಿದ್ದು, ನವೆಂಬರ್ 4ರಂದು ಜಿಲ್ಲಾಧಿಕಾರಿ ಚುನಾವಣಾ ಅಧಿಸೂಚನೆ ಹೊರಡಿಸುವರು. ನ.11ನಾಮ ಪತ್ರ ಸಲ್ಲಿಕೆ ಕೊನೆಯ ದಿನ, ನ.12ರಂದು ನಾಮಪತ್ರ ಪರಿಶೀಲನೆ, ನ.14 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನ. ನ.23ರಂದು ಅವಶ್ಯಕತೆ ಇದ್ದರೆ ಚುನಾವಣೆ ನಡೆಯಲಿದೆ. ನ.26 ರಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.
ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಚುನಾವಣಾಧಿಕಾರಿ ಕಚೇರಿ ಆಗಿರುತ್ತವೆ. ನ.6ರಿಂದ ಚುನಾವಣೆ ನಾಮ ಪತ್ರ ಸಲ್ಲಿಕೆ ನಡೆಯಲಿದೆ. ನ.12 ನಾಮ ಪತ್ರ ಸಲ್ಲಿಕೆ ಕೊನೆಯ ದಿನ. ನ.13ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.15 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನ. ನ.23ರಂದು ಅವಶ್ಯಕತೆ ಇದ್ದರೆ ಚುನಾವಣೆ ನಡೆಯಲಿದೆ. ನ.26ರಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.